ಎರಡು ಬಸ್ಗಳ ನಡುವೆ ಭೀಕರ ಅಪಘಾತ: 12 ಪ್ರಯಾಣಿಕರ ಸಾವು, ಹಲವರಿಗೆ ಗಂಭೀರ ಗಾಯ, ಪ್ರಧಾನಿಯಿಂದ ಪರಿಹಾರ ಘೋಷಿಣೆ

ಗಂಜಾಂ (ಒಡಿಶಾ): ಒಡಿಶಾದ ಗಂಜಾಂನಲ್ಲಿ ಭಾನುವಾರ ತಡರಾತ್ರಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದರು. 6 ಜನ ಗಂಭೀರವಾಗಿ ಗಾಯಗೊಂಡಿದ್ದರು. ಅದರಲ್ಲಿ ಮತ್ತೆ ಇಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ಗಳ ನಡುವೆ ಅಪಘಾತ ಸಂಭವಿಸಿ 12 ಜನ ಸಾವನ್ನಪ್ಪಿರುವ ಘಟನೆ ಒಡಿಶಾ ರಾಜ್ಯದ ಗಂಜಾಮ್ನಲ್ಲಿ ನಡದಿದೆ. ಮೃತರನ್ನು […]
ರೆಡ್ ಬರ್ಡ್ ಫ್ಲೈಟ್ ಟ್ರೇನಿಂಗ್ ಅಕಾಡೆಮಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ

ಕಲಬುರಗಿ : ರೆಡ್ ಬರ್ಡ್ ಫ್ಲೈಟ್ ಟ್ರೇನಿಂಗ್ ಅಕಾಡೆಮಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟೆ ಸಿರೂರು ಗ್ರಾಮದ ಬಳಿ ನಡೆದಿದೆ. ಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ; ಪೈಲಟ್, ತರಬೇತುದಾರ ಪ್ರಾಣಾಪಾಯದಿಂದ ಪಾರು ಘಟನೆಯಲ್ಲಿ ಪೈಲಟ್ ಹಾಗು ತರಬೇತುದಾರ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖಾಸಗಿ ವಿಮಾನ ತರಬೇತಿ ‘ರೆಡ್ ಬರ್ಡ್ ಫ್ಲೈಟ್ ಟ್ರೇನಿಂಗ್ […]
ಶಕ್ತಿ ಯೋಜನೆ ಪರಿಣಾಮ 1 ಕೋಟಿ ದಾಟಿದ ಸರ್ಕಾರಿ ಬಸ್ ಗಳಲ್ಲಿನ ಪ್ರಯಾಣಿಕರ ಸಂಖ್ಯೆ

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಪರಿಣಾಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ, ಈ ಹಿಂದೆ ಪ್ರತಿದಿನ 84.15 ಲಕ್ಷವಿದ್ದ ಪ್ರಯಾಣಿಕರ ಸಂಖ್ಯೆ ಈಗ 1 ಕೋಟಿ ದಾಟಿದೆ ಎಂದು ತಿಳಿದುಬಂದಿದೆ. ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಅದರಿಂದ ಸಾರ್ವಜನಿಕ ಸಾರಿಗೆ ಅಭಿವೃದ್ಧಿ ಹೊಂದಲು ನೆರವಾಗಲಿದೆ. ನಿವೃತ್ತ […]
ಇಂದು ಸಿಎಂ ಸಿದ್ದರಾಮಯ್ಯರಿಂದ ಕಾರ್ಯಕ್ರಮ ಉದ್ಘಾಟನೆ ನಾಳೆಯಿಂದ 3 ದಿನ ನೂತನ ಶಾಸಕರಿಗೆ ತರಬೇತಿ ಶಿಬಿರ

ಬೆಂಗಳೂರು: ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ಈ ತರಬೇತಿಯಲ್ಲಿ ಮಾಹಿತಿ ಒದಗಿಸಲಾಗುತ್ತದೆ. ಹೊಸ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ, ಯುವಜನರ ಆಲೋಚನೆಗಳು, ದೂರದೃಷ್ಟಿ, ಪ್ರತಿಭೆ ಬಿಂಬಿಸುವ ಉದ್ದೇಶ ಈ ಶಿಬಿರ ಆಯೋಜನೆಯ ಹಿಂದಿದೆ. ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ.16ನೇ ವಿಧಾನಸಭೆಗೆ ಆಯ್ಕೆಯಾದ 70 ಶಾಸಕರಿಗೆ ಸಂಸದೀಯ ಕಲಾಪದ ಬಗ್ಗೆ ಅರಿವು ಮೂಡಿಸಲು ಜೂ.26 ರಿಂದ 28ರ ವರೆಗೆ ಮೂರು […]
ಮಂಗಳೂರು ಪಿಲಿಕುಳ ಸಂತಾನೋತ್ಪತ್ತಿಯಲ್ಲಿ ದೇಶದಲ್ಲಿಯೇ ಟಾಪ್ 1 ಮೃಗಾಲಯ

ಮಂಗಳೂರು (ದಕ್ಷಿಣ ಕನ್ನಡ): ದೇಶದ ಅತೀ ದೊಡ್ಡ 17 ಮೃಗಾಲಯಗಳ ಪೈಕಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ಅದರಲ್ಲೂ ದೇಶದಲ್ಲಿ ಅಪರೂಪದ ಹುಲಿ, ಕಾಡು, ಶ್ವಾನ, ಕಾಳಿಂಗ, ರಿಯಾ ಜಾತಿಯ ಹಕ್ಕಿಯ ಸಂತಾನಾಭಿವೃದ್ಧಿಯಲ್ಲಿ ಪಿಲಿಕುಳ ಮೃಗಾಲಯ ಹೆಚ್ಚು ಪ್ರಸಿದ್ಧಿ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ರಾಜ್ಯ ಸರಕಾರದ […]