ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ   ಬೆಂಗಳೂರು: ಹೈಕೋರ್ಟ್ ನ್ಯಾಯಪೀಠಗಳು ದಿನಕ್ಕೆ 200 ಅಥವಾ ಗರಿಷ್ಠ ಎಂದರೆ 300 ಪ್ರಕರಣಗಳನ್ನು ವಿಷಯ ಪಟ್ಟಿಗೆ (ಕಾಸ್ ಲಿಸ್ಟ್)ಗೆ ಹಾಕಿಸಿ ಅವುಗಳ ವಿಚಾರಣೆ ನಡೆಸುವುದು ಸಾಮಾನ್ಯ. ಬಹುತೇಕ ಪ್ರಕರಣ ವಿಚಾರಣೆ ನಡೆಸಿ ಉಳಿದ ಪ್ರಕರಣಗಳಿಗೆ ಸಮಯದ ಅಭಾವ ಉಂಟಾದರೆ ಅವುಗಳನ್ನು ಮುಂದೂಡಲಾಗುತ್ತದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಸೋಮವಾರ ಒಂದೇ ದಿನ 522 ಪ್ರಕರಣಗಳನ್ನು ವಿಚಾರಣೆ ನಡೆಸಿದೆ.ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ […]

ಮೊದಲ ದಿನವೇ ರಾಜ್ಯಾದ್ಯಂತ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

ಬೆಂಗಳೂರು : ಉಚಿತ ಬಸ್​ ಪ್ರಯಾಣ ಸೌಲಭ್ಯದ ಲಾಭವನ್ನು ಸಾಕಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ಯೋಜನೆ ಜಾರಿಗೊಂಡ […]

ಮುಂಗಾಳು ಮಳೆ ವಿಳಂಬ; ಮೋಡ ಬಿತ್ತನೆಗೆ ಚಿಂತನೆ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಧಾರವಾಡ: ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗುತ್ತಿದ್ದು, ಕಳೆದ ನಾಲ್ಕೈದು ದಿನಗಳ ಹಿಂದೆಯೇ ರಾಜ್ಯಕ್ಕೆ ಮುಂಗಾರು ಮಾರುತಗಳು ಆಗಮಿಸಿದ್ದರೂ ಮಳೆ ಸುರಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ತಲೆದೋರುತ್ತದೆ ಎನ್ನುವ ನಂಬಿಕೆ ಇದ್ದು, ಜನಸಾಮಾನ್ಯರು ಅದಾಗಲೇ ಈ ಬಗ್ಗೆ ಮಾತಾಡಿಕೊಳ್ಳುತ್ತಿದ್ದಾರೆ. ಮುಂಗಾರು ಮಳೆ ಬಂದು ಕೃಷಿ ಚಟುವಟಿಕೆಗಳು ಗರಿಗೆದರ ಬೇಕಾಗಿದ್ದ ಈ ಹೊತ್ತಿನಲ್ಲಿ ರಣಬಿಸಿಲು […]

ವಿದ್ಯುತ್ ದರ ಪ್ರತಿ ಯೂನಿಟ್‌ಗೆ 70 ಪೈಸೆ ಏಪ್ರಿಲ್​ನಿಂದಲೇ ಹೆಚ್ಚಳ: ಕೆಇಆರ್​ಸಿ ಸ್ಪಷ್ಟನೆ

ಬೆಂಗಳೂರು: ವಿದ್ಯುತ್‌ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್‌ಗೆ ಪ್ರತಿ ಯೂನಿಟ್ ದರ 4.75 ರೂ. 100 ಯೂನಿಟ್‌ ಮೀರಿದ್ದಲ್ಲಿ ಬಳಸಿದ ಅಷ್ಟೂ ಯೂನಿಟ್‌ಗೆ 2ನೇ ಶೇಣಿ ದರ ಪ್ರತಿ ಯೂನಿಟ್‌ಗೆ 7 ರೂ. ನಂತೆ ಅನ್ವಯವಾಗಲಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ […]

ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದ ಸಿಎಂ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:ಇಂದಿನಿಂದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ​ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು […]