ನಾಳೆ ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಕಾವೇರಿ 1 ಹಾಗೂ 2ನೇ ಹಂತದ ನೀರು ಪೂರೈಕೆಯಾಗುವ ಪ್ರದೇಶಗಳಲ್ಲಿ ನಾಳೆ ಜುಲೈ 13 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆ.ಪಿ. ಅಗ್ರಹಾರ, ರಾಘವೇಂದ್ರ ಕಾಲೋನಿ, ಟಿಪ್ಪು ನಗರ, ಚಾಮರಾಜಪೇಟೆ, ಬ್ಯಾಂಕ್ ಕಾಲೋನಿ, ಗುರುರಾಜ್ ಲೇಔಟ್, ವಿವೇಕಾನಂದ ನಗರ, ಎನ್.ಆರ್. ಕಾಲೋನಿ, ಬನಶಂಕರಿ 1ನೇ ಹಂತ, ಶಾಂತಲಾ ನಗರ, ಶಾಂತಿ ನಗರದ ಸುತ್ತಮುತ್ತ ಸರಬರಾಜು ಸ್ಥಗಿತವಾಗಲಿದೆ ಎಂದು ತಿಳಿಸಿದ್ದಾರೆ.ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ […]

ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಕೇಂದ್ರ ಸರ್ಕಾರದ ಕೊಳಕು ರಾಜಕೀಯಕ್ಕೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ನಿಲ್ಲಿಸುವ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ, ಕೆಜಿಗೆ 34 ರೂ ನಮ್ಮಿಂದ ತಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ […]

ಜುಲೈ 12ಕ್ಕೆ ಪಿಎಸ್‌ಐ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿವಿಚಾರಣೆ

ಬೆಂಗಳೂರು:ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ ಹಿನ್ನೆಲೆಯಲ್ಲಿ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು […]

ಗ್ಯಾರಂಟಿ ಮೂಲಕ ಪ್ರತಿ ಕುಟುಂಬಕ್ಕೆ 4 ರಿಂದ 5 ಸಾವಿರ ರೂಪಾಯಿ ನೆರವಾಗಲಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಅನ್ನಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ದಿನವೇ ಬಸವ ಜಯಂತಿಯಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದನ್ನು ಈ ದಿನ ಸ್ಮರಿಸುತ್ತೇನೆ ಎಂದರುಇಂದು ಅನ್ನಭಾಗ್ಯ ಭರವಸೆ ಜಾರಿ ಮೂಲಕ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸಂದೇಶ ರವಾನೆಯಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. . ಬಳಿಕ ನಮ್ಮ ಸರ್ಕಾರ ಆ ಯೋಜನೆಯಲ್ಲಿ ಅಕ್ಕಿಯ ಪ್ರಮಾಣವನ್ನು 7 ಕೆಜಿಗೆ […]

ರಾಜ್ಯ ಸರ್ಕಾರದಿಂದ ಆದೇಶ : 9 ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 09 ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಆದೇಶ ನೀಡಿದ್ದಾರೆ