ಜೈನ ಸನ್ಯಾಸಿ ಹತ್ಯೆ ಪ್ರಕರದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ: ಜಿ. ಪರಮೇಶ್ವರ್

ಬೆಳಗಾವಿ: ಜಿಲ್ಲೆಯ ಆಚಾರ್ಯ ಕಾಮಕುಮಾರ ನಂದಿ ಆಶ್ರಮದ ಜೈನ ಸನ್ಯಾಸಿ ಕಾಮಕುಮಾರ ನಂದಿ ಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ಕೆಲವು ಪ್ರತಿಭಟನಾಕಾರರು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿಸುತ್ತಿದ್ದಾರೆ ಎಂದ ಅವರು, ಪ್ರಕರಣದಲ್ಲಿ ಸಿಬಿಐ ಭಾಗಿಯಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ತನಿಖಾ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಯದ ಪ್ರಶ್ನೆಯೇ ಇಲ್ಲ. ನಮ್ಮ ಪೊಲೀಸರು ಪ್ರಕರಣದಲ್ಲಿ […]
ಹಾಲಿಗೆ ಮತ್ತೆ 5 ರೂ. ಪ್ರೋತ್ಸಾಹಧನ ಹೈನುಗಾರರಿಗೆ ಸಿಹಿ ಸುದ್ದಿ

ಮೈಸೂರು:ಸಹಕಾರ ಸಚಿವ ಕೆ.ಎನ್. ರಾಜಣ್ಣ ಈ ಬಗ್ಗೆ ಮಾಹಿತಿ ನೀಡಿ, ಈಗಾಗಲೇ ಸರ್ಕಾರದಿಂದ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದ್ದು, ಹೈನುಗಾರಿಕೆ ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಲೀಟರ್ ನೀಡುವ 5 ರೂ.ಚಿಂತನೆ ಇದೆ. ಮಂಗಳವಾರ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲು ಖರೀದಿ ಮತ್ತು ಮಾರಾಟ ದರ ಕಡಿಮೆ ಇದ್ದು, ಹಾಲು ಉತ್ಪಾದಕರಿಗೆ ನೆರವಾಗಬೇಕಿದೆ. ಹೀಗಾಗಿ ಹೈನುಗಾರರು ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಹಾಲಿಗೆ […]
ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ವಿಧಿವಶ

ಹುಬ್ಬಳ್ಳಿ: ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಹೃದಯಾಘಾತದಿಂದ ನಿಧನರಾದರು. ಪುತ್ರಿಯ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ಸಿ.ಎಂ.ನಿಂಬಣ್ಣವರ್ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ.
2 ಕೆಜಿ ಟೊಮೆಟೊ ಉಚಿತವಾಗಿ ಪಡೆಯಲು ಸ್ಮಾರ್ಟ್‌ಫೋನ್ ಖರೀದಿಸಿ

ಅಶೋಕನಗರ (ಮಧ್ಯಪ್ರದೇಶ): ಪ್ರಸ್ತುತ ಒಂದು ಕೆಜಿ ಟೊಮೆಟೊ 150ರಿಂದ 200ರವರೆಗೆ ಮಾರಾಟವಾಗುತ್ತಿದೆ. ಇದರಿಂದ ಗ್ರಾಹಕರು ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಆದರೆ ಈಗ ಮಾರುಕಟ್ಟೆಗೆ ಟೊಮೆಟೊ ಆವಕ ಇಳಿಕೆ ಕಂಡಿದೆ. ಆಹಾರ ದೈತ್ಯ ಮೆಕ್‌ಡೊನಾಲ್ಡ್ ತನ್ನ ಮೆನುವಿನಿಂದ ಟೊಮೆಟೊ ಅನ್ನು ಕೈಬಿಟ್ಟಿದೆ ಎಂಬುದರ ಕುರಿತು ವರದಿಯಾಗಿದೆ.ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಮುಖಿಯಾಗಿದೆ. ಟೊಮೆಟೊ ಬೆಲೆಯಂತೂ ತುಂಬಾ ಏರಿಕೆಯಾಗಿದೆ.ಮಧ್ಯಪ್ರದೇಶದ ಅಶೋಕನಗರದ ಮೊಬೈಲ್ ಅಂಗಡಿಯವರೊಬ್ಬರು ಸ್ಮಾರ್ಟ್‌ಫೋನ್ ಖರೀದಿಸಿದರೆ, ಎರಡು ಕೆಜಿ ಟೊಮೆಟೊವನ್ನು ಉಚಿತವಾಗಿ ನೀಡುತ್ತಿದ್ದಾರೆ. ಹಬ್ಬ ಹರಿದಿನಗಳಲ್ಲಿ ಗ್ರಾಹಕರನ್ನು ಸೆಳೆಯಲು ವಿಶೇಷ ರಿಯಾಯಿತಿ […]
ಚಿಕ್ಕೋಡಿ: ನಾಪತ್ತೆಯಾದ ಜೈನ ಮುನಿ; ಹತ್ಯೆ ಸಂಬಂಧಿಸಿ ಇಬ್ಬರ ಬಂಧನ

ಚಿಕ್ಕೋಡಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಜೈನ ಸನ್ಯಾಸಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಜೈನ ಸನ್ಯಾಸಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಲಾಗಿದೆ ಎಂದು ಶನಿವಾರ ಮಾಧ್ಯಮಗಳು ವರದಿ ಮಾಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅವರ ಗುರುತು ಇನ್ನೂ ಬಹಿರಂಗಗೊಂಡಿಲ್ಲ. ಸನ್ಯಾಸಿಯು ಕಳೆದ 15 ವರ್ಷಗಳಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ […]