ಗೃಹ-ಲಕ್ಷ್ಮಿ ಯೋಜನೆ: ಹಣ ಪಡೆಯಲು ಅತ್ತೆಗೆ ಅರ್ಹತೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಭರವಸೆ ನೀಡಿತ್ತು. ಆದರೆ ಇದೀಗ ಈ ಯೋಜನೆಯನ್ವಯ 2000 ರೂ ಪಡೆಯಲು ಅತ್ತೆ-ಸೊಸೆಯರಲ್ಲಿ ತಿಕ್ಕಾಟ ನಡೆಯುತ್ತಿರುವ ಪ್ರಸಂಗಗಳು ವರದಿಯಾಗುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರಣಾಳಿಕೆಯಲ್ಲಿ ಸ್ಪಷ್ಟತೆಯ ಕೊರತೆ ಇದ್ದು, ಕುಟುಂಬದ ಯಜಮಾನಿಯಾದ ಮಹಿಳೆಗೆ ಮಾತ್ರ ಪ್ರತೀ ತಿಂಗಳು 2000 ರೂ ನೀಡುವ ಬಗ್ಗೆ ಭರವಸೆ ನೀಡಲಾಗಿತ್ತು. […]
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಏರಿಕೆ

ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು 4% ಹೆಚ್ಚಿಸಿ ಆದೇಶ ಹೊರಡಿಸಿದೆ. 2023ರ ಜನವರಿ ತಿಂಗಳಿನಿಂದಲೇ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಇದುವರೆಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 31 ಇದ್ದು, ಇದೀಗ ಇದು ಶೇ. 35 ಕ್ಕೆ ಏರಿಕೆಯಾಗಿದೆ.
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಮತಿ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಪಿಎಲ್ ಅಥವಾ ಬಿಪಿಎಲ್ ಅಂತ ಹೇಳಿಲ್ಲ. ಹಾಗಾಗಿ, ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಎಂದು ಅವರು ತಿಳಿಸಿದರು. ಮೇ.29 ರಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ […]
ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರ ಬಳಿಯೂ ಬಿಪಿಎಲ್ ಕಾರ್ಡ್? ಇಲಾಖಾ ಕಾರ್ಯಾಚರಣೆಯಲ್ಲಿ ಗೋಲ್ ಮಾಲ್ ಬಯಲು!!

ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಅಕ್ರಮ ಪಡಿತರ ಚೀಟಿದಾರರ ವಿರುದ್ಧ ರಾಜ್ಯಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಕಂಡುಬಂದಿದೆ. ಜನವರಿ 2021 ರಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ 13 ಕೋಟಿ ರೂ ದಂಡವನ್ನು ಸಂಗ್ರಹಿಸಿದೆ, ಇದರಲ್ಲಿ 11 ಕೋಟಿ ರೂ.ಗಳನ್ನು 17,521 ಸರ್ಕಾರಿ ನೌಕರರಿಂದಲೇ ಸಂಗ್ರಹಿಸಲಾಗಿದೆ. ತಾವು ಫಲಾನುಭವಿಗಳಾಗಲು ಅನರ್ಹವಾಗಿದ್ದರೂ ಅಂತ್ಯೋದಯ ಅನ್ನ ಯೋಜನೆ (ಎವೈವೈ) ಮತ್ತು ಆದ್ಯತಾ […]
‘ನಾವೇನೂ ಬಳೆ ತೊಟ್ಟಿಲ್ಲ’ ಎಂಬುದು ಆಡು ಭಾಷೆ; ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ: ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿರುಗೇಟು

ಉಡುಪಿ: ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಮತ್ತು ಭಜರಂಗ ದಳವನ್ನು ನಿಷೇಧಿಸುವ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ಖಂಡಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಆಡು ಭಾಷೆಯಲ್ಲಿ ‘ನಾವೇನೂ ಬಳೆ ತೊಟ್ಟಿಲ್ಲ’ ಎಂದಿರುವ ಕ್ಷುಲ್ಲಕ ವಿಚಾರವನ್ನು ದೊಡ್ಡ ವಿವಾದವನ್ನಾಗಿಸಲು ಹೊರಟಿರುವ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆಯವರ ನಡೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತೀಕ್ಷ್ಣವಾಗಿ ಖಂಡಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ ಎಂದು ತಿರುಗೇಟು ನೀಡಿದ್ದಾರೆ. ಉಚಿತ […]