ವಿಶ್ವ ಕುಂದಾಪುರ ಹಬ್ಬ

ಪ್ರೆಸಕ್ಲಬ್ ನಲ್ಲಿ ಮಾತನಾಡಿದ ಅವರು,ಐದನೇ ಬಾರಿಗೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ ಆಗ್ತಿದೆ.ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ.ಸರಿಯಾಗಿ 9 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ಶಾಸಕ ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿಲಿದ್ದಾರೆ.ಆಂಕರ್-ಬೆಂಗಳೂರಿನಲ್ಲಿ ಕುಂದಾಪುರ ಕನ್ನಡ ಹಬ್ಬ ಜುಲೈ 23ರ ಭಾನುವಾರ ಆಯೋಜನೆ ಗೊಂಡಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರಿನ ಅಧ್ಯಕ್ಷ ದೀಪಕ್ ಶೆಟ್ಟಿ ಹೇಳಿದ್ದಾರೆ.ಸಂಜೆ 5 ಗಂಟೆಯ ಸಮಾರೋಪ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,ನಟ- ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಯಕ್ಷಗಾನ, ಹಾಡು, […]
ಅಡಿಕೆ ಬೆಳಗಾರರ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬೆಂಗಳೂರು: ಕರ್ನಾಟಕ ರಾಜ್ಯ ಅಡಿಕೆ ಸಹಕಾರಿ ಸಂಘಗಳ ಸಹಕಾರ ಮಹಾಮಂಡಳಿ ಶಿವಮೊಗ್ಗ ಇದರ ನೇತೃತ್ವದಲ್ಲಿ ಜು. 20 ರಂದು ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆ, ಅಡಿಕೆ ಬೆಳೆಗೆ ಬರುವ ರೋಗಗಳ ಬಗ್ಗೆ ಮತ್ತು ಅಡಿಕೆ ಬೆಳೆಯ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳ ಬಗ್ಗೆ ಚರ್ಚಿಸಲಾಯಿತು.
ಸ್ವಂತ ಮಗುವಿನ ರೀತಿ ಮರಿಯಾನೆ ಸಲಹುತ್ತಿರುವ ಕಾವಾಡಿ ದಂಪತಿ: ಬಂಡೀಪುರದಿಂದ ತಾಯಿಯಿಂದ ಬೇರ್ಪಟ್ಟಿರುವ ಮರಿಆನೆ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಾಂಪುರ ಆನೆ ಶಿಬಿರದ ಕಾವಾಡಿ ರಾಜು ಮತ್ತು ರಮ್ಯಾಗೆ ‘ವೇದಾ’ ಮೊದಲನೇ ಹೆಣ್ಣು ಮಗಳು. ಈ ವೇದಾ ಮತ್ಯಾರೂ ಅಲ್ಲ. ಕಳೆದ ಏಳು ತಿಂಗಳ ಹಿಂದೆ ನುಗು ವಲಯದ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ 7 ತಿಂಗಳ ಹೆಣ್ಣು ಆನೆಮರಿ. ಕೆಲವೇ ವರ್ಷಗಳ ಹಿಂದೆ ವಿವಾಹವಾಗಿರುವ ರಾಜು ಮತ್ತು ರಮ್ಯಾ ಅವರ ಮಡಿಲು ಸೇರಿರುವ ವೇದಾಗೆ ಮೊದಲ ಮಗುವಿನ ಪಾಲನೆಯ ಅನುಭವ ನೀಡುತ್ತಿದ್ದಾಳೆ.ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಗೆದ್ದ […]
ಕೃಷಿ ವಿವಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ

ಶಿವಮೊಗ್ಗ:ಜುಲೈ 21ರಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿಯ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿ ಡಾ.ಆರ್.ಸಿ.ಜಗದೀಶ್ ಮಾಹಿತಿ ನೀಡಿದರು. ”ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕ ವಿಶ್ವ ವಿದ್ಯಾನಿಲಯದಲ್ಲಿ ಜುಲೈ 21ರಂದು ಜರುಗಲಿರುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ. […]
ಅಗ್ನಿಶಾಮಕ ದಳ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಮಸೂದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ

ಬೆಂಗಳೂರು: ಅಪಘಾತಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರಸ್ತೆ ಸುರಕ್ಷತಾ ಪ್ರಾಧಿಕಾರ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಕಾಯ್ದೆ (ತಿದ್ದುಪಡಿ) ಮಸೂದೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಡಿಸಿದರು.ವಿಧಾನ ಪರಿಷತ್‌ನಲ್ಲಿ ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ ಬುಧವಾರ ಅಂಗೀಕಾರಗೊಂಡಿತು. ಈ ತಿದ್ದುಪಡಿ ಸಂಬಂಧ ಹಿಂದಿನ ಸರ್ಕಾರ ಕಳೆದ ಮಾರ್ಚ್ 24ರಂದು ಸುಗ್ರೀವಾಜ್ಞೆ ಹೊರಡಿಸಿತ್ತು.ಬಿಜೆಪಿ, ಜೆಡಿಎಸ್‌ನ ಕೆಲವು ಸದಸ್ಯರು ಎರಡೂ ಮಸೂದೆಗಳ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿ, ಕೆಲವು ಸಲಹೆಗಳನ್ನು […]