ನಿಟ್ಟೆಯಲ್ಲಿ ಸೆ.23 ಮತ್ತು ಸೆ.24 ರಂದು ‘ಎಐಇನ್ನೋವೇಶನ್ 2025 – ಕೋಡ್4ಭಾರತ್’ ಫೈನಲ್ಸ್

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲುಂಕರ್ ಅವರ ನೇತೃತ್ವದಲ್ಲಿ ಕಿಂಡ್ರೆಲ್ ಹಾಗೂ ಮೈಕ್ರೋಸಾಫ್ಟ್ ಸಂಸ್ಥೆಗಳ ಸಹಯೋಗದೊಂದಿಗೆ 24 ಗಂಟೆಗಳ ಗ್ರ್ಯಾಂಡ್ ಫಿನಾಲೆ – ಕೋಡ್4ಭಾರತ್ ಹ್ಯಾಕಥಾನ್ ನ್ನು ಸೆ.23 ಮತ್ತು ಸೆ.24 ರಂದು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಕಿಂಡ್ರೆಲ್ ಸಂಸ್ಥೆಯ ಇಂಡಿಯಾ ಡೆಲಿವರಿ ಲೀಡರ್ಶಿಪ್ ಉಪಾಧ್ಯಕ್ಷ ಶಂಕರ ಶ್ರೀನಿವಾಸನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.  ಕಿಂಡ್ರೆಲ್  ಸಂಸ್ಥೆಯ ನಿರ್ದೇಶಕ ಡಾ. ರಾಜ್ ಮೋಹನ್ ಸಿ ಮತ್ತು ಮೈಕ್ರೋಸಾಫ್ಟ್ ನ […]

ಹಮಾಸ್‌ ಉಗ್ರರನ್ನು ಗುರಿಯಾಗಿಸಿ ಗಾಜಾ‌ ಮೇಲೆ ಇಸ್ರೇಲ್‌ ದಾಳಿ; ಮಕ್ಕಳು, ಮಹಿಳೆಯರು ಸೇರಿ 34 ಮಂದಿ ಮೃತ್ಯು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ಯಾಲೆಸ್ತೀನ್‌ ಅನ್ನು ಸ್ವತಂತ್ರ ರಾಷ್ಟ್ರವೆಂದು ಗುರುತಿಸಲು ಹಲವು ದೇಶಗಳು ಸಿದ್ಧತೆ ನಡೆಸಿರುವ ಮಧ್ಯೆಯೇ ಇಸ್ರೇಲ್‌ ನಡೆಸಿದ ದಾಳಿಗೆ ಗಾಜಾದಲ್ಲಿ ಮಕ್ಕಳು, ಮಹಿಳೆಯರು ಸೇರಿ 34 ಜನರು ಮೃತ­ಪಟ್ಟಿ­ದ್ದಾರೆ. ಇಸ್ರೇಲ್‌ ಹಮಾಸ್‌ ಉಗ್ರರನ್ನು ಗುರಿಯಾಗಿಸಿದೆ ಎಂದು ಸಮರ್ಥಿಸುತ್ತಿದ್ದು, ಇತ್ತ ನಾಗರಿಕ ಪ್ರದೇಶಗಳ ಮೇಲೂ ದಾಳಿಯಾಗುತ್ತಿದೆ. ಹಮಾಸ್‌ನ ಸ್ನೈಪರ್‌ ಆಗಿದ್ದ ಮಾಜೆದ್‌ ಅಬು ಸೆಲ್ಮಿಯಾರನ್ನು ಹತ್ಯೆಗೈಯಲಾಗಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಆದರೆ ಇದನ್ನು ಶೀಫಾ ಆಸ್ಪತ್ರೆಯ ನಿರ್ದೇಶಕ ಡಾ.ಮೊಹಮ್ಮದ್‌ ಸೆಲ್ಮಿಯಾ ನಿರಾಕರಿಸಿದ್ದಾರೆ.

ಕರಾವಳಿಯ ಕಂಬಳ ರಾಜ್ಯ ಕ್ರೀಡೆ ಮಾನ್ಯತೆಯ ಅಂತಿಮ ಪಟ್ಟಿಯಲ್ಲಿ! ಕಂಬಳ ಪ್ರಿಯರು ಖುಷ್

ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ. ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಸಮಿತಿಯ […]

ರಾಜ್ಯದಲ್ಲಿ 9 ಮುಜರಾಯಿ ವ್ಯಾಪ್ತಿಯ ದೇಗುಲಗಳ ಸೇವಾಶುಲ್ಕ ಹೆಚ್ಚಳ!

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ದೇವರ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನು, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ […]

ಆಗುಂಬೆ ಘಾಟಿ ತಿರುವಿನಲ್ಲಿ ಭಾರೀ ಭೂ ಕುಸಿತ: ಮರ ಬಿದ್ದು ವಾಹನ ಸಂಚಾರ ಸ್ಥಗಿತ.

ಶಿವಮೊಗ್ಗ: ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾದ ಘಟನೆ‌ ಶುಕ್ರವಾರ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭೂ ಕುಸಿತ ವಾಗಿದ್ದು, ರಸ್ತೆ ಮೇಲೆ ಧರೆಯ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ವಾಹನ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾರೆ. ಇನ್ನು ಟ್ರಾಫಿಕ್ ಜಾಮ್ ಕೂಡ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. […]