ಧಾರವಾಡದಲ್ಲಿ ನಿರಂತರ ಭೀಕರ ಮಳೆ ಹಿನ್ನೆಲೆ 198 ಮನೆಗಳಿಗೆ ಹಾನಿ

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ.ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ ತಾಲೂಕಿನಲ್ಲಿ 4, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 11, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 7, ಕಲಘಟಗಿ ತಾಲೂಕಿನಲ್ಲಿ 45, […]
PU Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ; ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

PU Exam: ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕೊಡುವ ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ; ಬೆಂಗಳೂರು:ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಅನುತ್ತೀರ್ಣರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಇಂದು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ.ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ […]
ಚಿಕ್ಕಮಗಳೂರಿನಲ್ಲಿ ಮುಂದುವರೆದ ಭಾರಿ ಮಳೆಯ ಅಬ್ಬರ .. ಅವಘಡಗಳಿಗೆ ಜನ ತತ್ತರ

ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ ಬೋವಿ ಕಾಲೋನಿಯಲ್ಲಿ ಗಾಳಿ ಮಳೆಗೆ ಮನೆಯ ಮಾಳಿಗೆ ಕುಸಿದಿರುವ ಘಟನೆ ನಡೆದಿದೆ. ಚಿಕ್ಕಮಗಳೂರು :ಮಳೆಯ ಅಬ್ಬರಕ್ಕೆ ಕೆಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿಯಿಂದಲೂ ರಸ್ತೆಯ ಮೇಲೆ ಹಳ್ಳದ ನೀರು ಉಕ್ಕಿ ಹರಿಯುತ್ತಿದೆ. ಮುಳ್ಳಯ್ಯನಗಿರಿ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ, ಹಳ್ಳದ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿದೆ. ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಇದರಿಂದಾಗಿ ಮಲ್ಲೇನಹಳ್ಳಿ, ಕಾಮೇನಹಳ್ಳಿ ಗ್ರಾಮಸ್ಥರು ಪರದಾಟ […]
ರಾಜ್ಯದ ಹಲವೆಡೆ ಭಾರಿ ಮಳೆ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 28 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ,ವಿಜಯನಗರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ […]
ಕೋಟದ ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌರವಾರ್ಪಣೆ ಎಂಟನೇ ಸಾಧಕ ಶಕ್ತಿ ರಾಜ್ಯದ ಪ್ರಸಿದ್ಧ ಆಯುರ್ವೇದ ವೈದ್ಯ ವೆರಿಕೋಸ್೯ ತಜ್ಞ ಡಾ. ಎಂ.ವಿ ಉರಾಳರಿಗೆ ಪಂಚವರ್ಣ ರಜತ ಗೌರವ ಕಾರ್ಯಕ್ರಮ ನಡೆಯಿತು.ಉರಾಳರ ವ್ಯಕ್ತಿತವೇ ಸಾಧಕರಿಗೆ ದಾರಿ ದೀಪ ಎಂದು ಸಾಹಿತಿ , ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ವೆರಿಕೋಸ್೯ ಎನ್ನುವ ರೋಗವನ್ನು ಗುಣಪಡಿಸುವ ಜೊತೆಗೆ ರಾಜ್ಯಾದ್ಯಂತ ತನ್ನ ಶಾಖೆಗಳನ್ನು ತೆರೆದು ಅದೆಷ್ಟೊ ಬಡ […]