ಟ್ಯಾಕ್ಸಿ, ಸರಕು ವಾಹನ, ಆಟೋರಿಕ್ಷಾ ಖರೀದಿಗೆ ಸಿಗಲಿದೆ 2.5 ಲಕ್ಷ ರೂ. ಸಬ್ಸಿಡಿ; ಯಾರಿಗಿದೆ ಅರ್ಹತೆ?

ಕರ್ನಾಟಕದಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಉತ್ತಮ ಅವಕಾಶ ಒದಗಿಸುವ ಉದ್ದೇಶದಿಂದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ವಿಶೇಷ ವಾಹನ ಖರೀದಿ ಸಹಾಯಧನ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ಟ್ಯಾಕ್ಸಿ, ಪ್ರಯಾಣಿಕ ಆಟೋರಿಕ್ಷಾ ಹಾಗೂ ಸರಕು ವಾಹನಗಳನ್ನು ಖರೀದಿಸಲು ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ. ಯೋಜನೆ ಕುರಿತು ಒಂದಿಷ್ಟು ಈ ಯೋಜನೆ KMDC ಹಾಗೂ ರಾಷ್ಟ್ರೀಕೃತ/ಅನುಸೂಚಿತ ಬ್ಯಾಂಕ್‌ಗಳ ಸಹಯೋಗದಲ್ಲಿ ಜಾರಿಯಲ್ಲಿದೆ. ಅರ್ಹ ಫಲಾನುಭವಿಗಳು ಬ್ಯಾಂಕ್ ಮೂಲಕ ಸಾಲ ಪಡೆಯುವಾಗ, ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. […]
ಪುತ್ತೂರು: ಲಾರಿ–ಬೈಕ್ ಅಪಘಾತ; ವಿದ್ಯಾರ್ಥಿ ಸಾವು, ಯುವತಿಗೆ ಗಂಭೀರ ಗಾಯ

ಪುತ್ತೂರು: ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ ಹಿಂಬದಿ ಸವಾರಿಯಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ಗಾಯಗೊಂಡ ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿ ದ್ವಿಚಕ್ರ ವಾಹನಗಳಲ್ಲಿ ಹಿಂದಿರುಗುತ್ತಿದ್ದ ವಿದ್ಯಾರ್ಥಿಗಳ ತಂಡದ ಮೇಲೆ ಲಾರಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ […]
ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ‘ಶಿಕ್ಷಣ ಗ್ಯಾರಂಟಿ’ ಘೋಷಿಸಿದ ಸರಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹೊಸ ಜಾಹೀರಾತು ಅಭಿಯಾನ ಆರಂಭಿಸಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವುದಾಗಿ ‘ಶಿಕ್ಷಣ ಗ್ಯಾರಂಟಿ’ ಘೋಷಿಸಿದೆ. ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿ ಜೀವನದ ಮಹತ್ವದ ಹಂತಗಳಾಗಿವೆ. ಇತ್ತೀಚೆಗೆ ಪ್ರಕಟವಾದ ಫಲಿತಾಂಶಗಳಲ್ಲಿ ರಾಜ್ಯ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯ ತೇರ್ಗಡೆ ಪ್ರಮಾಣ ಕಂಡುಬಂದಿದೆ. ಈ ವರ್ಷ ಸರ್ಕಾರಿ ಶಾಲೆ-ಕಾಲೇಜುಗಳೂ ಉತ್ತಮ ಸಾಧನೆ ಮಾಡಿದ್ದು, ಎಸ್ಎಸ್ಎಲ್ಸಿಯಲ್ಲಿ ಶೇ.94.10 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.86.48 ಫಲಿತಾಂಶ ದಾಖಲಾಗಿದೆ. […]
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಕೆಐಎಡಿಬಿ ಭೂಸ್ವಾಧೀನ ಕಾರ್ಯಕ್ಕೆ ಸಂಬಂಧಿಸಿದ ಬಾಕಿ ಕಂದಾಯ ಪ್ರಕರಣವನ್ನು ಇತ್ಯರ್ಥಪಡಿಸಲು 15 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಹಾಯಕ ಆಯುಕ್ತರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ. ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿ ನಾಗಪ್ರಶಾಂತ್ ಅವರು ಬೆಂಗಳೂರಿನ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಲ್ಲಿ ವಿಶೇಷ ಸಹಾಯಕ ಆಯುಕ್ತ (ಉತ್ತರ) ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿ-1 ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು […]
ಗಿಗ್ ಕಾರ್ಮಿಕರಿಗೆ ಗುಡ್ ನ್ಯೂಸ್, ಪಿಂಚಣಿ, ಮಾತೃತ್ವ ಸೌಲಭ್ಯ ಸೇರಿ ಭದ್ರತೆ ಯೋಜನೆ ಜಾರಿಗೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದ ಗಿಗ್ ಕಾರ್ಮಿಕರಿಗೆ ಶೀಘ್ರದಲ್ಲೇ ಸಾಮಾಜಿಕ ಭದ್ರತಾ ಸೌಲಭ್ಯಗಳು ದೊರೆಯುವ ಸಾಧ್ಯತೆ ಇದೆ. ಅಪಘಾತದಿಂದ ಶಾಶ್ವತ ಅಂಗವೈಕಲ್ಯ ಉಂಟಾದರೆ ಪಿಂಚಣಿ, ಮಹಿಳಾ ಕಾರ್ಮಿಕರಿಗೆ ಮಾತೃತ್ವ ಸೌಲಭ್ಯ ಹಾಗೂ ಕೆಲವು ತಿಂಗಳ ಆರ್ಥಿಕ ನೆರವು ನೀಡುವ ಯೋಜನೆ ಸಿದ್ಧಗೊಳ್ಳುತ್ತಿದೆ. ಅರ್ಹತೆಯನ್ನು 90 ದಿನಗಳ ಅವಧಿಯಲ್ಲಿ ಕನಿಷ್ಠ ಗಿಗ್ ಕೆಲಸಗಳನ್ನು ಪೂರ್ಣಗೊಳಿಸಿರುವ ಆಧಾರದಲ್ಲಿ ನಿಗದಿಪಡಿಸುವ ಸಾಧ್ಯತೆ ಇದೆ. ಕಾರ್ಮಿಕ ಇಲಾಖೆಯು ಅಂತಾರಾಷ್ಟ್ರೀಯ ಸಾಮಾಜಿಕ ಭದ್ರತಾ ಸಂಘ (ISSA) ಹಾಗೂ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ILO) ಜೊತೆಗೆ ಸೇರಿ ಸಮಗ್ರ […]