ಗಗನಕ್ಕೇರಿದ ದಿನಸಿ ಹಾಗೂ ತರಕಾರಿ ಬೆಲೆ: ಗ್ರಾಹಕರೇ ಇಲ್ಲದಕ್ಕಾಗಿ ವ್ಯಾಪಾರಿಗಳು ಕಂಗಾಲು

ಮೈಸೂರು : ಮುಂಗಾರು ಮಳೆ ಕೈ ಕೊಟ್ಟಿದೆ. ರೈತರು ಹಾಕಿದ ಬಿತ್ತನೆ ಬೀಜಗಳು ಜಮೀನಿನಲ್ಲಿಯೇ ಮಳೆ ಇಲ್ಲದೆ ಒಣಗುತ್ತಿದ್ದರೆ, ಮತ್ತೊಂದು ಕಡೆ ತರಕಾರಿ ಬೆಳೆಯಲು ಮಳೆ ಇಲ್ಲದ ಕಾರಣ ತರಕಾರಿ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರಿಂದ ಹಣ್ಣು ಮತ್ತು ತರಕಾರಿಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಕಳೆದ ಒಂದು ವಾರದಿಂದ ತರಕಾರಿ ಬೆಲೆ 100ರ ಗಡಿ ದಾಟಿದೆ. ಇದರಿಂದ ವರ್ತಕರು ಹಾಗೂ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಕೈ ಕೊಟ್ಟಿದ್ದು, ಅಗತ್ಯ ವಸ್ತುಗಳಾದ ದಿನಸಿ ಹಾಗೂ ತರಕಾರಿ ಬೆಲೆಗಳು ಗಗನಕ್ಕೇರಿವೆ. ಜನಸಾಮಾನ್ಯರು […]

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ : ಹೆದ್ದಾರಿಯಲ್ಲಿ ಭೂಕುಸಿತ 6 ಸಾವು

ಶಿಮ್ಲಾ : “ಮಳೆಯಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಎರಡು ರಾಷ್ಟ್ರೀಯ ಹೆದ್ದಾರಿಗಳನ್ನು ಒಳಗೊಂಡಂತೆ 124 ರಸ್ತೆಗಳು ಹಾನಿಗೊಳಗಾಗಿವೆ. ಹಿಮಾಚಲ ಪ್ರದೇಶದಲ್ಲಿ ಜೋರು ಮಳೆ ಸುರಿಯುತ್ತಿದ್ದು ಪ್ರವಾಹದಲ್ಲಿ ಈವರೆಗೆ ಆರು ಜನರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಇದುವರೆಗೆ ಕನಿಷ್ಠ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಪ್ರವಾಸಿಗರು ಚಂಡೀಗಢ- ಮನಾಲಿ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ಸಿಲುಕಿಕೊಂಡಿದ್ದಾರೆ. ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಸ್ಥಳಗಳಲ್ಲಿ ಭೂಕುಸಿತ ಮತ್ತು ಪ್ರವಾಹ […]

ಮದ್ರಾಸ್​ ಹೈಕೋರ್ಟ್​ ನಿಂದ ಮಹತ್ವದ ತೀರ್ಪು: ಪತಿ ದುಡಿದು ಗಳಿಸಿದ ಆಸ್ತಿಯಲ್ಲಿ ಪತ್ನಿಗೆ ಸಮಾನ ಪಾಲಿದೆ

ಚೆನ್ನೈ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನ್ಯಾಯಮೂರ್ತಿ ಕೃಷ್ಣನ್ ರಾಮಸಾಮಿ ಅವರಿದ್ದ ಪೀಠ ಈ ತೀರ್ಪು ನೀಡಿದೆ ಪತಿ ತನ್ನ ದುಡಿಮೆಯ ಹಣದಲ್ಲಿ ಖರೀದಿಸಿದ ಆಸ್ತಿಯಲ್ಲಿ ಪತ್ನಿಗೂ ಸಮಾನ ಪಾಲು ಇದೆ ಎಂದು ನೀಡಿದೆ.ಪತಿ ಗಳಿಸಿದ ಆಸ್ತಿಯಲ್ಲಿ ಪತ್ನಿಯ ಪಾಲು ಮತ್ತು ನ್ಯಾಯಾಧೀಶರ ಭೇಟಿಯ ವೇಳೆ ನೀಡುವ ಉಡುಗೊರೆಗಳ ಬಗ್ಗೆ ಮದ್ರಾಸ್​ ಹೈಕೋರ್ಟ್​ ಮಹತ್ವದ ಆದೇಶ ನೀಡಿದೆ. ಪತ್ನಿ ಗೃಹಿಣಿಯಾಗಿ ಕೌಟುಂಬಿಕ ಜವಾಬ್ದಾರಿಯನ್ನು ನಿಭಾಯಿಸುವುದರಿಂದ ಪತಿಯಾದವ ಮನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಒಳಗಾಗುವುದಿಲ್ಲ. ಯಾವುದೇ ಆತಂಕವಿಲ್ಲದೆ ಮುಕ್ತವಾಗಿ, […]

ಮಹಾರಾಷ್ಟ್ರ ಪ್ರವಾಸ ಕೈಗೊಂಡ ತೆಲಂಗಾಣ ಸಿಎಂ ಕೆಸಿಆರ್

ಹೈದರಾಬಾದ್: ರಸ್ತೆ ಮಾರ್ಗವಾಗಿ ತೆರಳಿದ ಅವರ ಬೆಂಗಾವಲು ಪಡೆ 6 ಕಿ.ಮೀ.ಗೂ ಅಧಿಕವಾಗಿತ್ತು. ಸಚಿವರು, ಸಂಸದರು, ಶಾಸಕರು, ಎಂಎಲ್​ಸಿಗಳು ಸೇರಿದಂತೆ ಪಕ್ಷದ ಮುಖಂಡರ ಜತೆಗೂಡಿ ಅವರು ಸೊಲ್ಲಾಪುರಕ್ಕೆ ಭೇಟಿ ನೀಡುತ್ತಿದ್ದಾರೆ.ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ರಾವ್ ಅವರು ತಮ್ಮ ಪಕ್ಷ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯನ್ನು ವಿಸ್ತರಿಸುವ ಭಾಗವಾಗಿ ಇಂದು 600 ವಾಹನಗಳ ಬೃಹತ್​ ಬೆಂಗಾವಲು ಪಡೆಯೊಂದಿಗೆ ಮಹಾರಾಷ್ಟ್ರಕ್ಕೆ ತೆರಳಿದರು. ರಾಷ್ಟ್ರೀಯ ಪಕ್ಷ ಘೋಷಿಸಿರುವ ತೆಲಂಗಾಣ ಸಿಎಂ ಕೆಸಿಆರ್​ ಅವರು ಪಕ್ಷದ ಬಲವರ್ಧನೆಗಾಗಿ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದಾರೆ. 600 ವಾಹನಗಳ […]

ಶಾಲಾ ಮಕ್ಕಳ ಬ್ಯಾಗ್​ಗೆ ನಿರ್ದಿಷ್ಟ ತೂಕ: ನಿಗದಿಗೊಳಿಸಿದ ಸರ್ಕಾರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಮಣಭಾರದ ಶಾಲಾ ಬ್ಯಾಗ್ ದೊಡ್ಡ ಸಮಸ್ಯೆಯಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ.ವಿದ್ಯಾರ್ಥಿಗಳ ತರಗತಿಗೆ ಅನುಗುಣವಾಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಶಾಲಾ ಬ್ಯಾಗ್​ಗಳ ಭಾರವನ್ನು ನಿಗದಿಪಡಿಸಿದೆ. ಹೆಚ್ಚುವರಿ ಭಾರವನ್ನು ವಿದ್ಯಾರ್ಥಿಗಳ ಬೆನ್ನಿನಿಂದ ಕೆಳಗಿಳಿಸುತ್ತಿದೆ. ಇದು ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಕೊಂಚ ನೆಮ್ಮದಿ ತಂದಿದೆ.ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಮಣಭಾರದ ಶಾಲಾ ಬ್ಯಾಗ್ ದೊಡ್ಡ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಕೆಲ ಮಹತ್ವದ ಸೂಚನೆಗಳೊಂದಿಗೆ […]