ಸಭಾಪತಿಗಳಿಂದ ಸದನದ ಗೌರವಕ್ಕೆ ಚ್ಯುತಿ; ಬಿಜೆಪಿ ಶಾಸಕರ ಅಮಾನತು ಸರ್ವಾಧಿಕಾರಿ ಧೋರಣೆ: ಯಶ್ ಪಾಲ್ ಸುವರ್ಣ ಆಕ್ರೋಶ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಆಯೋಜಿಸಿದ್ದ ವಿರೋಧ ಪಕ್ಷಗಳ ರಾಜಕೀಯ ಸಭೆಗೆ ಆಗಮಿಸಿದ ಪಕ್ಷಗಳ ನಾಯಕರಿಗೆ ನಿಯಮ ನಿಯಮಬಾಹಿರವಾಗಿ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡ ಸರ್ಕಾರದ ನಡೆಯನ್ನು ಖಂಡಿಸಿ, ಬಿಜೆಪಿ ಶಾಸಕರು ಸದನದಲ್ಲಿ ನಡೆಸಿದ ಪ್ರತಿಭಟನೆಯನ್ನು ನೆಪವಾಗಿಸಿ ಅಮಾನತುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆ ಬಯಲಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನರ್ಹಗೊಂಡಿರುವ ಸಂಸದ ರಾಹುಲ್ ಗಾಂಧಿ, ಜಾಮೀನಿನ ಮೇಲೆ ಹೊರಗೆ ಇರುವ ಲಾಲು ಪ್ರಸಾದ್ ಯಾದವ್ ಹಾಗೂ ತಮ್ಮ ರಾಜ್ಯಗಳಲ್ಲಿಯೇ […]
ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಹೃದಯಾಘಾತದಿಂದ ನಿಧನ

ವಿಜಯಪುರ: ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಅರುಣ್ ನಾಯಕ್ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತರು ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್:ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಇನ್ನೆರಡು ದಿನ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ ಇರಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ ಮೀ ಇಂದ 55 ಕಿ ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆಮುಂದಿನ 48 ಗಂಟೆಗಳ ಕಾಲ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, […]
ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆ

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇಲ್ಲಿನ ಸೇತುವೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಎರಡು ದೇವಾಲಯಗಳಿಗೆ ಜಲ ದಿಗ್ಬಂಧನ ಹಾಕಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪ್ರಸಿದ್ಧ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳು, ಕಳಸಾ, ಬಂಡೂರಿ, ಕೋಟ್ನಿ, ಮಂಗೇತ್ರಿ, […]
ಉತ್ತರ ಕನ್ನಡ ಜಿಲ್ಲೆಯಲ್ಲಿ 6 ವರ್ಷದಲ್ಲಿ 13 ಕನ್ನಡ ಶಾಲೆಗಳಿಗೆ ಬೀಗ

ಕಾರವಾರ (ಉತ್ತರ ಕನ್ನಡ) :ಸರ್ಕಾರಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲಿ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗಿದ್ದು, ಕಳೆದ 6 ವರ್ಷಗಳಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೇ ಬಾಗಿಲು ಮುಚ್ಚಿವೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ.ಕಾರವಾರದಲ್ಲಿ ಕನ್ನಡ ಶಾಲೆಗಳು ಅವನತಿಯತ್ತ ಸಾಗುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕೂಡ ಇಳಿಕೆಯಾಗಿದೆ. ಹೌದು, ಕಾರವಾರ ಕರ್ನಾಟಕದ ಗಡಿ ಪ್ರದೇಶವಾಗಿದ್ದು, […]