ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2023 ಅನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ಮೇ ಮತ್ತು ಜೂನ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಪೂರಕ ಪರೀಕ್ಷೆಯಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ಶೇ.32 ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯವನ್ನು ನಮೂದಿಸುವ ಮೂಲಕ […]
ಟ್ರಾಫಿಕ್ ಕಂಟ್ರೋಲ್‌ಗೆ ಬೆಂಗಳೂರಿನಲ್ಲಿ ಇಂದಿನಿಂದ ಡ್ರೋನ್ ಕ್ಯಾಮರಾಗಳ ಪ್ರಾಯೋಗಿಕ ಹಾರಾಟ

ಬೆಂಗಳೂರು : ಬೆಂಗಳೂರು ನಗರದ ವಿಪರೀತ ಸಂಚಾರ ದಟ್ಟಣೆಯನ್ನು ಶತಾಯಗತಾಯ ಕಡಿಮೆ ಮಾಡಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪಣ ತೊಟ್ಟಿರುವ ಸಂಚಾರಿ ಪೊಲೀಸರು ಡ್ರೋನ್ ಕ್ಯಾಮರಾಗಳ ಮೊರೆ ಹೋಗಿದ್ದಾರೆ.ಸಂಚಾರ ದಟ್ಟಣೆ ಕಡಿಮೆ ಮಾಡಲು ಇದೇ ಮೊದಲ ಬಾರಿಗೆ ಟ್ರಾಫಿಕ್ ಪೊಲೀಸರು ಡ್ರೋನ್ ಬಳಕೆ ಮಾಡಲು ಮುಂದಾಗಿದ್ದಾರೆ. ನಗರ ಸಂಚಾರ ವಿಭಾಗ ಡಿಐಜಿ ಎಂ.ಎನ್.ಅನುಚೇತ್ ವಿವರಣೆ ಜನಸಂದಣಿ ಹಾಗೂ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ಪ್ರಮುಖವಾಗಿ ಪೀಕ್ ಅವರ್‌ನಲ್ಲಿ ಸಂಚಾರ ದಟ್ಟಣೆ ಸುಧಾರಿಸಲು ಡ್ರೋನ್ ಕ್ಯಾಮರ ಬಳಸಲು […]
ಮಹಾರಾಷ್ಟ್ರ-ಗೋವಾ ಮುಖ್ಯಮಂತ್ರಿಗಳ ಮಹದಾಯಿಗಾಗಿ ಕರ್ನಾಟಕದ ವಿರುದ್ಧ ಹೋರಾಟಕ್ಕೆ ಸಿದ್ಧತೆ

ಬೆಳಗಾವಿ:ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂಬಂಧ ಶನಿವಾರ ಮುಂಬೈನಲ್ಲಿ ಅಂತಾರಾಜ್ಯ ನಿಯಂತ್ರಣ ಮಂಡಳಿಯ ಸಭೆ ನಡೆದಿದೆ. ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯವಿದೆ. ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದ ವಿರುದ್ಧ ಹೋರಾಡಲು ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳು […]
ಮಳೆ ಅನಾಹುತ ತಡೆಯಲು ಸಿದ್ಧ : ಕಲ್ಲು ಕ್ವಾರಿಯಲ್ಲಿ ಕೂರ್ಗ್ ಅಡ್ವೆಂಚರ್ ಟೀಮ್ಗೆ ಕೊಡಗು ಜಿಲ್ಲಾಡಳಿತದಿಂದ ತರಬೇತಿ

ಮಡಿಕೇರಿ (ಕೊಡಗು): ಮಳೆ ಅನಾಹುತ ತಡೆಯಲು ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.ಮಳೆಗಾಲ ಬಂತೆಂದರೆ ಸಾಕು ಕೊಡಗಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿ ಬಿಡುತ್ತದೆ. ಎಲ್ಲಿ, ಏನು ಅನಾಹುತವಾಗಿ ಬಿಡುತ್ತದೋ? ಎಂಬ ಭೀತಿ ಕಾಡುತ್ತದೆ. ಹೀಗಾಗಿ ಜಿಲ್ಲಾಡಳಿತ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳತ್ತು ನಿಗಾ ವಹಿಸುತ್ತಿದೆ. ಈ ಬಾರಿ 40 ಪ್ರದೇಶಗಳಲ್ಲಿ ಭೂಕುಸಿತ, 45 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಮಳೆ ಅವಾಂತರಗಳಿಂದ ಜನ ಜಾನುವಾರುಗಳನ್ನು ರಕ್ಷಣೆ ಮಾಡಲು ಈಗಾಗಲೇ ಕಠಿಣ ತರಬೇತಿ ನೀಡಲಾಗುತ್ತಿದೆ. ಕಳೆದ ಐದು […]
ಮುಂಗಾರು ಆಗಮನದಿಂದ ಪೆಟ್ರೋಲ್, ಡೀಸೆಲ್ ಮಾರಾಟ ಇಳಿಕೆ

ನವದೆಹಲಿ : ಮುಂಗಾರು ಋತು ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲಿ ಇಳಿಕೆ ಕಂಡು ಬಂದಿದೆ.ಮುಂಗಾರು ಆಗಮನವಾಗುತ್ತಿದ್ದಂತೆಯೇ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕಡಿಮೆಯಾಗಿದೆ. ಕೃಷಿ ವಲಯದಲ್ಲಿನ ಬೇಡಿಕೆ ಕಡಿಮೆಯಾಗಿರುವುದು ಮತ್ತು ವಾಹನ ಸಂಚಾರ ಕಡಿಮೆಯಾದ ಕಾರಣದಿಂದ ಈ ಇಂಧನಗಳ ಬೇಡಿಕೆ ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ. ಮುಂಗಾರು ಆಗಮನದಿಂದ ಕೃಷಿ ವಲಯದಲ್ಲಿನ ಬೇಡಿಕೆ ಕಡಿಮೆಯಾಗಿರುವುದು ಮತ್ತು ವಾಹನ ಸಂಚಾರ ಕಡಿಮೆಯಾದ ಕಾರಣ ಜೂನ್ ಮೊದಲಾರ್ಧದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಇಳಿಕೆಯಾಗಿದೆ ಎಂದು […]