ಏರ್ ಮಾರ್ಷಲ್ ಕಡೆಯಿಂದ ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ಕಿತು ಬಹುಮಾನ

ಬೆಳಗಾವಿ: ವೀರರಿಗೆ ಏರ್ ಮಾರ್ಷಲ್ ಕಡೆಯಿಂದ ಬಹುಮಾನ ವಿತರಣೆ ,ಬೆಳಗಾವಿ ಏರ್ಮನ್ ತರಬೇತಿ ಪೂರ್ಣಗೊಂಡ ಅಗ್ನಿವೀರರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. […]
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಪುರುಷರಿಗೆ ಶೇ.50 ಆಸನ ಮೀಸಲು!

ಬೆಂಗಳೂರು: ಜೂ.11ರಿಂದ ಕಾಗ್ರೆಸ್ ಗ್ಯಾರಂಟಿಯ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಜಾರಿಯಾಗಲಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡಲು ಸರ್ಕಾರ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಸ್ ಪ್ರಯಾಣಕ್ಕೆ ಮುಂದಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಟಿಕೆಟ್ ಪಡೆದು ಪ್ರಯಾಣ ಮಾಡುವ ಪುರುಷರಿಗೆ ಆಸನ ಕೊರತೆಯಾಗಬಹುದು. ಇದರಿಂದ ಮೊದಲೆ ನಷ್ಟದಲ್ಲಿರುವ […]
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ: ಯೋಜನೆಯ ಅರ್ಹತೆ ಮತ್ತು ಮಾನದಂಡಗಳು ಇಂತಿವೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ 5 ಗ್ಯಾರೆಂಟಿ ಜಾರಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿ 1: ಯುವನಿಧಿ ಯೋಜನೆಯಡಿ 2022-23 ರಲ್ಲಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿ ಹೆಸರು ನೋದಾಯಿಸಿಕೊಂಡ ಪಧವೀದರರಿಗೆ ಪ್ರತಿ ತಿಂಗಳೂ 3 ಸಾವಿರ ರೂ ಹಾಗೂ ಡಿಪ್ಲೋಮಾ ಆದವರಿಗೆ 1.500 ಸಾವಿರ ರೂ. 24 ತಿಂಗಳು(2 ವರ್ಷ)ಕಾಲ ಮಾತ್ರ. ಆದರೆ 2 […]
ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದಲು ಆದೇಶ: ಡಾ. ಎಚ್‌ಸಿ ಮಹದೇವಪ್ಪ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳೆಲ್ಲರೂ ಸಂವಿಧಾನದ ಪೀಠಿಕೆ ಓದುವಂತೆ ಪೂರಕ ಆದೇಶ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರದಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನದಲ್ಲಿ ಸೂಚಿತ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಓದಿಸುವುದಕ್ಕೆ ಪೂರಕ ಆದೇಶ ಹೊರಡಿಸಲು […]
ಅರಣ್ಯಕ್ಕೆ ಸಂಬಂಧಿಸಿದ ಕೇಳರಿಯದ ಕನ್ನಡ ಪದ ಪರಿಚಯ: ಅರಣ್ಯ ಇಲಾಖೆಯಿಂದ ವಿನೂತನ ಪ್ರಯತ್ನ!!

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯು ತನ್ನ ವಿನೂತನ ಪ್ರಯತ್ನದಲ್ಲಿ ಕೇಳರಿಯದ ಕನ್ನಡದ ಪದಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ತನ್ನ ಟ್ವಿಟ್ವರ್ ಹ್ಯಾಂಡಲ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅರಣ್ಯ ಇಲಾಖೆಯು “ಕೇಳರಿಯದ ಕನ್ನಡ ಪದ ಪರಿಚಯ. ಇಂದಿನಿಂದ ಪ್ರತಿವಾರ ಅರಣ್ಯಕ್ಕೆ ಸಂಬಂಧ ಪಟ್ಟ ಒಂದು ಅಪರೂಪದ ಕನ್ನಡ ಪದ ಪರಿಚಯ ಮಾಡಿಕೊಳ್ಳೋಣ” ಎಂದು ಟ್ವೀಟ್ ಮಾಡಿದ್ದು, ಇಂದು ‘ಕಾಸರ’ ಎನ್ನುವ ಪದದ ಅರ್ಥವಿವರಣೆಯನ್ನು ನೀಡಿದೆ. ಕಾಸರ ಎಂದರೆ ಕಾಡು, ಕಾಂತಾರ, ಅಡವಿ, ಅರಣ್ಯ(ಎತ್ತರವಾಗಿ […]