‘ಶಕ್ತಿ’ ಯೋಜನೆಯಿಂದ ಆಟೋಗಳ ವಹಿವಾಟುಗಳಲ್ಲಿ ಶೇ 20ರಷ್ಟು ಕುಸಿತ

ಬೆಂಗಳೂರು ನಗರದಲ್ಲಿ ಆಟೋದಲ್ಲಿ ಸಂಚಾರ ನಡೆಸುವ ಜನರಲ್ಲಿ ಹೆಚ್ಚಿನವರು ಮಹಿಳೆಯರಾಗಿದ್ದರು. ಆದರೆ ಈಗ ಉಚಿತವಾಗಿ ಸಂಚಾರ ನಡೆಸಲು ಬಿಎಂಟಿಸಿ ಬಸ್ ಇರುವ ಕಾರಣ ಮಹಿಳೆಯರು ಬಸ್ ಏರುತ್ತಿದ್ದಾರೆ. ಇದರಿಂದಾಗಿ ಆಟೋ ಚಾಲಕರಿಗೆ ಹೊಡೆತ ಬಿದ್ದಿದೆ. ಬೇಕಾಬಿಟ್ಟಿಯಾಗಿ ದರ ಹೇಳುತ್ತಿದ್ದ ಚಾಲಕರು ಈಗ ಪ್ರಯಾಣಿಕರಿಗಾಗಿ ಕಾಯುವ ಪರಿಸ್ಥಿತಿ ಬಂದಿದೆಕರೆದ ಕಡೆ ಬರುವುದಿಲ್ಲ, ಮೀಟರ್ಗಿಂತ ಹೆಚ್ಚಿನ ಹಣ ವಸೂಲಿ ಹೀಗೆ ಸದಾ ಜನರ ಆಕ್ರೋಶಕ್ಕೆ ತುತ್ತಾಗುವ ಆಟೋ ಚಾಲಕರು ಈಗ ‘ಶಕ್ತಿ’ಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೈಕ್ ಟ್ಯಾಕ್ಸಿಯಿಂದಾಗಿ ನಷ್ಟ ಅನುಭವಿಸುತ್ತಿದ್ದ […]

ಮುರುಕಲು ಗುಡಿಸಲಿನ 90ರ ವೃದ್ದೆಗೆ ಮೇ ತಿಂಗಳ ಕರೆಂಟ್ ಬಿಲ್ 1 ಲಕ್ಷ ರೂ! ತಾಂತ್ರಿಕ ದೋಷದಿಂದ ಬಿಲ್ ನಲ್ಲಿ ಗಡಿಬಿಡಿ

ಕೊಪ್ಪಳ: ಇಲ್ಲಿನ 90 ವರ್ಷದ ವೃದ್ದೆಗೆ ಮೇ ತಿಂಗಳ ತನ್ನ ವಿದ್ಯುತ್ ಬಿಲ್ ಅನ್ನು ಕಂಡು ಜೀವಮಾನದ ಆಘಾತಕ್ಕೆ ಒಳಗಾಗಿದ್ದಾರೆ. ಕೊಪ್ಪಳದ ಭಾಗ್ಯನಗರದ ಮುರುಕಲು ಗುಡಿಸಿಲಿನಲ್ಲಿ ಕೇವಲ ಎರಡು ಎಲ್.ಇ.ಡಿ ಬಲ್ಬ್ ಮಾತ್ರ ಹೊಂದಿರುವ ಗಿರಿಜಮ್ಮ ಎನ್ನುವ 90 ವರ್ಷದ ವೃದ್ದೆಗೆ ಮೇ ತಿಂಗಳ ವಿದ್ಯುತ್ ಬಿಲ್ 1,03,315 ರೂ ಬಂದಿದ್ದು ವೃದ್ದೆಯು ಆಘಾತಕ್ಕೆ ಒಳಗಾಗಿದ್ದಾರೆ. ಪ್ರತಿ ತಿಂಗಳೂ 70-80 ರೂ ವಿದ್ಯುತ್ ಬಿಲ್ ಬರುತ್ತಿದ್ದು, ಮೇ ತಿಂಗಳಲ್ಲಿ ಏಕಾಏಕಿ 1 ಲಕ್ಷಕ್ಕೂ ಮಿಕ್ಕಿ ಬಿಲ್ ಬಂದಿರುವುದನ್ನು […]

ಸರ್ಕಾರಕ್ಕೆ ಹೈಕೋರ್ಟ್ ತರಾಟೆ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯದ ಕೊರತೆ:

ಬೆಂಗಳೂರು: ಈ ರೀತಿಯ ಸೌಲಭ್ಯಗಳ ಕೊರತೆ ಇರುವ ಶಾಲೆಗಳಿಗೆ ಯಾವ ಪೋಷಕರು ತಾನೇ ಮಕ್ಕಳನ್ನು ಕಳುಹಿಸಲು ಮುಂದಾಗುತ್ತಾರೆ ಎಂದು ರಾಜ್ಯ ಹೈಕೋರ್ಟ್​​​ ಅಸಮಾಧಾನ ಹೊರಹಾಕಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಐ) ಮಾನದಂಡಗಳಿಗೆ ಅನುಗುಣವಾಗಿ ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ವಿಷಯವಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ‘ಶಾಲೆಯಿಂದ ಹೊರಗುಳಿದ ಮಕ್ಕಳು’ – ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ […]

ಹಿಂದೂ ಧಾರ್ಮಿಕ ದತ್ತಿ ಇಲಾಖಾಧೀನ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಧಾರ್ಮಿಕ ದತ್ತಿ ಇಲಾಖೆ ಬುಧವಾರ ಈ ಸಂಬಂಧ ಸುತ್ತೋಲೆಯೊಂದನ್ನು ಹೊರಡಿಸಿದೆ. ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು […]

ರೈತರ ಪಾಲಿಗೆ ಹುಳಿಯಾದ ಒಣದಾಕ್ಷಿ: ತೀವ್ರ ಬೆಲೆ ಕುಸಿತದಿಂದಾಗಿ ಬೆಳೆಗಾರರು ಕಂಗಾಲು; ಸರ್ಕಾರಕ್ಕೆ ಮೊರೆ

ವಿಜಯಪುರ: ದ್ರಾಕ್ಷಿಯ ಬೆಳೆಗೆ ಹೆಸರುವಾಸಿಯಾದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಒಣ ದ್ರಾಕ್ಷಿಯ ಬೆಲೆ ತೀವ್ರ ಕುಸಿತದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಒಣ ದ್ರಾಕ್ಷಿ ಕೆ.ಜಿಗೆ 150ರಿಂದ 250 ರೂ.ಗೆ ಮಾರಾಟವಾಗಿತ್ತು. ಈ ವರ್ಷ ಬೆಲೆ ತೀವ್ರ ಕುಸಿತ ಕಂಡಿದ್ದು, ದ್ರಾಕ್ಷಿ ಕೆ.ಜಿ.ಗೆ ಕೇವಲ 60ರಿಂದ 110 ರೂ.ಗೆ ಮಾರಾಟವಾಗುತ್ತಿದೆ ಎಂದು ಅಧಿಕಾರಿಗಳು ಮತ್ತು ಬೆಳೆಗಾರರ ​​ಸಂಘದವರು ತಿಳಿಸಿದ್ದಾರೆ. ಇದರಿಂದ ಉತ್ಪಾದನಾ ವೆಚ್ಚವೂ ಸಿಗದೆ ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ತೋಟಗಾರಿಕೆ ಇಲಾಖೆ ಮೂಲಗಳ ಪ್ರಕಾರ ರಾಜ್ಯದಲ್ಲಿ […]