ಮಂಗಳೂರು ಪಿಲಿಕುಳ ಸಂತಾನೋತ್ಪತ್ತಿಯಲ್ಲಿ ದೇಶದಲ್ಲಿಯೇ ಟಾಪ್ 1 ಮೃಗಾಲಯ

ಮಂಗಳೂರು (ದಕ್ಷಿಣ ಕನ್ನಡ): ದೇಶದ ಅತೀ ದೊಡ್ಡ 17 ಮೃಗಾಲಯಗಳ ಪೈಕಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ಅದರಲ್ಲೂ ದೇಶದಲ್ಲಿ ಅಪರೂಪದ ಹುಲಿ, ಕಾಡು, ಶ್ವಾನ, ಕಾಳಿಂಗ, ರಿಯಾ ಜಾತಿಯ ಹಕ್ಕಿಯ ಸಂತಾನಾಭಿವೃದ್ಧಿಯಲ್ಲಿ ಪಿಲಿಕುಳ ಮೃಗಾಲಯ ಹೆಚ್ಚು ಪ್ರಸಿದ್ಧಿ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ರಾಜ್ಯ ಸರಕಾರದ […]

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೆ ಮೀನಾಮೇಷ ಮಾಡುತ್ತಿರುವುದು ಸರಿಯಲ್ಲ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ

ಉಡುಪಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೊಳಿಸುವಲ್ಲಿ ಮೀನಾಮೇಷ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಕಾರ್ಡ್ ತೋರಿಸಿ ಪ್ರಚಾರ ಮಾಡಿದ ಕಾಂಗ್ರೆಸ್ ನಾಯಕರು ಇದೀಗ ಅಕ್ಕಿ ವಿತರಣೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಆರೋಪಿಸುವ ಮೂಲಕ ತಮ್ಮ ಗ್ಯಾರಂಟಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಗೃಹ ಲಕ್ಷ್ಮಿ ಯೋಜನೆಯನ್ನು ಸರ್ಕಾರ ಮುಂದೂಡಿದ್ದು, ಪೂರ್ವ ತಯಾರಿಯಿಲ್ಲದೇ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 200 ಯೂನಿಟ್ ವಿದ್ಯುತ್ ಉಚಿತ ಘೋಷಿಸಿ […]

ಸುಧಾಮೂರ್ತಿಯವರ ‘ಗ್ರ್ಯಾಂಡ್ ಮಾ’ಸ್ ಬ್ಯಾಗ್ ಆಫ್ ಸ್ಟೋರೀಸ್’ ಪುಸ್ತಕಕ್ಕೆ ಬಾಲ ಸಾಹಿತ್ಯ ಪುರಸ್ಕಾರದ ಗರಿ

ನವದೆಹಲಿ: ಆಡು ಮುಟ್ಟದ ಸೊಪ್ಪಿಲ್ಲ, ಸುಧಾ ಮೂರ್ತಿಯವರು ಕೈಯಾಡಿಸದ ಕ್ಷೇತ್ರವಿಲ್ಲ. ಉದ್ಯೋಗ, ಉದ್ಯಮ, ಸಮಾಜ ಸೇವೆ, ಸಾಹಿತ್ಯ ಮುಂತಾದ ಹತ್ತು ಹಲವು ಆಯಾಮಗಳಲ್ಲಿ ತನ್ನದೇ ಛಾಪು ಮೂಡಿಸಿರುವ ಸುಧಾಮೂರ್ತಿ ಒಳ್ಳೆಯ ಬರಹಗಾರ್ತಿಯೂ ಹೌದು. ಇದೀಗ ಸುಧಾಮೂರ್ತಿಯವರರು ಬರೆದಿರುವ ಮಕ್ಕಳ ಪುಸ್ತಕಕ್ಕೆ ಪ್ರಶಸ್ತಿಯೊಂದು ಅರಸಿ ಬಂದಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ 2023ರ ಪ್ರಶಸ್ತಿಗೆ ಸುಧಾಮೂರ್ತಿಯವರನ್ನು ಆಯ್ಕೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ವರ್ಷದ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ವಿಜೇತರ […]

ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಪ್ರಹಸನ: ರಾಜೀನಾಮೆ ಕೊಟ್ಟಿಲ್ಲ ಎಂದ ಕಟೀಲ್

ಬಳ್ಳಾರಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ನಾನು ಈಗಾಗಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದರು. ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಟೀಲ್, ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ಜವಾಬ್ದಾರಿ ಹೊತ್ತು […]

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ 

ಬಳ್ಳಾರಿ:  ನಳೀನ್ ಕುಮಾರ್ ಕಟೀಲ್ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ, ಈ ಸೋಲಿನ ಹೊಣೆಯನ್ನ ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ನೀಡಿದ್ದಾರೆ.