ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪ: ಪ್ರಮೋದ್ ಮುತಾಲಿಕ್ ವಿರುದ್ದದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕ-ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ 2017 ರಲ್ಲಿ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದೆ ಎಂದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 196 ರ ಅಡಿಯಲ್ಲಿ ಅಗತ್ಯವಿರುವ ರಾಜ್ಯ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ದೂರಿನಲ್ಲಿ ಅಪರಾಧದ ಅರಿವನ್ನು ಪಡೆದಿದ್ದಾರೆ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಗಮನಿಸಿದ್ದಾರೆ. […]

ಕೇರಳದಲ್ಲಿ ತನ್ನ ವಿಸ್ತರಣೆಯನ್ನು ಸ್ಥಗಿತಗೊಳಿಸಿದ ಕರ್ನಾಟಕದ ನಂದಿನಿ; ಮಿಲ್ಮಾ ಹಾಲಿನ ಉತ್ಪನ್ನಗಳೇ ಸಾಕೆಂದ ನೆರೆರಾಜ್ಯ

ಬೆಂಗಳೂರು: ಇತ್ತೀಚೆಗೆ ಕೇರಳದಲ್ಲಿ ತನ್ನ ಕೆಲವು ಔಟ್‌ಲೆಟ್‌ಗಳನ್ನು ತೆರೆದಿರುವ ಕರ್ನಾಟಕದ ಜನಪ್ರಿಯ ಡೈರಿ ಬ್ರ್ಯಾಂಡ್ ನಂದಿನಿ, ರಾಜ್ಯದಲ್ಲಿ ತನ್ನ ವಿಸ್ತರಣೆ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ ಮತ್ತು ಸಹಕಾರಿಗಳ ಸಚಿವೆ ಜೆ ಚಿಂಚುರಾಣಿ, ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಸಿಇಒ ಅವರಿಂದ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೆಎಂಎಫ್ ನಿರ್ಧಾರವನ್ನು ಸ್ವಾಗತಿಸಿದ ಚಿಂಚುರಾಣಿ, ಕಾಂಗ್ರೆಸ್ ಗೆಲುವಿನ ನಂತರ ಕರ್ನಾಟಕದಲ್ಲಿ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಈ ಬದಲಾವಣೆಯಾಗಿದೆ ಎಂದು ಹೇಳಿರುವುದಾಗಿ ಹಿಂದುಸ್ಥಾನ್ ಟೈಮ್ಸ್ ವರದಿ […]

ಮಳೆ ಅಭಾವ : ವಿಜಯಪುರದ ಆಲಮಟ್ಟಿ ಜಲಾಶಯದಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

ವಿಜಯಪುರ: ನದಿಗೆ ಒಳಹರಿವು ಕಡಿಮೆಯಾಗಿದೆ. ಕೃಷ್ಣಾ ನದಿ ಉಗಮ ಸ್ಥಾನದ ಮಹಾರಾಷ್ಟ್ರದ ಮಹಾಬಲೇಶ್ವರ ಹಾಗೂ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾಗದೇ ಇರುವುದರಿಂದ ನದಿಗೆ ಒಳಹರಿವು ಇಳಿಕೆಯಾಗಿದೆ.ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬವಾಗಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ.ಮಳೆ ಅಭಾವದಿಂದ ವಿಜಯಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಣೆಕಟ್ಟೆಯಲ್ಲಿ (ಆಲಮಟ್ಟಿ ಜಲಾಶಯ) ದಿನ ದಿನಕ್ಕೆ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಕೃಷ್ಣಾ […]

ಮಂಡ್ಯದ ಮಳವಳ್ಳಿ ತಾಲೂಕಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಪಡುಬಿದ್ರಿಯ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭೇಟಿ

ಪಡುಬಿದ್ರಿ :ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಿಟ್ಟಕೊಪ್ಪಲು ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ನಿಯೋಗ ಇಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗ ಭೇಟಿ ನೀಡಿದರು. ಈ  ಸಂದರ್ಭ ಮಾತನಾಡಿದ ಮಳವಳ್ಳಿ ತಾಲೂಕಿನ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಚ್ ಬಿ ಬಸವೇಶ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ವ್ಯವಸಾಯಿಕ ಸೊಸೈಟಿಗಳು ಉತ್ತಮ ಠೇವಣಾತಿಯ ಹೆಚ್ಚಳದಿಂದ ಲಾಭಾಂಶದಿಂದ ಕೂಡಿವೆ. ನಮ್ಮ […]

ಪ್ಯಾರಾಲಿಂಪಿಕ್ ವಾಲಿಬಾಲ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುವಿಗೆ ಬೇಕಾಗಿದೆ ದಾನಿಗಳ ನೆರವು

ದಾವಣಗೆರೆ: ಇಲ್ಲಿನ ಹರಿಹರ ನಿವಾಸಿ ರೂಪಾ ಎನ್ ಪ್ಯಾರಾಲಿಂಪಿಕ್ ವಾಲಿಬಾಲ್ ಕ್ರೀಡಾಪಟುವಾಗಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಸ್ಪರ್ಧೆಗಳಲ್ಲಿ ಗೆದ್ದಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಜುಲೈ 3 ರಿಂದ 8 ಕಝಾಕಿಸ್ತಾನ್ ನ ಅಲ್ಮಾಟಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾವಾಲಿ ಸಿಟ್ಟಿಂಗ್ ವಾಲಿಬಾಲ್ ಏಷ್ಯನ್ ವಲಯ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಪ್ಯಾರಾಲಿಂಪಿಯನ್‌ಗೆ ಆರ್ಥಿಕ ಸಹಾಯದ ಅಗತ್ಯವಿದೆ. ರೂಪಾ ಅವರ ಕಝಾಕಿಸ್ತಾನ್ ಪ್ರವಾಸದ ಖರ್ಚಿಗೆ ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಹಣ […]