ರಾಜ್ಯದ ಗಡಿಭಾಗದ ವಿದ್ಯಾರ್ಥಿಗಳಿಗೂ ಸಿಗಲಿದೆ ಫ್ರೀ ಬಸ್ ಪಾಸ್: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ಬೆಂಗಳೂರು: ರಾಜ್ಯದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿ ಕೆಲವು ವಾರಗಳೇ ಕಳೆದಿದೆ,ಇದೀಗ ರಾಜ್ಯದ ಗಡಿ ಭಾಗದ ವಿದ್ಯಾರ್ಥಿಗಳಿಗೂ ಈ ಉಚಿತ ಬಸ್ ಪಾಸ್ ಸೇವೆಯನ್ನು ವಿಸ್ತರಿಸಿ ಸರಕಾರ ಶುಭಸುದ್ದಿ ನೀಡಿದೆ.ಹೌದು ನಾಲ್ಕೂ ರಾಜ್ಯ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಉಚಿತ ಬಸ್ ಪಾಸ್’ ಯೋಜನೆಗೆ ಅಧಿಕೃತ ಆದೇಶ ಹೊರಡಿಸಿದೆ. ಜೂನ್ 11ರಂದು ಹೊರಬಿದ್ದ ಆದೇಶದಂತೆ, ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ […]

ಎಟಿಎಂ ನಲ್ಲಿ ಕ್ಯಾಶ್ ಡೆಪಾಸಿಟ್ ಮಾಡುವಾಗ ಕ್ಯಾಶ್ ಕೊಡಿ ಯುಪಿಐ ಮಾಡ್ತೇನೆ ಎಂದು ಯಾಮಾರಿಸ್ತಾರೆ! : ಶುರುವಾಗಿದೆ ಹೊಸ ಹೈಟೆಕ್ ವಂಚನೆ ಜಾಲ, ಎಚ್ಚರದಿಂದಿರಿ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೀಗ ಹೊಸ ಮಾದರಿಯ ಹೈಟೆಕ್ ವಂಚನೆ ಜಾಲವೊಂದು ಸಕ್ರಿಯವಾಗಿದ್ದು, ಎಟಿಎಂ ಕ್ಯಾಶ್ ಡೆಪಾಸಿಟ್ ಮಷೀನ್‌ಗಳ ಬಳಿ ಹಣ ಜಮೆ ಮಾಡಲು ಬರುವ ಅಮಾಯಕ ಜನರನ್ನು ಟಾರ್ಗೆಟ್ ಮಾಡಿ ಲಕ್ಷಾಂತರ ರೂಪಾಯಿ ದೋಚುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.ಮೈಸೂರು ಮಾತ್ರವಲ್ಲ, ರಾಜ್ಯದ ಎಲ್ಲಾ ಕಡೆಗಳಲ್ಲೂ ಈ ರೀತಿಯ ಮೋಸದ ಜಾಲವೊಂದು ಸಕ್ರೀಯವಾಗಿದೆಯಂತೆ. ಈ ಸುದ್ದಿ ಓದಿ, ಎಟಿಎಂ ನಲ್ಲಿ ಕ್ಯಾಶ್ ಡೆಪಾಸಿಟ್ ಮಾಡಲು ಹೋಗುವಾಗ ಜಾಗರೂಕರಾಗಿರಿ. ಏನಿದು ಹೊಸ ವಂಚನೆ ತಂತ್ರ? ವಂಚಕರು ಎಟಿಎಂ […]

ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡಿದರೆ ಕಾದಿದೆ ಕಠಿಣ ಶಿಕ್ಷೆ:ಪೊಲೀಸ್ ಮಹಾನಿರ್ದೇಶಕರ ಹೊಸ ಆದೇಶದಲ್ಲೇನಿದೆ?

ಬೆಂಗಳೂರು: ಬೇರೆಯವರ ಖಾಸಗಿ ಫೋಟೋಗಳು ಹಾಗೂ ವಿಡಿಯೋಗಳನ್ನು ಅವರ ಅನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡುವುದು ಅಥವಾ ವೈರಲ್ ಮಾಡುವವರ ವಿರುದ್ಧ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ದೃಶ್ಯಗಳನ್ನು ದುರುಪಯೋಗಪಡಿಸಿಕೊಂಡು ಬ್ಲಾಕ್‌ಮೇಲ್, ಸೆಕ್ಸ್ಟೋರ್ಷನ್, ಬೆದರಿಕೆ ಹಾಗೂ ಪ್ರತೀಕಾರದ ಉದ್ದೇಶದಿಂದ ಅಶ್ಲೀಲ ವಿಷಯಗಳನ್ನು ಪ್ರಸಾರ ಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ […]

“ಧರ್ಮಸ್ಥಳ ಪ್ರಕರಣದಲ್ಲಿ ಸುಮ್ಮನೆ ನನ್ನ ಹೆಸರನ್ನು ಎಳೆದು ತರುತ್ತಿದ್ದಾರೆ, ಹೆಣ್ಣು ಮಕ್ಕಳ ಸಾವುಗಳು ಹೇಗೆ ಸಂಭವಿಸಿದವು ಎಂದು ಪ್ರಶ್ನೆ ಮಾಡುವುದು ತಪ್ಪೇ”:ಪ್ರಕಾಶ್ ರಾಜ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ತಮ್ಮ ಹೆಸರನ್ನು ಉದ್ದೇಶಪೂರ್ವಕವಾಗಿ ತಳುಕು ಹಾಕಲಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಪ್ರಮುಖ ವ್ಯಕ್ತಿ ಎಂದು ಹೇಳಲಾಗುತ್ತಿರುವ ಚಿನ್ನಯ್ಯನೊಂದಿಗೆ ತಮ್ಮ ಯಾವುದೇ ನೇರ ಸಂಪರ್ಕ ಇಲ್ಲ ಎಂದು ಸ್ಪಷ್ಟಪಡಿಸಿದರು. “ಚಿನ್ನಯ್ಯನಿಗೆ ನೀನು ನನ್ನ ಮುಂದೆ ಹೇಳಿದ ಸತ್ಯವನ್ನು ಎಸ್‌ಐಟಿ ಮುಂದೆ ಹೋಗಿ ಹೇಳು. ಸತ್ಯ ಹೇಳಿದರೆ ಊರೇ ಕೊಂಡಾಡುತ್ತದೆ, ನಾನು ನಿನ್ನನ್ನು ತಬ್ಬಿಕೊಳ್ಳುತ್ತೇನೆ […]

ಕಾರ್ಕಳದ ಮುಳ್ಕಾಡು ಎಳ್ಳಾರೆ ಶಾಲೆಗೆ ರಾಷ್ಟ್ರಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರದ ಗರಿ, ಕರ್ನಾಟಕದಲ್ಲೇ ಇದು ಟಾಪ್ ಶಾಲೆ

ಕಾರ್ಕಳ: ಗ್ರಾಮೀಣ ಪ್ರದೇಶದಲ್ಲಿದ್ದರೂ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಚಟುವಟಿಕೆಗಳ ಮೂಲಕ ರಾಜ್ಯದ ಗಮನ ಸೆಳೆದಿರುವ ಉಡುಪಿ ಜಿಲ್ಲೆಯ ಮುಳ್ಕಾಡು ಎಳ್ಳಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರತಿಷ್ಠಿತ ಸ್ವಚ್ಛ ವಿದ್ಯಾಲಯ ಪುರಸ್ಕಾರ–2025-26ರ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೇಂದ್ರ ಸರ್ಕಾರ ಅಂತಿಮ ಪಟ್ಟಿಯನ್ನು ಪ್ರಕಟಿಸಿದ್ದು, ಶಾಲೆಯ ಈ ಸಾಧನೆ ಜಿಲ್ಲೆಯಷ್ಟೇ ಅಲ್ಲದೆ ರಾಜ್ಯಕ್ಕೂ ಹೆಮ್ಮೆ ತಂದಿದೆ. ಸ್ವಚ್ಛ ವಿದ್ಯಾಲಯ ಪುರಸ್ಕಾರ ಯೋಜನೆಯಡಿ ದೇಶದಾದ್ಯಂತ ಒಟ್ಟು 11,54,898 ಶಾಲೆಗಳು ನೋಂದಾಯಿಸಿಕೊಂಡಿದ್ದವು. ಕರ್ನಾಟಕದಿಂದ 71,369 ಶಾಲೆಗಳು […]