ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಕಾನೂನು ತಕ್ಷಣ ಬದಲಾಯಿಸಲು ಸಾಧ್ಯವಿಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಸಿಂಧುತ್ವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದ ನಡುವೆ, ಹೊಸದಾಗಿ ನೇಮಕಗೊಂಡ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತರಗತಿಗಳಲ್ಲಿ ಹಿಜಾಬ್ ಅನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಸರ್ಕಾರವು ತಕ್ಷಣವೇ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದ ಭಾಗವಾಗಿ ಹಿಜಾಬ್ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ ಬಂಗಾರಪ್ಪ, “ಹಿಜಾಬ್‌ನಲ್ಲಿನ […]
ಚುನಾವಣಾ ತಂತ್ರಗಾರ ಸುನಿಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನ: ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರರಾಗಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎನ್ನಲಾದ ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳು ಅವರನ್ನು ಸಂಪುಟ ಸಚಿವರ ದರ್ಜೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ಬುಧವಾರ ನೇಮಿಸಲಾಗಿದೆ. ಸುನಿಲ್ ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೂಡಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಜನಿಸಿರುವ ಸುನಿಲ್ ಅಲ್ಲೇ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಮೂಲತಃ ತೆಲುಗು ಭಾಷಿಕರಾಗಿದ್ದರೂ, ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಈ ಹಿಂದೆ ಬಿಜೆಪಿ, ಡಿಎಂಕೆ, […]
ಚಿಕ್ಕಮಗಳೂರು: ಹಾವು ಹಿಡಿಯುತ್ತಿದ್ದ ಸ್ನೇಕ್ ನರೇಶ್ ತಾನೇ ಹಿಡಿದ ನಾಗರಹಾವು ಕಚ್ಚಿ ಮೃತ

ಚಿಕ್ಕಮಗಳೂರು: ಇಲ್ಲಿನ ಹಾವು ಹಿಡಿಯುವ ಸ್ನೇಕ್ ನರೇಶ್ ಎಂಬ ವ್ಯಕ್ತಿಯು ತಾವೇ ಹಿಡಿದ ನಾಗರಹಾವು ಕಚ್ಚಿ ಮಂಗಳವಾರ ಮೃತಪಟ್ಟಿದ್ದಾರೆ. ನರೇಶ್ (55) ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಬೆಳಗ್ಗೆ ನಾಗರಹಾವು ಹಿಡಿದು ರಕ್ಷಣೆ ಮಾಡಿ ಸ್ಕೂಟಿಯಲ್ಲಿ ಇಟ್ಟು ಮತ್ತೊಂದು ಹಾವಿದೆ ಎಂದು ಹಿಡಿಯಲು ಹೊರಟ್ಟಿದ್ದರು. ಈ ವೇಳೆ ಸ್ಕೂಟಿಯ ಸೀಟ್ ತೆಗೆದು ಹಾವಿದ್ದ ಚೀಲ ಸರಿಪಡಿಸಲು ಮುಂದಾದಾಗ ನಾಗರಹಾವು ನರೇಶ್ ಅವರ ಕೈಗೆ ಕಚ್ಚಿದೆ. ಹಾವು ಕಚ್ಚಿದ ತಕ್ಷಣವೇ ಸ್ಥಳೀಯರು ನರೇಶ್ […]
ಗೃಹ-ಲಕ್ಷ್ಮಿ ಯೋಜನೆ: ಹಣ ಪಡೆಯಲು ಅತ್ತೆಗೆ ಅರ್ಹತೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಭರವಸೆ ನೀಡಿತ್ತು. ಆದರೆ ಇದೀಗ ಈ ಯೋಜನೆಯನ್ವಯ 2000 ರೂ ಪಡೆಯಲು ಅತ್ತೆ-ಸೊಸೆಯರಲ್ಲಿ ತಿಕ್ಕಾಟ ನಡೆಯುತ್ತಿರುವ ಪ್ರಸಂಗಗಳು ವರದಿಯಾಗುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರಣಾಳಿಕೆಯಲ್ಲಿ ಸ್ಪಷ್ಟತೆಯ ಕೊರತೆ ಇದ್ದು, ಕುಟುಂಬದ ಯಜಮಾನಿಯಾದ ಮಹಿಳೆಗೆ ಮಾತ್ರ ಪ್ರತೀ ತಿಂಗಳು 2000 ರೂ ನೀಡುವ ಬಗ್ಗೆ ಭರವಸೆ ನೀಡಲಾಗಿತ್ತು. […]
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಏರಿಕೆ

ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು 4% ಹೆಚ್ಚಿಸಿ ಆದೇಶ ಹೊರಡಿಸಿದೆ. 2023ರ ಜನವರಿ ತಿಂಗಳಿನಿಂದಲೇ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಇದುವರೆಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 31 ಇದ್ದು, ಇದೀಗ ಇದು ಶೇ. 35 ಕ್ಕೆ ಏರಿಕೆಯಾಗಿದೆ.