ಮಳೆ ಅನಾಹುತ ತಡೆಯಲು ಸಿದ್ಧ : ಕಲ್ಲು ಕ್ವಾರಿಯಲ್ಲಿ ಕೂರ್ಗ್ ಅಡ್ವೆಂಚರ್ ಟೀಮ್​ಗೆ ಕೊಡಗು ಜಿಲ್ಲಾಡಳಿತದಿಂದ ತರಬೇತಿ

ಮಡಿಕೇರಿ (ಕೊಡಗು): ಮಳೆ ಅನಾಹುತ ತಡೆಯಲು ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.ಮಳೆಗಾಲ ಬಂತೆಂದರೆ ಸಾಕು ಕೊಡಗಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿ ಬಿಡುತ್ತದೆ. ಎಲ್ಲಿ, ಏನು ಅನಾಹುತವಾಗಿ ಬಿಡುತ್ತದೋ? ಎಂಬ ಭೀತಿ ಕಾಡುತ್ತದೆ. ಹೀಗಾಗಿ ಜಿಲ್ಲಾಡಳಿತ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳತ್ತು ನಿಗಾ ವಹಿಸುತ್ತಿದೆ. ಈ ಬಾರಿ 40 ಪ್ರದೇಶಗಳಲ್ಲಿ ಭೂಕುಸಿತ, 45 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಮಳೆ ಅವಾಂತರಗಳಿಂದ ಜನ ಜಾನುವಾರುಗಳನ್ನು ರಕ್ಷಣೆ ಮಾಡಲು ಈಗಾಗಲೇ ಕಠಿಣ ತರಬೇತಿ ನೀಡಲಾಗುತ್ತಿದೆ. ಕಳೆದ ಐದು […]

ಮುಂಗಾರು ಆಗಮನದಿಂದ ಪೆಟ್ರೋಲ್, ಡೀಸೆಲ್​ ಮಾರಾಟ ಇಳಿಕೆ

ನವದೆಹಲಿ : ಮುಂಗಾರು ಋತು ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲಿ ಇಳಿಕೆ ಕಂಡು ಬಂದಿದೆ.ಮುಂಗಾರು ಆಗಮನವಾಗುತ್ತಿದ್ದಂತೆಯೇ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕಡಿಮೆಯಾಗಿದೆ. ಕೃಷಿ ವಲಯದಲ್ಲಿನ ಬೇಡಿಕೆ ಕಡಿಮೆಯಾಗಿರುವುದು ಮತ್ತು ವಾಹನ ಸಂಚಾರ ಕಡಿಮೆಯಾದ ಕಾರಣದಿಂದ ಈ ಇಂಧನಗಳ ಬೇಡಿಕೆ ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ. ಮುಂಗಾರು ಆಗಮನದಿಂದ ಕೃಷಿ ವಲಯದಲ್ಲಿನ ಬೇಡಿಕೆ ಕಡಿಮೆಯಾಗಿರುವುದು ಮತ್ತು ವಾಹನ ಸಂಚಾರ ಕಡಿಮೆಯಾದ ಕಾರಣ ಜೂನ್ ಮೊದಲಾರ್ಧದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಇಳಿಕೆಯಾಗಿದೆ ಎಂದು […]

ಸುಳ್ಳು ದೂರು ನೀಡಿರುವವರಿಗೆ ಜೈಲು ಶಿಕ್ಷೆ ವಿಧಿಸುವ ಅಧಿಕಾರ ಲೋಕಾಯುಕ್ತರಿಗಿದೆ: ಕೆ.ಎನ್.​ ​ಫಣೀಂದ್ರ ಹೇಳಿಕೆ

ಮೈಸೂರು: ಕೆಲವರು ಅನಾವಶ್ಯಕವಾಗಿ ಸುಳ್ಳು ದೂರುಗಳನ್ನು ದಾಖಲಿಸುವವರಿದ್ದಾರೆ. ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಉಪ ಲೋಕಾಯುಕ್ತರಾದ ಕೆ.ಎನ್.​ ಫಣೀಂದ್ರ ಮಾತನಾಡಿದರು. ಆ ರೀತಿ ಸುಳ್ಳು ದೂರು ನೀಡುವವರಿಗೆ ಜೈಲು ಶಿಕ್ಷೆ ವಿಧಿಸಿ, ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯುಕ್ತರಿಗೆ ಇದೆ ಎಂದು ಉಪ ಲೋಕಾಯುಕ್ತರಾದ ಕೆ.ಎನ್.​ ಫಣೀಂದ್ರ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ […]

ಕಾರವಾರದ ಜಲಂತರ್ಗಾಮಿ ನಿರೋಧಕ ನೌಕೆಗೆ ‘ಅಂಜುದೀವ್’ ದ್ವೀಪದ ಹೆಸರಿಟ್ಟ ನೌಕಾಪಡೆ

ಕಾರವಾರ: ಭಾರತೀಯ ನೌಕಾಪಡೆಗೆ ಹೊಸದಾಗಿ ನಿಯೋಜನೆಗೊಂಡಿರುವ ಜಲಾಂತರ್ಗಾಮಿ ನಿರೋಧಕ ನೌಕೆಗೆ ಕಾರವಾರ ಸಮೀಪದ ಐತಿಹಾಸಿಕ ಅಂಜುದೀವ್ ದ್ವೀಪದ ಹೆಸರಿಡಲಾಗಿದೆ. ಭಾರತೀಯ ನೌಕಾ ಸೇನೆಗೆ ಸೇರ್ಪಡೆಯಾಗುವ ನೌಕೆಗಳಿಗೆ ದೇಶದ ಪ್ರಮುಖ ಊರುಗಳ, ದ್ವೀಪಗಳ ಹೆಸರಿಡುವ ವಾಡಿಕೆ ಇದೆ. ಅಂತೆಯೇ ಭಾರತೀಯ ನೌಕಾಪಡೆಗೆ ಹೊಸದಾಗಿ ಸೇರ್ಪಡೆಯಾದ ಜಲಾಂತರ್ಗಾಮಿ ನಿರೋಧಕ ನೌಕೆಗೆ ಅಂಜುದೀವ್ ದ್ವೀಪದ ಹೆಸರಿಡಲಾಗಿದೆ. ಕೊಲ್ಕತ್ತಾ ಗಾರ್ಡನ್ ರಿಚ್ ಶಿಪ್‌ಬಿಲ್ಡ್ ಅಂಡ್​ ಎಂಜಿನಿಯರ್ಸ್ ಎಂಬ ಕಂಪನಿಯಲ್ಲಿ ಹೆಚ್ಚಾಗಿ ದೇಸಿ ತಂತ್ರಜ್ಞಾನ ಹಾಗೂ ಉಪಕರಣ ಬಳಸಿ ನಿರ್ಮಾಣ ಮಾಡಲಾದ ನೌಕೆಯನ್ನು ಇತ್ತೀಚೆಗೆ […]

ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಹೈದರಾಬಾದ್: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಹೈದರಾಬಾದಿನಲ್ಲಿ ನಡೆಯುತ್ತಿರುವ ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು. ಭಾರತದ ಸಾರಥ್ಯದಲ್ಲಿ ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಿ20 ಶೃಂಗ ಸಭೆಯು ಭಾರತದಲ್ಲಿ ನಡೆಯುತ್ತಿದೆ. 3 ದಿನಗಳ ಕಾಲದ ಸಭೆಯಲ್ಲಿ ಜಿ20 ರಾಷ್ಟ್ರಗಳ ಕೃಷಿ ಸಚಿವರು ಹಾಗೂ ಕೃಷಿ ಕ್ಷೇತ್ರದ ಪರಿಣಿತರು ಮತ್ತು ವಿವಿಧ ರಾಷ್ಟ್ರಗಳ 200 ರಕ್ಕೂ ಅಧಿಕ […]