ಜಿಮ್ ಮುಗಿಸಿ ಬಂದ ಬಾಡಿ ಬಿಲ್ಡರ್ ಕುಸಿದು ಸಾವು; ಅಂತರರಾಷ್ಟ್ರೀಯ ಸ್ಪರ್ಧೆಗೆ ಸಜ್ಜಾಗಿದ್ದ ಯುವ ಸಾಧಕನಿಗೆ ಅಂತಿಮ ವಿದಾಯ

ದಾವಣಗೆರೆ: ಜಿಮ್‌ನಲ್ಲಿ ತರಬೇತಿ ಮುಗಿಸಿಕೊಂಡು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಕೆಟಿಜೆ ನಗರದ ನಿವಾಸಿ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಜ್ಜಾಗುತ್ತಿದ್ದ 26 ವರ್ಷದ ಸುಶೀಲ್ ಕುಮಾರ್ ಮೃತಪಟ್ಟವರು. ಮಂಗಳವಾರ ರಾತ್ರಿ ಸುಮಾರು 8.30ರ ವೇಳೆಗೆ ಜಿಮ್‌ನಿಂದ ಮನೆಗೆ ಬಂದಿದ್ದ ಸುಶೀಲ್ ಕುಮಾರ್ ಅವರಿಗೆ ತಲೆ ಸುತ್ತುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅವರು […]

‘ನನ್ನ ಈ ಪ್ರಶ್ನೆಗಳಿಗೆ ಉತ್ತರ ಕೊಡಿ’ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ, ಪತ್ರದಲ್ಲೇನಿದೆ?

ಬೆಂಗಳೂರು: ರಾಜ್ಯದ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಸಂಘಟನೆಯ ಕಾರ್ಯವೈಖರಿ, ಆರ್ಥಿಕ ಮೂಲಗಳು, ಕಾನೂನಾತ್ಮಕ ಸ್ಥಾನಮಾನ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಾರ್ವಜನಿಕವಾಗಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ್ದಾರೆ. ಪತ್ರದಲ್ಲಿ, ರಾಷ್ಟ್ರೀಯ ಸ್ವಯಂಸೇಕ ಸಂಘ ದೇಶದ ಅತಿದೊಡ್ಡ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಗಳಲ್ಲಿ ಒಂದಾಗಿದ್ದು, ಅದರ ಚಟುವಟಿಕೆಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿವೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಸಂಘಟನೆ ತನ್ನ ಮೂಲಭೂತ ಮಾಹಿತಿಗಳನ್ನು ಬಹಿರಂಗಪಡಿಸಬೇಕೆಂದು ಸಚಿವರು ತಿಳಿಸಿದ್ದಾರೆ. […]

ಕರ್ನಾಟಕ-ಕೇರಳ ಮಹಿಳೆಯರಿಗೆ ಡಬಲ್ ಧಮಾಕಾ : ಮಂಗಳೂರು-ಕಾಸರಗೋಡು ಪ್ರಯಾಣವೂ ಇನ್ನು ಉಚಿತ! ಇನ್ನೂ ಏನೇನಿದೆ ಲಾಭ?

ಮಂಗಳೂರು/ಕಾಸರಗೋಡು: ಕರ್ನಾಟಕದ ‘ಶಕ್ತಿ’ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ದೊರೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಕರಾವಳಿ ಭಾಗದ ಮಹಿಳೆಯರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದ್ದು, ಕರ್ನಾಟಕದಿಂದ ಕೇರಳದ ಕಾಸರಗೋಡಿಗೆ ಸಹ ಉಚಿತವಾಗಿ ಪ್ರಯಾಣಿಸುವ ಅವಕಾಶ ಲಭಿಸಿದೆ. ಕೇರಳ ಸರ್ಕಾರದ ಬಹುನಿರೀಕ್ಷಿತ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆ ಜೂನ್ 15ರಿಂದ ಜಾರಿಗೆ ಬಂದಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಸಂಚರಿಸುವ 75 ಕೇರಳ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಿಗ್ಗೆ […]

ಸರಕಾರಿ ಕಚೇರಿಗಳಲ್ಲಿ 10 ರೂಪಾಯಿ ಲಂಚ ಕೇಳಿದ್ರೂ ಕಾಲ್ ಮಾಡಿ ಎಂದ ಸಿಎಂ ಡಿ.ಕೆ. ಶಿವಕುಮಾರ್, ಯಾರಿಗೆ ಕಾಲ್ ಮಾಡ್ಬೇಕು ಇಲ್ಲಿದೆ ನಂಬರ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಕ್ಕೆ ಲಂಚ ಕೇಳಿದರೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಬಾರದು ಎಂದು ಜನರಿಗೆ ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜಿಲ್ಲಾಡಳಿತವನ್ನು ಹೆಚ್ಚು ಜನಸ್ನೇಹಿ ಹಾಗೂ ಪಾರದರ್ಶಕಗೊಳಿಸುವಂತೆ ಸೂಚಿಸಿದರು. “ಸರ್ಕಾರಿ ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ 10 ರೂಪಾಯಿ ಲಂಚ ಕೇಳಿದರೂ ತಕ್ಷಣ ದೂರು ನೀಡಿ. ಭ್ರಷ್ಟಾಚಾರಕ್ಕೆ […]

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಲೇಬೇಕು! ಸರಕಾರ ಹೇಳೋದೇನು?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಲ್ಲಿ ನಕಲಿ ಫಲಾನುಭವಿಗಳ ಪತ್ತೆ ಮತ್ತು ಅರ್ಹರ ಮರುಪರಿಶೀಲನೆಗಾಗಿ ಹೊಸ ಅರ್ಜಿ ಪ್ರಕ್ರಿಯೆ ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಇದರಂತೆ, ಎರಡೂ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ D. K. Shivakumar ಅವರ ಸೂಚನೆಯಂತೆ, ಯೋಜನೆಗಳಲ್ಲಿನ ಅಕ್ರಮಗಳನ್ನು ತಡೆಗಟ್ಟಲು ಮತ್ತು ನೈಜ ಫಲಾನುಭವಿಗಳನ್ನು ಗುರುತಿಸಲು ಮರು ನೋಂದಣಿ ಪ್ರಕ್ರಿಯೆ ರೂಪಿಸಲಾಗುತ್ತಿದೆ ಎನ್ನಲಾಗಿದೆ. […]