ಆದಾಯ ತೆರಿಗೆ ಪಾವತಿಸುವವರಿಗೆ, ಸರ್ಕಾರಿ ನೌಕರರಿಗಿಲ್ಲ ಕಾಂಗ್ರೆಸ್ ಗ್ಯಾರಂಟಿ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಚುನಾವಣೆಗೂ ಮುನ್ನ ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯವಾಗಲಿದ್ದು, ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಆಗುವುದಿಲ್ಲ. ನಿರ್ಗತಿಕರು ಹಾಗೂ ಬಡವರನ್ನು ಗುರುತಿಸಿ ಯೋಜನೆ ತಲುಪಿಸುತ್ತೇವೆ. ಗ್ಯಾರಂಟಿ ಯೋಜನೆ ಜಾರಿ ಸ್ವಲ್ಪ ವಿಳಂಬವಾಗಬಹುದು. ಆದರೆ ಕೊಟ್ಟ ಭರವಸೆ ಈಡೇರಿಸಲು ಸರ್ಕಾರ ಬದ್ಧವಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಭಾನುವಾರದಂದು ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲಮಂಟಪ ಮಠದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಚುನಾವಣೆ ಸಮಯದಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ […]

ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಆರಂಭ

ಬೆಂಗಳೂರು: ಮೇ29 ರಿಂದ ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಈಗಾಗಲೇ ಕೆಲ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಅಧಿಕೃತವಾಗಿ ಮೇ.29ರ ಸೋಮವಾರದ ನಾಳೆಯಿಂದ ಸರ್ಕಾರಿ, ಅನುದಾನಿತ ಶಾಲೆಗಳು ತೆರೆಯಲಿದ್ದೆ. 2023-24ನೇ ಸಾಲಿನಲ್ಲಿ ಶಾಲೆಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯು ಮೇ.29ರ ದಿನಾಂಕವನ್ನು ನಿಗದಿ ಪಡಿಸಿತ್ತು. ಅದರಂತೆ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಒಂದು ಜತೆ ಸಮವಸ್ತ್ರ ಮತ್ತು ಶಾಲೆ ಆರಂಭಕ್ಕೂ […]

24 ಶಾಸಕರಿಗೆ ಸಚಿವಗಿರಿ: ಶನಿವಾರದಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 20 ರಂದು ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಜೊತೆ ಇನ್ನೂ ಎಂಟು ಮಂದಿ ಪ್ರಮಾಣ […]

ಚಿಕ್ಕಬಳ್ಳಾಪುರದಲ್ಲಿ ಅನ್ಯಸಮುದಾಯದವರಿಂದ ನೈತಿಕ ಪೊಲೀಸ್ ಗಿರಿ

ಚಿಕ್ಕಬಳ್ಳಾಪುರ: ನಗರದಲ್ಲಿ ಅನ್ಯಸಮುದಾಯದ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ ಆಕೆಯ ಸಮುದಾಯದ ಯುವಕರು ಇಬ್ಬರಿಗೂ ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ ಎನ್ನಲಾಗಿದೆ. ಈಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುರುವಾರ ಸಂಜೆ ಈ ಘಟನೆ ಚಿಕ್ಕಬಳ್ಳಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಹಿಂದೂ ಯುವಕನ ಜೊತೆ ತಮ್ಮ ಸಮುದಾಯದ ಯುವತಿ ಆಗಮಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ […]

ಆರ್ಯಭಟ ಪ್ರಶಸ್ತಿಗೆ ಭಾಜನರಾದ ವಿಷ್ಣು ದಾದಾ ಪುತ್ರಿ ಕೀರ್ತಿ ಅನಿರುದ್ಧ್

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ವಿಷ್ಣು ದಾದ ಮತ್ತು ಭಾರತಿ ವಿಷುವರ್ಧನ್ ಅವರ ಮಗಳು ಕೀರ್ತಿ ಅನಿರುದ್ಧ್ ಅವರಿಗೆ ಈ ಸಾಲಿನ ಆರ್ಯಭಟ ಪ್ರಶಸ್ತಿ ಲಭಿಸಿದೆ. ವಸ್ತ್ರ ವಿನ್ಯಾಸ ಕ್ಷೇತ್ರದಲ್ಲಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. “ತಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಇವತ್ತು ನನ್ನ ಅರ್ಧಾಂಗಿ ಶ್ರೀಮತಿ ಕೀರ್ತಿಯವರಿಗೆ ವಸ್ತ್ರವಿನ್ಯಾಸದ ಕ್ಷೇತ್ರದಲ್ಲಿ ತಮ್ಮ ಕೊಡುಗೆಯನ್ನು ಗುರುತಿಸಿ ಪ್ರತಿಷ್ಠಿತ ‘ಆರ್ಯಭಟ ಪ್ರಶಸ್ತಿ’ಯಿಂದ ಗೌರವಿಸಲಾಯಿತೆಂದು ಅತ್ಯಂತ ವಿನಮ್ರತೆಯಿಂದ ತಮ್ಮೆಲ್ಲರ ಜೊತೆ ಹಂಚಿಕೋಳ್ಳುತ್ತಿದ್ದೇನೆ. ತಮ್ಮೆಲ್ಲರಿಗೂ ಕೋಟಿ ಕೋಟಿ ಧನ್ಯವಾದಗಳು” ಎಂದು ನಟ […]