ಹಾಸನ: 2.5 ಲಕ್ಷ ರೂಪಾಯಿ ಮೌಲ್ಯದ ಟೊಮೇಟೊದೊಂದಿಗೆ ಪರಾರಿಯಾದ ಕಳ್ಳರು; ರೈತ ಮಹಿಳೆಯ ಅಳಲು

ಹಾಸನ: ರೈತ ಮಹಿಳೆಯೊಬ್ಬರು ತಮ್ಮ ಜಮೀನಿನಿಂದ 2.5 ಲಕ್ಷ ರೂಪಾಯಿ ಮೌಲ್ಯದ ಟೊಮೆಟೊಗಳನ್ನು ಕಳವು ಮಾಡಿದ್ದಾರೆ ಎಂದು ಬುಧವಾರ ಆರೋಪಿಸಿದ್ದಾರೆ. ಕರ್ನಾಟಕದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದ ರೈತ ಮಹಿಳೆಯ ಕೃಷಿ ಜಮೀನಿನಲ್ಲಿ ಮಂಗಳವಾರ ರಾತ್ರಿ ಕಳ್ಳರು 50-60 ಚೀಲ ಟೊಮೇಟೊಗಳೊಂದಿಗೆ ಪರಾರಿಯಾಗಿದ್ದಾರೆ. ರೈತ ಮಹಿಳೆ ಧಾರಿಣಿ ಮತ್ತು ಅವರ ಕುಟುಂಬ ಸದಸ್ಯರು ಎರಡು ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, ಮುಂದಿನ ವಾರ ಇಳುವರಿಯನ್ನು ಮಾರುಕಟ್ಟೆಗೆ ಸಾಗಿಸಲು ಯೋಜಿಸಿದ್ದರು. ಆದರೆ ಅಷ್ಟರಲ್ಲಾಗಲೇ ಕಳ್ಳರು […]

ನಿತ್ಯಾನಂದ ಸ್ವಾಮೀಜಿಯ ಇಬ್ಬರು ಅನುಯಾಯಿಗಳಿಗೆ ಜಾಮೀನು ರಹಿತ ವಾರಂಟ್ ಜಾರಿ ಆದೇಶ

ರಾಮನಗರ: ಬಿಡದಿಯ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಅನುಯಾಯಿಗಳಿಗೆ ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ರಹಿತ ವಾರಂಟ್​ ಜಾರಿ ಮಾಡಿ ಆದೇಶ ನೀಡಿದೆ. ಈ ಪ್ರಕರಣದ 3ನೇ ಆರೋಪಿಯಾದ ಶಿವವಲ್ಲಬನೇನಿ ಹಾಗೂ 6ನೇ ಆರೋಪಿ ಜಮುನಾರಾಣಿ ಇಬ್ಬರಿಗೂ ಜಾಮೀನು ರಹಿತ ವಾರಂಟ್ ಜಾರಿ ಮಾಡಲು ನ್ಯಾಯಾಲಯ ಬುಧವಾರ ಆದೇಶಿಸಿದೆ. ಭಾರಿ ವಿವಾದಕ್ಕೆ ಕಾರಣವಾಗಿದ್ದ ಬಿಡದಿಯ ನಿತ್ಯಾನಂದ ಸ್ವಾಮೀಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಬ್ಬರ ಅನುಯಾಯಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ […]

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒಗಳ ಹುದ್ದೆಗೆ ಶೀಘ್ರ ನೇಮಕ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು :ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳಿಗೆ 6021 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5361 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ (ಪಿಡಿಒ) ಅಧಿಕಾರಿಗಳ ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಇಂದು ಭರವಸೆ ನೀಡಿದರು.ಹೈದರಾಬಾದ್ ಕರ್ನಾಟಕಕ್ಕೆ ಅಗತ್ಯವಿರುವ ಹುದ್ದೆಗಳು ಸೇರಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು […]

ಎಪಿಎಂಸಿ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿ 6 ವಿಧೇಯಕಗಳ ಮಂಡನೆ

ಬೆಂಗಳೂರು: ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ […]

ಬಿಹಾರದಲ್ಲಿ ಸಿಡಿಲು ಬಡಿದು ಒಂದೇ ದಿನ 26 ಮಂದಿ ಸಾವು

ಪಾಟ್ನಾ (ಬಿಹಾರ) :ಸಿಡಿಲು ಬಡಿದು ರೋಹ್ತಾಸ್‌ನಲ್ಲಿ 6 ಮಂದಿ ಹಾಗು ಬಕ್ಸಾರ್‌ನಲ್ಲಿ 3 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹಸುಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದ ಮಹಿಳೆ ಕೂಡ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಬಿಹಾರದ ಜನಜೀವನ ಅಸ್ತವ್ಯಸ್ತವಾಗಿದೆ. ಬಿಹಾರದ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಬರೋಬ್ಬರಿ 26 ಮಂದಿ 24 ಗಂಟೆಯೊಳಗೆ ಸಾವನ್ನಪ್ಪಿದ್ದಾರೆ.ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಜೆಹಾನಾಬಾದ್‌ನಲ್ಲಿ ಮೂವರು […]