ಹೊಸದಾಗಿ 50 ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಮುಂದಾದ ಬಿಬಿಎಂಪಿ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ ಸುಮಾರು 50 ಇಂದಿರಾ ಕ್ಯಾಂಟೀನ್​ಗಳು ತಲೆ ಎತ್ತಲಿವೆ. ಬೆಂಗಳೂರಿನಲ್ಲಿ ಸುಮಾರು 175 ಇಂದಿರಾ ಕ್ಯಾಂಟೀನ್​ಗಳಿದ್ದು, 163 ಕ್ಯಾಂಟೀನ್​​ಗಳು ಸದ್ಯ ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆಗೆ ಇನ್ನೂ ಸುಮಾರು 50 ಹೊಸ ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಬಿಬಿಎಂಪಿ ಮುಂದಾಗಿದೆ. ವಾರ್ಡ್‌ಗೊಂದರಂತೆ ಇಂದಿರಾ ಕ್ಯಾಂಟೀನ್​ಗಳು ಬಡವರ ಹೊಟ್ಟೆಯನ್ನು ತುಂಬಿಸುತ್ತಿವೆ. ಕ್ಯಾಂಟೀನ್‌ ಕಟ್ಟಡ ಇಲ್ಲದ ವಾರ್ಡ್‌ಗಳಲ್ಲಿ ಮೊಬೈಲ್‌ ಕ್ಯಾಂಟೀನ್‌ಗಳು ಸೇವೆ ನೀಡುತ್ತಿವೆ. ಇದರ ಜೊತೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ 50 ಇಂದಿರಾ ಕ್ಯಾಂಟಿನ್​ಗಳು […]

ಹಿರಿಯರ ಮಾತಿಗೆ ಬೆಲೆ ಕೊಟ್ಟು ತಲೆಬಾಗಬೇಕಾಯಿತು; ತಾಳ್ಮೆ ಕಾಯ್ದುಕೊಳ್ಳಿ: ಅಭಿಮಾನಿಗಳಿಗೆ ಡಿಕೆಶಿ ಕರೆ

ಕನಕಪುರ: ಮುಖ್ಯಮಂತ್ರಿ ಪಟ್ಟಕ್ಕಾಗಿ ತಮ್ಮ ಆಕಾಂಕ್ಷೆಗಳನ್ನು ಜೀವಂತವಾಗಿರಿಸಿಕೊಂಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ “ತಾಳ್ಮೆಯಿಂದ” ಇರಿ ಮತ್ತು “ನಿರಾಶೆಗೊಳ್ಳಬೇಡಿ” ಎಂದು ಕೇಳಿಕೊಂಡಿದ್ದಾರೆ. ದೊಡ್ಡ ಜವಾಬ್ದಾರಿಯಾದ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ನೀವೆಲ್ಲರೂ ಭಾವಿಸಿ ಪ್ರೀತಿಯ ಸುರಿಮಳೆಗೈದಿದ್ದೀರಿ, ಯಾರೂ ನಿರಾಶರಾಗುವ ಅಗತ್ಯವಿಲ್ಲ ಎಂದು ಶನಿವಾರ ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ. ತಮ್ಮನ್ನು ಅಧಿಕಾರಕ್ಕೆ ತಂದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿ ಮಾತನಾಡಿ, ನನ್ನನ್ನು ಮುಖ್ಯಮಂತ್ರಿಯನ್ನಾಗಿ […]

ಏರ್ ಮಾರ್ಷಲ್ ಕಡೆಯಿಂದ ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ಕಿತು ಬಹುಮಾನ

ಬೆಳಗಾವಿ: ವೀರರಿಗೆ ಏರ್ ಮಾರ್ಷಲ್ ಕಡೆಯಿಂದ ಬಹುಮಾನ ವಿತರಣೆ ,ಬೆಳಗಾವಿ ಏರ್​ಮನ್ ತರಬೇತಿ ಪೂರ್ಣಗೊಂಡ ಅಗ್ನಿವೀರರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್​ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ‌ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. […]

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಪುರುಷರಿಗೆ ಶೇ.50 ಆಸನ ಮೀಸಲು!

ಬೆಂಗಳೂರು: ಜೂ.11ರಿಂದ ಕಾಗ್ರೆಸ್ ಗ್ಯಾರಂಟಿಯ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಜಾರಿಯಾಗಲಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡಲು ಸರ್ಕಾರ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಸ್‌ ಪ್ರಯಾಣಕ್ಕೆ ಮುಂದಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಟಿಕೆಟ್‌ ಪಡೆದು ಪ್ರಯಾಣ ಮಾಡುವ ಪುರುಷರಿಗೆ ಆಸನ ಕೊರತೆಯಾಗಬಹುದು. ಇದರಿಂದ ಮೊದಲೆ ನಷ್ಟದಲ್ಲಿರುವ […]

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ: ಯೋಜನೆಯ ಅರ್ಹತೆ ಮತ್ತು ಮಾನದಂಡಗಳು ಇಂತಿವೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ 5 ಗ್ಯಾರೆಂಟಿ ಜಾರಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿ 1: ಯುವನಿಧಿ ಯೋಜನೆಯಡಿ 2022-23 ರಲ್ಲಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿ ಹೆಸರು ನೋದಾಯಿಸಿಕೊಂಡ ಪಧವೀದರರಿಗೆ ಪ್ರತಿ ತಿಂಗಳೂ 3 ಸಾವಿರ ರೂ ಹಾಗೂ ಡಿಪ್ಲೋಮಾ ಆದವರಿಗೆ 1.500 ಸಾವಿರ ರೂ. 24 ತಿಂಗಳು(2 ವರ್ಷ)ಕಾಲ ಮಾತ್ರ. ಆದರೆ 2 […]