ಕೊನೆಗೂ ಸೆರೆ : ರಾಮನಗರದಲ್ಲಿ ಇಬ್ಬರು ರೈತರ ಬಲಿ ಪಡೆದ ಒಂಟಿ ಸಲಗ

ರಾಮನಗರ : ರಾಮನಗರದಲ್ಲಿ ರೈತರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲವು ದಿನಗಳಿಂದ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಚನ್ನಪಟ್ಟಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು. ನಾಲ್ಕು ದಿನಗಳ ಹಿಂದೆ ಕಾರ್ಯಾಚರಣೆಗೆ ಆಗಮಿಸಿದ್ದ ಅಭಿಮನ್ಯು ನೇತೃತ್ವದ ಐದು ಸಾಕಾನೆಗಳ ತಂಡ ಶೋಧ ಕೈಗೊಂಡಿತ್ತು. ಈ ಕಾರ್ಯಾಚರಣೆಯ ವೇಳೆ ತಪ್ಪಿಸಿಕೊಂಡಿದ್ದ ಸಲಗವನ್ನು ಇದೀಗ ತೆಂಗಿನಕಲ್ಲು ಅರಣ್ಯ ಪ್ರದೇಶದ ಅರಳಾಳುಸಂದ್ರ ಕಾಡನಕುಪ್ಪೆ ಗ್ರಾಮದಲ್ಲಿ ಸೆರೆ […]

ಬೆಂಗಳೂರಿನಲ್ಲಿ 1200 ಕ್ಕೂ ಹೆಚ್ಚು ರೌಡಿ ಶೀಟರ್ಸ್​ ಮನೆಗಳ ಮೇಲೆ ಪೊಲೀಸ್​​ ದಾಳಿ

ಕಾನೂನು ಬಾಹಿರ ಚಟುವಟಿಕೆಯಲ್ಲಿ ಕ್ರಿಯಶೀಲರಾಗಿ ನಗರದ ಎಂಟು ವಲಯಗಳಲ್ಲಿ ವಾಸವಾಗಿದ್ದ 1200ಕ್ಕೂ ಹೆಚ್ಚು ರೌಡಿ ಶೀಟರ್​ ಮನೆಗಳ ಮೇಲೆ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ದಾಳಿ ನಡೆಸಿ ಪರಿಶೀಲನೆ ನಡೆದಿದೆ. ಗುರುವಾರ ಬೆಳಿಗ್ಗೆ ಬೆಂಗಳೂರು ನಗರದ ವಿವಿಧೆಡೆ ರೌಡಿ ಶೀಟರ್ಸ್​ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಬೆಂಗಳೂರು : ಹಲವು ಬಾರಿ ಎಚ್ಚರಿಕೆ ನೀಡಿದರೂ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ನಗರದ ರೌಡಿ ಶೀಟರ್ […]

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ನಿರಾಕರಣೆ : ಬರಗೂರು ರಾಮಚಂದ್ರಪ್ಪ

ಬೆಂಗಳೂರು : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆದರೆ ಸಮಿತಿಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಹಿತಿ ನಿರಾಕರಿಸಿದ್ದಾರೆ. ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ ತಿಳಿಸಿದ್ದಾರೆ. ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರದ […]

ಹವಾಮಾನ ಇಲಾಖೆ ಮುನ್ಸೂಚನೆ:ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ:

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳವರೆಗೆ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿಮೀಯಿಂದ 60 ಕಿ. ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಮುಂಗಾರು ಮಳೆ ವಿಳಂಬವಾಗಿದ್ದು, ರಾಜ್ಯದ ರೈತರನ್ನು ಚಿಂತೆಗೀಡು ಮಾಡಿದೆ. ಹೊಲಗಳನ್ನು ಬಿತ್ತನೆಗೆ ಅಣಿಗೊಳಿಸಿರುವ ಅನ್ನದಾತರು ಬೀಜ, ಗೊಬ್ಬರ ಖರೀದಿಸಿ ಆಕಾಶದತ್ತ ಮುಖ ಮಾಡಿ ಮಳೆರಾಯನ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಇದೀಗ […]

ಐಟಿ-ಜಿಎಸ್‌ಟಿ ಪಾವತಿದಾರರಿಗಿಲ್ಲ ಗೃಹಲಕ್ಷ್ಮಿ ಯೋಜನೆ: ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಕ್ರಮ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೂ ಆಡಳಿತಾತ್ಮಕ ಅನುಮೋದನೆಯೊಂದಿಗೆ ಮಂಗಳವಾರ ಅಧಿಕೃತ ಆದೇಶ ಪ್ರಕಟವಾಗಿದೆ. ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ಮರುಪಾವತಿ ಪಡೆಯುವವರಾಗಿದ್ದಲ್ಲಿ ಅಂತಹವರಿಗೆ ಯೋಜನೆಯು ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ಮರುಪಾವತಿ ಪಡೆಯುವವರು ಈ ಯೋಜನೆಗೆ ಅರ್ಹರಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಹುತೇಕ ನೌಕರರು, ಅಧಿಕಾರಿಗಳು, ಆದಾಯ ತೆರಿಗೆ […]