ಪಕ್ಷದ ಸೋಲಿಗೆ ಹೊಣೆ ಹೊತ್ತ ರಾಜ್ಯಾಧ್ಯಕ್ಷ: ಲೋಕಸಭೆ ಚುನಾವಣೆಗಾಗಿ ಶ್ರಮಿಸುತ್ತೇವೆ ಎಂದ ನಳಿನ್ ಕುಮಾರ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸೋತಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿದೆ. ಈ ಸೋಲಿನ ಹೊಣೆಯನ್ನು ತಾವು ಹೊತ್ತುಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದು, ಮುಂಬರುವ ಲೋಕಸಭಾ ಚುನಾವಣೆ ಕಡೆ ಗಮನ ಹರಿಸಿ ಗೆಲ್ಲುವ ಭರವಸೆಯನ್ನು ಅವರು ನೀಡಿದ್ದಾರೆ. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಲಿನ ಹೊಣೆಯನ್ನು ಸಂಪೂರ್ಣವಾಗಿ ನಾನೇ ಹೊತ್ತುಕೊಳ್ಳುತ್ತೇನೆ. ವಿರೋಧ ಪಕ್ಷದಲ್ಲಿದ್ದುಕೊಂಡು ಒಳ್ಳೆಯ ಕೆಲಸ ಮಾಡುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ […]

128 ಕ್ಷೇತ್ರಗಳಲ್ಲಿ ಮುನ್ನಡೆಯೊಂದಿಗೆ ಬಹುಮತದತ್ತ ಕಾಂಗ್ರೆಸ್ ; ಚಳ್ಳಕೆರೆಯಲ್ಲಿ ಗೆಲುವು ದಾಖಲು

ಬೆಂಗಳೂರು: ಬಹು ಸುತ್ತಿನ ಇವಿಎಂ ಎಣಿಕೆಯ ನಂತರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತದತ್ತ ಮುನ್ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚಿಸುವುದು ಬಹುತೇಕ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷವು 128 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 68 ರಲ್ಲಿ, ಜೆ.ಡಿ.ಎಸ್ 22 ಅನ್ಯರು 6 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದಾರೆ. ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅದಾಗಲೇ ಗೆಲುವು ಸಾಧಿಸಿದೆ.

ಆರಂಭಿಕ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಕಾಂಗ್ರೆಸ್; ಮೊದಲನೆ ಹಂತದಲ್ಲಿ 116 ಸೀಟುಗಳಲ್ಲಿ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮೊದಲನೆ ಹಂತದ ಎಣಿಕೆಯಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದ್ದು, 116 ಸೀಟುಗಳಲ್ಲಿ ಮುನ್ನಡೆ ಕಾಯುಕೊಂಡಿದೆ. ಅಂಚೆ ಮತದಾನದ ಎಣಿಕೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗುತ್ತಿದೆ. ಭಾರತೀಯ ಪಕ್ಷ 83 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಜೆ.ಡಿ.ಎಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ. ಇತರ 01 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಏತನ್ಮಧ್ಯೆ ಶ್ರೀರಾಮುಲು, ಸುಧಾಕರ್, ರಮೇಶ್ ಜಾರಕಿಹೊಳಿ, ಕುಮಾರಸ್ವಾಮಿ, ಬಿ.ಸಿ.ಪಾಟೀಲ್, ಸಿ.ಟಿ.ರವಿ, ಕಾರಜೋಳ, ಸೋಮಣ್ಣ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ರಾಜ್ಯದಲ್ಲಿ ಇನ್ನೆರಡು ದಿನವೂ ಭಾರೀ ಮಳೆ ಸಾಧ್ಯತೆ: ಹವಾಮಾನ ವರದಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಗುರುವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು […]

‘ಮತದಾನ’-ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ-2023 ರ ಮತದಾನದ ಹಬ್ಬವನ್ನು ಸ್ಮರಣೀಯವಾಗಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಪತ್ರಿಕಾ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ವಿಷಯ: ಮತದಾನ ಅರ್ಹತೆ: ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರು ಬಹುಮಾನ: ಪ್ರಥಮ: 25,000/- ದ್ವಿತೀಯ: 15,000/- ತೃತೀಯ: 10,000/- ಸಮಾಧಾನಕರ: 6,000/- ವಿಶೇಷ: 5000/- ಛಾಯಾಚಿತ್ರಗಳನ್ನು ಸಲ್ಲಿಸಲು ಕೊನೆ ದಿನ: 20-05-2023, ಶನಿವಾರ ಸಂಜೆ 5 ಗಂಟೆ ವಿಳಾಸ: [email protected]