ಕೆ. ಆರ್.ಎಸ್ ನೀರಿನ ಮಟ್ಟ 80 ಅಡಿಗೆ ಕುಸಿತದ ಪರಿಣಾಮ ಶತಮಾನದ ಲಕ್ಷ್ಮೀ ನಾರಾಯಣಸ್ವಾಮಿ ದೇಗುಲ ಗೋಚರ

ಮಂಡ್ಯ:ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಏಪ್ರಿಲ್ 20 ರಂದು 90 ಅಡಿಗೆ ಕುಸಿದಿತ್ತು. ಇದೀಗ ಮತ್ತಷ್ಟು ಕುಸಿತ ಕಂಡಿದೆ. ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 80 ಅಡಿಗೆ ಕುಸಿದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಮುಂಗಾರು ಪೂರ್ವ ಅಕಾಲಿಕ ಮಳೆ ಕೊರತೆಯಿಂದ ಈ ಬಾರಿ ಜಲಾಶಯದ ನೀರಿನ ಮಟ್ಟದಲ್ಲಿ 22 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿರುವುದು ಕಂಡುಬಂದಿದೆ. ಹಿನ್ನೀರಿನಲ್ಲಿ ಮುಳುಗಡೆ ಆಗಿದ್ದ ಶ್ರೀ ಲಕ್ಷ್ಮಿ ನಾರಾಯಣಸ್ವಾಮಿ ದೇವಸ್ಥಾನ ಗೋಚರಿಸಿದೆ. ಜನರಲ್ಲಿ ಬರದ […]

ಸರ್ಕಾರದಿಂದ ಎಣ್ಣೆ ಪ್ರಿಯರಿಗೆ ಶಾಕ್​ ಶೇ. 20ರಷ್ಟು ಮದ್ಯದ ಬೆಲೆ ದಿಢೀರ್​ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಐದು ಗ್ಯಾರಂಟಿ ಸಿಗುವ ಸಂತಸ ಒಂದೆಡೆಯಾದರೆ, ಮತ್ತೊಂದೆಡೆ ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಮೂಲಕ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವುದು ಒಂದೆಡೆ ಜನರಿಗೆ ಸಂತಸ ತಂದಿದೆ.   ಆದರೆ, ಇನ್ನೊಂದೆಡೆ ಉಚಿತ ನೆಪದಲ್ಲಿ ವಿದ್ಯುತ್ ಬೆಲೆ ಏರಿಕೆಯಾಗಿದೆ. ಜೊತೆಗೆ ಮದ್ಯ ಪ್ರಿಯರಿಗೂ ಶಾಕ್ ನೀಡಲಾಗಿದೆ. ಆದಾಯ ಸಂಗ್ರಹಿಸಲು ಸರ್ಕಾರ ಶೇ. 20 ರಷ್ಟು ಮದ್ಯದ ಬೆಲೆ ಏರಿಕೆ ಮಾಡಿದೆ. ನಿನ್ನೆಯಿಂದಲೇ […]

ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ […]

ಜೂನ್ 11 ರಂದು ಮಹಿಳೆಯರಿಗೆ ಉಚಿತ ಬಸ್ ಸಂಚಾರದ ಶಕ್ತಿ ಯೋಜನೆಗೆ ಚಾಲನೆ:

ಬೆಂಗಳೂರು: ಜೂನ್ 11 ರಂದು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಗೆ ಚಾಲನೆ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜೂನ್ 9 ರಂದು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ ನಿರ್ದೇಶನ ನೀಡಿದರು. ಈ ಯೋಜನೆಯಿಂದ ಶೇ.50ರಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಖಾತರಿ ಯೋಜನೆಗಳಲ್ಲಿ ಇದು ಮೊದಲನೆಯದ್ದಾಗಿದ್ದು, ಕರ್ನಾಟಕದ ಜನರಿಗಾಗಿ ಇದನ್ನು […]

45 ಮರಗಳ ಸ್ಥಳಾಂತರಕ್ಕೆ ಹೈಕೋರ್ಟ್ ಅನುಮತಿ ಮೆಟ್ರೋ ಕಾಮಗಾರಿಗೆ 203 ಮರಗಳ ತೆರವು

ಬೆಂಗಳೂರು: ನಗರದ ದೂರವಾಣಿ ನಗರದಿಂದ ಕೆಂಪಾಪುರದವರೆಗಿನ ಮೆಟ್ರೋ ಮಾರ್ಗದ ಕಾಮಗಾರಿಗಾಗಿ 203 ಮರಗಳನ್ನು ತೆರವುಗೊಳಿಸುವುದು, 45 ಮರಗಳನ್ನು ಸ್ಥಳಾಂತರ ಮಾಡುವುದಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.ಮೆಟ್ರೋ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಮರಗಳ ತೆರವು ಹಾಗೂ ಸ್ಥಳಾಂತರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಟಿ. ದತ್ತಾತ್ರೇಯ ದೇವರು ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಮತ್ತು ಎಂ.ಜೆ.ಎಸ್ ಕಮಲ್ ಅವರಿದ್ದ ಪೀಠ, ಮರ ಅಧಿಕಾರಿಗೆ ಅನುಮತಿ ನೀಡಿ ಆದೇಶಿಸಿದೆ. ಮೆಟ್ರೋ […]