ಮಟ ಮಟ ಮಧ್ಯಾಹ್ನವೆ ಬೆಂಗಳೂರಿಗರಿಗೆ ತಂಪೆರೆದ ವರುಣದೇವ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಟ ಮಟ ಮಧ್ಯಾಹ್ನವೇ ಮಳೆ ಶುರುವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆ ಕಂಡು ಹರ್ಷ ವ್ಯಕ್ತಪಡಿಸಿದ್ದಾರೆ. ಸತತ ಎರಡನೇ ದಿನ ಸಿಲಿಕಾನ್‌ ಸಿಟಿಯಲ್ಲಿ ಮಳೆ ಸುರಿಯುತ್ತಿದ್ದು, ಬೆಂಗಳೂರು ತನ್ನ ಗತ ವೈಭವಕ್ಕೆ ಮರಳಿದೆ. ರಾಜಧಾನಿಯ ಹಲವೆಡೆ ಬಿಸಿಲ ನಡುವೆ ಮಳೆ ಸುರಿದಿದ್ದು, ಬಿಸಿಲಿನ ಝಳಕ್ಕೆ ಕಾದಿದ್ದ ನಗರಕ್ಕೆ ಮಳೆಯ ಹನಿಗಳು ತಂಪೆರೆದಿವೆ. ಬೆಂಗಳೂರಿನ ಕಂಟೋನ್ಮೆಂಟ್‌, ರಾಜಾಜಿನಗರ, ಮಲ್ಲೇಶ್ವರ, ಗಾಯತ್ರಿ ನಗರ, ವಸಂತನಗರ, ಬಾಣಸವಾಡಿ, ಎಚ್‌ಬಿಆರ್‌ ಲೇಔಟ್‌, ಕಮ್ಮನಹಳ್ಳಿ, ಲಿಂಗರಾಜಪುರ, ಬಿಟಿಎಂ ಲೇಔಟ್‌, […]

ನೇಹಾ ಹೀರೇಮಠ್ ತಂದೆಯನ್ನು ಭೇಟಿ ಮಾಡಿದ ಗೃಹ ಸಚಿವ ಅಮಿತ್ ಶಾ: ನ್ಯಾಯದ ಭರವಸೆ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕಾಂಗ್ರೆಸ್ ಕೌನ್ಸಿಲರ್ ನಿರಂಜನ್ ಹಿರೇಮಠ ಅವರನ್ನು ಭೇಟಿ ಮಾಡಿ, ಕಳೆದ ತಿಂಗಳು ಕಾಲೇಜು ಕ್ಯಾಂಪಸ್‌ನಲ್ಲಿ ಕೊಲೆಗೀಡಾದ ನೇಹಾಳಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಕೌನ್ಸಿಲರ್ ಅವರ ಪುತ್ರಿ 23 ವರ್ಷದ ನೇಹಾ ಅವರನ್ನು ಏಪ್ರಿಲ್ 18 ರಂದು ಧಾರವಾಡದ ಕಾಲೇಜಿನ ಕ್ಯಾಂಪಸ್‌ನಲ್ಲಿ ಆಕೆಯ ಮಾಜಿ ಸಹಪಾಠಿ ಫಯಾಜ್ ಖೋಡುನಾಯ್ಕ್ ಚಾಕುವಿನಿಂದ ಇರಿದು ಕೊಂದಿದ್ದ.ಈ ಘಟನೆಯು ವ್ಯಾಪಕ ಖಂಡನೆ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು. […]

ಚಾಮರಾಜನಗರ: ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ  ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ  ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿದ್ದೆವು. ವೈದ್ಯರು ಅವರನ್ನು ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ […]

ದೇಶಾದ್ಯಂತ ಎರಡನೇ ಹಂತದ ಮತದಾನ: ಕರ್ನಾಟಕದಲ್ಲಿ 69 ಪ್ರತಿಶತದಷ್ಟು ಮತದಾನ; ಶೇ.81.48 ಮತದಾನದೊಂದಿಗೆ ಮಂಡ್ಯ ಜಿಲ್ಲೆಗೆ ಮೊದಲನೆ ಸ್ಥಾನ

ಬೆಂಗಳೂರು: ಏಪ್ರಿಲ್ 26 ರಂದು 2024 ರ ಲೋಕಸಭಾ ಚುನಾವಣೆಯ (Loksabha Elections) ಎರಡನೇ ಹಂತದಲ್ಲಿ ನಡೆದ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮತದಾನವು ಮುಕ್ತಾಯಗೊಂಡಿದೆ, ರಾಜ್ಯದಲ್ಲಿ 69 ಪ್ರತಿಶತದಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗದ ತಾತ್ಕಾಲಿಕ ವರದಿ ತಿಳಿಸಿದೆ. ಸುಡು ಬಿಸಿಲನ್ನೂ ಲೆಕ್ಕಿಸದೆ ಮತದಾರರು ಅತ್ಯುತ್ಸಾಹದಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ತಮ್ಮ ಜವಾಬ್ದಾರಿ ಪೂರೈಸಿದ್ದಾರೆ. ಮತದಾನ ನಡೆದ 14 ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಅತಿ ಹೆಚ್ಚು ಶೇ.81.48ರಷ್ಟು ಮತದಾನವಾಗಿದ್ದು, ಕೋಲಾರದಲ್ಲಿ ಶೇ.78.07 ಹಾಗೂ ಬೆಂಗಳೂರು […]

ಲೋಕಸಭಾ ಚುನಾವಣೆ: ದ.ಕ ಶೇ.58.76%; ಉಡುಪಿ-ಚಿಕ್ಕಮಗಳೂರು 57.49% ಮತದಾನ; ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮತದಾನ ನಡೆದ 14 ಕ್ಷೇತ್ರಗಳ ಪೈಕಿ 3 ಗಂಟೆವರೆಗಿನ ಮಾಹಿತಿ ಪ್ರಕಾರ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಅಂದರೆ ಶೇ.58.76ರಷ್ಟು ಮತದಾನವಾಗಿದ್ದು, ಉಡುಪಿ-ಚಿಕ್ಕಮಗಳೂರಿನಲ್ಲಿ ಶೇ.57.49ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ 40.10 ಪ್ರತಿಶತ. ಬೆಂಗಳೂರು ದಕ್ಷಿಣದಲ್ಲಿ ಶೇ.40.77 ಹಾಗೂ ಬೆಂಗಳೂರು ಉತ್ತರದಲ್ಲಿ ಶೇ.41.12ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 49.62 ರಷ್ಟು ಮತದಾನವಾಗಿದೆ.