ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ: ಯಾವ ನಗರದಲ್ಲಿ ಎಷ್ಟು ಹೆಚ್ಚಳ ತಿಳಿದುಕೊಳ್ಳಿ

ಬೆಂಗಳೂರು: ರಾಜ್ಯದ ಜನತೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಉಚಿತ ವಿದ್ಯುತ್ ನಿಂದ ಆಗುವ ನಷ್ಟವನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರವನ್ನು ಹೆಚ್ಚಿಸಿದೆ ಎನ್ನಲಾಗಿದ್ದು, ಇದರ ವಿರುದ್ದ ವಿರೋಧ ಪಕ್ಷ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಾಗರಿಕರು ತಮ್ಮ ವಿದ್ಯುತ್ ಬಿಲ್‌ಗಳನ್ನು ಪಾವತಿಸುವಾಗ 200 ಯೂನಿಟ್‌ಗಳಿಗಿಂತ ಹೆಚ್ಚಿನ ಸ್ಲ್ಯಾಬ್‌ ಹೊಂದಿದವರಾಗಿದ್ದರೆ ಈ ತಿಂಗಳು ಪ್ರತಿ ಯೂನಿಟ್‌ಗೆ 2.89 ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಮತ್ತು […]

ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಯ ವಿವರವಾದ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ: ಮಾಹಿತಿ ಇಲ್ಲಿದೆ

ಬೆಂಗಳೂರು: ಪ್ರತಿ ತಿಂಗಳು 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಎಲ್ಲಾ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡುವ ಗೃಹ ಜ್ಯೋತಿ ಯೋಜನೆಯ ಮತ್ತು ಸರ್ಕಾರಿ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಸೋಮವಾರ ವಿವರವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗೃಹಜ್ಯೋತಿ 200 ಯೂನಿಟ್‌ಗಳ ಗರಿಷ್ಠ ಮಿತಿಯೊಂದಿಗೆ ಉಚಿತ ವಿದ್ಯುತ್ ಸರಬರಾಜು ಮನೆಯ ಮಾಸಿಕ ಸರಾಸರಿ ಬಳಕೆಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಕರ್ನಾಟಕ ಇಂಧನ ಇಲಾಖೆ ಹೊರಡಿಸಿದ […]

ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ತಿರುಚಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ: ಬಿಜೆಪಿ

ಬೆಂಗಳೂರು: ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ (ಕೆಪಿಎಸ್‌ಪಿಸಿಎ) ಅಸ್ತಿತ್ವದಲ್ಲಿರುವ ನಿಬಂಧನೆಗಳನ್ನು ತಿರುಚಲು ಆಡಳಿತಾರೂಢ ಕಾಂಗ್ರೆಸ್ ಪ್ರಯತ್ನಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಭಾನುವಾರ ಎಚ್ಚರಿಕೆ ನೀಡಿದೆ. ಗೋಹತ್ಯೆ ನಿಷೇಧವನ್ನು ಎಮ್ಮೆಗಳಿಗೂ ವಿಸ್ತರಿಸದಿರುವುದನ್ನು ಪ್ರಶ್ನಿಸಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಗದ್ದಲ ಎಬ್ಬಿಸಿದ ಒಂದು ದಿನದ ಬಳಿಕ ಈ ಎಚ್ಚರಿಕೆ ಬಂದಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, 2021 ರಲ್ಲಿ ಕೆಪಿಎಸ್‌ಪಿಸಿಎ ಜಾರಿಗೆ ಬಂದಿತು ಮತ್ತು ಅದರ ನಿಬಂಧನೆಗಳನ್ನು ಚೆನ್ನಾಗಿ […]

ಹೊಸದಾಗಿ 50 ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಮುಂದಾದ ಬಿಬಿಎಂಪಿ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ ಸುಮಾರು 50 ಇಂದಿರಾ ಕ್ಯಾಂಟೀನ್​ಗಳು ತಲೆ ಎತ್ತಲಿವೆ. ಬೆಂಗಳೂರಿನಲ್ಲಿ ಸುಮಾರು 175 ಇಂದಿರಾ ಕ್ಯಾಂಟೀನ್​ಗಳಿದ್ದು, 163 ಕ್ಯಾಂಟೀನ್​​ಗಳು ಸದ್ಯ ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆಗೆ ಇನ್ನೂ ಸುಮಾರು 50 ಹೊಸ ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಬಿಬಿಎಂಪಿ ಮುಂದಾಗಿದೆ. ವಾರ್ಡ್‌ಗೊಂದರಂತೆ ಇಂದಿರಾ ಕ್ಯಾಂಟೀನ್​ಗಳು ಬಡವರ ಹೊಟ್ಟೆಯನ್ನು ತುಂಬಿಸುತ್ತಿವೆ. ಕ್ಯಾಂಟೀನ್‌ ಕಟ್ಟಡ ಇಲ್ಲದ ವಾರ್ಡ್‌ಗಳಲ್ಲಿ ಮೊಬೈಲ್‌ ಕ್ಯಾಂಟೀನ್‌ಗಳು ಸೇವೆ ನೀಡುತ್ತಿವೆ. ಇದರ ಜೊತೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ 50 ಇಂದಿರಾ ಕ್ಯಾಂಟಿನ್​ಗಳು […]

ಹಿರಿಯರ ಮಾತಿಗೆ ಬೆಲೆ ಕೊಟ್ಟು ತಲೆಬಾಗಬೇಕಾಯಿತು; ತಾಳ್ಮೆ ಕಾಯ್ದುಕೊಳ್ಳಿ: ಅಭಿಮಾನಿಗಳಿಗೆ ಡಿಕೆಶಿ ಕರೆ

ಕನಕಪುರ: ಮುಖ್ಯಮಂತ್ರಿ ಪಟ್ಟಕ್ಕಾಗಿ ತಮ್ಮ ಆಕಾಂಕ್ಷೆಗಳನ್ನು ಜೀವಂತವಾಗಿರಿಸಿಕೊಂಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ “ತಾಳ್ಮೆಯಿಂದ” ಇರಿ ಮತ್ತು “ನಿರಾಶೆಗೊಳ್ಳಬೇಡಿ” ಎಂದು ಕೇಳಿಕೊಂಡಿದ್ದಾರೆ. ದೊಡ್ಡ ಜವಾಬ್ದಾರಿಯಾದ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ನೀವೆಲ್ಲರೂ ಭಾವಿಸಿ ಪ್ರೀತಿಯ ಸುರಿಮಳೆಗೈದಿದ್ದೀರಿ, ಯಾರೂ ನಿರಾಶರಾಗುವ ಅಗತ್ಯವಿಲ್ಲ ಎಂದು ಶನಿವಾರ ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ. ತಮ್ಮನ್ನು ಅಧಿಕಾರಕ್ಕೆ ತಂದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿ ಮಾತನಾಡಿ, ನನ್ನನ್ನು ಮುಖ್ಯಮಂತ್ರಿಯನ್ನಾಗಿ […]