24 ಶಾಸಕರಿಗೆ ಸಚಿವಗಿರಿ: ಶನಿವಾರದಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 20 ರಂದು ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಜೊತೆ ಇನ್ನೂ ಎಂಟು ಮಂದಿ ಪ್ರಮಾಣ […]
ಚಿಕ್ಕಬಳ್ಳಾಪುರದಲ್ಲಿ ಅನ್ಯಸಮುದಾಯದವರಿಂದ ನೈತಿಕ ಪೊಲೀಸ್ ಗಿರಿ

ಚಿಕ್ಕಬಳ್ಳಾಪುರ: ನಗರದಲ್ಲಿ ಅನ್ಯಸಮುದಾಯದ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ ಆಕೆಯ ಸಮುದಾಯದ ಯುವಕರು ಇಬ್ಬರಿಗೂ ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ ಎನ್ನಲಾಗಿದೆ. ಈಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುರುವಾರ ಸಂಜೆ ಈ ಘಟನೆ ಚಿಕ್ಕಬಳ್ಳಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಹಿಂದೂ ಯುವಕನ ಜೊತೆ ತಮ್ಮ ಸಮುದಾಯದ ಯುವತಿ ಆಗಮಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ […]
ಆರ್ಯಭಟ ಪ್ರಶಸ್ತಿಗೆ ಭಾಜನರಾದ ವಿಷ್ಣು ದಾದಾ ಪುತ್ರಿ ಕೀರ್ತಿ ಅನಿರುದ್ಧ್

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ವಿಷ್ಣು ದಾದ ಮತ್ತು ಭಾರತಿ ವಿಷುವರ್ಧನ್ ಅವರ ಮಗಳು ಕೀರ್ತಿ ಅನಿರುದ್ಧ್ ಅವರಿಗೆ ಈ ಸಾಲಿನ ಆರ್ಯಭಟ ಪ್ರಶಸ್ತಿ ಲಭಿಸಿದೆ. ವಸ್ತ್ರ ವಿನ್ಯಾಸ ಕ್ಷೇತ್ರದಲ್ಲಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. “ತಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಇವತ್ತು ನನ್ನ ಅರ್ಧಾಂಗಿ ಶ್ರೀಮತಿ ಕೀರ್ತಿಯವರಿಗೆ ವಸ್ತ್ರವಿನ್ಯಾಸದ ಕ್ಷೇತ್ರದಲ್ಲಿ ತಮ್ಮ ಕೊಡುಗೆಯನ್ನು ಗುರುತಿಸಿ ಪ್ರತಿಷ್ಠಿತ ‘ಆರ್ಯಭಟ ಪ್ರಶಸ್ತಿ’ಯಿಂದ ಗೌರವಿಸಲಾಯಿತೆಂದು ಅತ್ಯಂತ ವಿನಮ್ರತೆಯಿಂದ ತಮ್ಮೆಲ್ಲರ ಜೊತೆ ಹಂಚಿಕೋಳ್ಳುತ್ತಿದ್ದೇನೆ. ತಮ್ಮೆಲ್ಲರಿಗೂ ಕೋಟಿ ಕೋಟಿ ಧನ್ಯವಾದಗಳು” ಎಂದು ನಟ […]
ಬಸ್ ನಲ್ಲಿ ಟಿಕೆಟ್ ಕೊಳ್ಳಲು ಮಹಿಳೆಯರ ಹಿಂದೇಟು: ರಾಜ್ಯ ಸಾರಿಗೆ ಸಿಬ್ಬಂದಿಗಳ ಪರದಾಟ; ಸಿಎಂಗೆ ಪತ್ರ

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ಅನ್ನು ಕಾಂಗ್ರೆಸ್ ಪಕ್ಷವು ನೀಡಿದ್ದು, ಇದೀಗ ಮಹಿಳೆಯರು ಬಸ್ ಪ್ರಯಾಣದ ಸಂದರ್ಭದಲ್ಲಿ ಟಿಕೆಟ್ ಕೊಳ್ಳಲು ನಿರಾಕರಣೆ ಮಾಡುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಮಹಿಳೆಯರಿಂದ ಟಿಕೆಟ್ ಶುಲ್ಕವನ್ನು ಪಡೆಯಲು ಸಾರಿಗೆ ಸಿಬ್ಬಂದಿಗಳು ಹರಸಾಹಸ ಪಡಬೇಕಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಎಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ […]
ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್ ನಿಷೇಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಖರ್ಗೆ, ‘ಬಿಜೆಪಿಗೆ ಕಷ್ಟವಾದರೆ ಪಾಕಿಸ್ತಾನಕ್ಕೆ ಹೋಗಲಿ’ ಎಂದು ಹೇಳಿದರು. ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಗೆ ನಿಷೇಧ ಹೇರಲಾಗುವುದು ಎಂದು […]