ಜೂ. 27ರಂದು ಕೆಂಪೇಗೌಡ ಜಯಂತಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲೂಆಚರಣೆ : ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ಕೆಂಪೇಗೌಡ ಜಯಂತಿ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಎಲ್ಲ ತಾಲ್ಲೂಕುಗಳಲ್ಲೂ ಜೂನ್ 27ರಂದು ಕೆಂಪೇಗೌಡ ಜಯಂತಿ ಆಚರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಶಸ್ತಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಬಿ.ಎಲ್.ಶಂಕರ್ ನೇತೃತ್ವದ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಜೂನ್ 27ರ ಬೆಳೆಗ್ಗೆ 9ಕ್ಕೆ ಕೆಂಪೇಗೌಡರ ನಾಲ್ಕು ಗೋಪುರಗಳ ಬಳಿ ಹಾಗೂ ಮಾಗಡಿಯಲ್ಲಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುವುದು. ಈ […]
ವಿದ್ಯುತ್ ತೆರಿಗೆಯನ್ನು ಶೇ 3ಕ್ಕಿಳಿಸವಂತೆ ಸರ್ಕಾರಕ್ಕೆ ಎಫ್ಕೆಸಿಸಿಐ ಮನವಿ

ಬೆಂಗಳೂರು:ಇದೇ ವೇಳೆ, ಇಂಧನ ಶುಲ್ಕದಲ್ಲಿ (Fuel Escalation charges) ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂಎಸ್ಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡುವಂತೆ ಒತ್ತಾಯಿಸಿದರು. ವಿದ್ಯುತ್ ತೆರಿಗೆಯನ್ನು ಶೇ 9 ರಿಂದ 3ಕ್ಕೆ ಇಳಿಸಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಎಫ್ಕೆಸಿಸಿಐ ಅಧ್ಯಕ್ಷ ಬಿ.ವಿ. ಗೋಪಾಲ ರೆಡ್ಡಿ ತಿಳಿಸಿದ್ದಾರೆ. ಕೆಇಆರ್ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರ ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್ಟಿ ಕೈಗಾರಿಕೆಗಳ […]
‘ಶಕ್ತಿ’ ಯೋಜನೆಯಿಂದ ಆಟೋಗಳ ವಹಿವಾಟುಗಳಲ್ಲಿ ಶೇ 20ರಷ್ಟು ಕುಸಿತ

ಬೆಂಗಳೂರು ನಗರದಲ್ಲಿ ಆಟೋದಲ್ಲಿ ಸಂಚಾರ ನಡೆಸುವ ಜನರಲ್ಲಿ ಹೆಚ್ಚಿನವರು ಮಹಿಳೆಯರಾಗಿದ್ದರು. ಆದರೆ ಈಗ ಉಚಿತವಾಗಿ ಸಂಚಾರ ನಡೆಸಲು ಬಿಎಂಟಿಸಿ ಬಸ್ ಇರುವ ಕಾರಣ ಮಹಿಳೆಯರು ಬಸ್ ಏರುತ್ತಿದ್ದಾರೆ. ಇದರಿಂದಾಗಿ ಆಟೋ ಚಾಲಕರಿಗೆ ಹೊಡೆತ ಬಿದ್ದಿದೆ. ಬೇಕಾಬಿಟ್ಟಿಯಾಗಿ ದರ ಹೇಳುತ್ತಿದ್ದ ಚಾಲಕರು ಈಗ ಪ್ರಯಾಣಿಕರಿಗಾಗಿ ಕಾಯುವ ಪರಿಸ್ಥಿತಿ ಬಂದಿದೆಕರೆದ ಕಡೆ ಬರುವುದಿಲ್ಲ, ಮೀಟರ್ಗಿಂತ ಹೆಚ್ಚಿನ ಹಣ ವಸೂಲಿ ಹೀಗೆ ಸದಾ ಜನರ ಆಕ್ರೋಶಕ್ಕೆ ತುತ್ತಾಗುವ ಆಟೋ ಚಾಲಕರು ಈಗ ‘ಶಕ್ತಿ’ಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೈಕ್ ಟ್ಯಾಕ್ಸಿಯಿಂದಾಗಿ ನಷ್ಟ ಅನುಭವಿಸುತ್ತಿದ್ದ […]
ಮುರುಕಲು ಗುಡಿಸಲಿನ 90ರ ವೃದ್ದೆಗೆ ಮೇ ತಿಂಗಳ ಕರೆಂಟ್ ಬಿಲ್ 1 ಲಕ್ಷ ರೂ! ತಾಂತ್ರಿಕ ದೋಷದಿಂದ ಬಿಲ್ ನಲ್ಲಿ ಗಡಿಬಿಡಿ

ಕೊಪ್ಪಳ: ಇಲ್ಲಿನ 90 ವರ್ಷದ ವೃದ್ದೆಗೆ ಮೇ ತಿಂಗಳ ತನ್ನ ವಿದ್ಯುತ್ ಬಿಲ್ ಅನ್ನು ಕಂಡು ಜೀವಮಾನದ ಆಘಾತಕ್ಕೆ ಒಳಗಾಗಿದ್ದಾರೆ. ಕೊಪ್ಪಳದ ಭಾಗ್ಯನಗರದ ಮುರುಕಲು ಗುಡಿಸಿಲಿನಲ್ಲಿ ಕೇವಲ ಎರಡು ಎಲ್.ಇ.ಡಿ ಬಲ್ಬ್ ಮಾತ್ರ ಹೊಂದಿರುವ ಗಿರಿಜಮ್ಮ ಎನ್ನುವ 90 ವರ್ಷದ ವೃದ್ದೆಗೆ ಮೇ ತಿಂಗಳ ವಿದ್ಯುತ್ ಬಿಲ್ 1,03,315 ರೂ ಬಂದಿದ್ದು ವೃದ್ದೆಯು ಆಘಾತಕ್ಕೆ ಒಳಗಾಗಿದ್ದಾರೆ. ಪ್ರತಿ ತಿಂಗಳೂ 70-80 ರೂ ವಿದ್ಯುತ್ ಬಿಲ್ ಬರುತ್ತಿದ್ದು, ಮೇ ತಿಂಗಳಲ್ಲಿ ಏಕಾಏಕಿ 1 ಲಕ್ಷಕ್ಕೂ ಮಿಕ್ಕಿ ಬಿಲ್ ಬಂದಿರುವುದನ್ನು […]
ಸರ್ಕಾರಕ್ಕೆ ಹೈಕೋರ್ಟ್ ತರಾಟೆ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯದ ಕೊರತೆ:

ಬೆಂಗಳೂರು: ಈ ರೀತಿಯ ಸೌಲಭ್ಯಗಳ ಕೊರತೆ ಇರುವ ಶಾಲೆಗಳಿಗೆ ಯಾವ ಪೋಷಕರು ತಾನೇ ಮಕ್ಕಳನ್ನು ಕಳುಹಿಸಲು ಮುಂದಾಗುತ್ತಾರೆ ಎಂದು ರಾಜ್ಯ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಐ) ಮಾನದಂಡಗಳಿಗೆ ಅನುಗುಣವಾಗಿ ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ವಿಷಯವಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ‘ಶಾಲೆಯಿಂದ ಹೊರಗುಳಿದ ಮಕ್ಕಳು’ – ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ […]