ಕಾಂಗ್ರೆಸ್ ಗ್ಯಾರಂಟಿಗೆ ಷರತ್ತುಗಳು ಅನ್ವಯ: ಕೊಟ್ಟ ಭರವಸೆ ಈಡೇರಿಸಿ ಎಂದ ವಿರೋಧ ಪಕ್ಷದ ನಾಯಕರು

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳಿಗೆ ಷರತ್ತುಗಳು ಅನ್ವಯವಾಗಿದ್ದು, ಈ ಬಗ್ಗೆ ವಿರೋಧ ಪಕ್ಷ, ಬಿಜೆಪಿಯ ನಾಯಕರು ಸರಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ. ವಿದ್ಯುತ್ ಬಿಲ್ ಬಂದ್ರೆ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್‌ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಇನ್ಯಾವ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲ ಪದವೀಧರ ನಿರುದ್ಯೋಗಿಗಳಿಗೂ […]

ಬೆಂಗಳೂರು: ಭಾರೀ ಮಳೆಗೆ ಕುಸಿದ ಕಟ್ಟಡ; ಪ್ರಾಣಾಪಾಯವಿಲ್ಲ

ಕರ್ನಾಟಕ: ಭಾರೀ ಮಳೆಗೆ ಬೆಂಗಳೂರಿನ ವಿದ್ಯಾರಾಯನಪುರದಲ್ಲಿ ಹಳೆ ಕಟ್ಟಡ ಒಂದು ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ನಗರದ ಹಲವೆಡೆ ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಲವೆಡೆ ಮರಗಳು ಉರುಳಿದ್ದು, ಕೆ.ಆರ್ ಸರ್ಕಲ್ ಪ್ರದೇಶದಲ್ಲಿ ನೀರು ತುಂಬಿ ಜನರು ಅಂಡರ್ ಪಾಸ್ ಬಳಿ ಪರದಾಡುವಂತಾಗಿದ್ದು, ಬಳಿಕ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ಬಾರಿ ಮುಂಗಾರು ಮಳೆಯು ಜೂನ್ 4 ರಂದು ಕೇರಳ ಪ್ರವೇಶಲಿದೆ ಎಂದು ಭಾರತೀಯ […]

ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ

ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ (71) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಬೆಳಗ್ಗೆ ನಿಧನರಾದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವರು, ಪರಿಷತ್ ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ […]

ಕಾಂಗ್ರೆಸ್ ಗ್ಯಾರಂಟಿ ಮುಂದಿನ ಸಂಪುಟ ಸಭೆಯ ನಂತರ ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಯದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾವು ನಿಮಗೆ 5 ಭರವಸೆಗಳನ್ನು ನೀಡಿದ್ದೇವೆ. ನಾವು ಸುಳ್ಳು ಭರವಸೆ ನೀಡುವುದಿಲ್ಲ ಎಂದು ಹೇಳಿದ್ದೆ. ನಾವು ಹೇಳಿದ್ದನ್ನು ಮಾಡುತ್ತೇವೆ. 1-2 ಗಂಟೆಗಳಲ್ಲಿ ಕರ್ನಾಟಕ ಸರ್ಕಾರದ ಮೊದಲ ಸಂಪುಟ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ 5 ಭರವಸೆಗಳು ಕಾನೂನಾಗಲಿವೆ ಎಂದಿದ್ದರು. #WATCH | We made 5 promises to you. I had said we don't make […]

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಿ ಪರಮೇಶ್ವರ, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, […]