ಕೇರಳದಲ್ಲಿ ದೋಣಿ ಮುಳುಗಡೆ; ಮಕ್ಕಳು ಸೇರಿ 21 ಮಂದಿ ಸಾವು..

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ. ಇದುವರೆಗೆ ನಾವು 21 […]

ಅಳದಂಗಡಿ ಬೃಹತ್‌ ಸಾರ್ವಜನಿಕ ಸಭೆ: ಅಣ್ಣಾಮಲೈ ಭಾಗಿ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತಪ್ರಚಾರವು ಬಹಳ ಭರದಿಂದ ಸಾಗುತಿದೆ. ಇದೀಗ ಭಾರತೀಯ ವಿಧಾನ ಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹರೀಶ್‌ ಪೂಂಜ ಅವರು ಸ್ವರ್ಧಿಸುತ್ತಿದ್ದು. ಇಂದು ಸಂಜೆ 4 ಗಂಟೆಗೆ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಶ್ರೀ ಕೆ. ಅಣ್ಣಾಮಲೈ ಅವರು ಅಳದಂಗಡಿಯಲ್ಲಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕಾಪು; ಮನೆಗೊಂದರಂತೆ ಉದ್ಯೋಗ ಒದಗಿಸಿಕೊಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಚಾಲನೆ: ಸೊರಕೆ

ಕಾಪು : ಸಣ್ಣ ಕೈಗಾರಿಕೆಗೆ ಒತ್ತು ಕೊಟ್ಟು ಮನೆಗೊಬ್ಬರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಶಾಸಕನಾದ ಕೂಡಲೇ ಚಾಲನೆ ನೀಡಲಾಗುವುದು ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ. ಮಣಿಪಾಲ ಟೆಕ್ನಾಲಜಿ ಸಮೂಹ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಅವರು ಕಾರ್ಮಿಕರೇ ಈ ದೇಶದ ನಿಜವಾದ ಸಂಪತ್ತು. ಮಣಿಪಾಲ ಗ್ರೂಫ್ಸ್ ತಾಂತ್ರಿಕ ಸಂಸ್ಥೆಗಳು ದೇಶ ಮಾತ್ರವಲ್ಲದೇ ಪ್ರಪಂಚದಾದ್ಯಂತ ಸುದ್ಧಿಯಲ್ಲಿವೆ. ಗ್ರಾಮೀಣ ಭಾಗದ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮಹತ್ಕಾರ್ಯ ಮಣಿಪಾಲ ಸಮೂಹ […]

Karnataka Election ನಾಲ್ಕು ದಿನ ಬಾಕಿ: ರೋಡ್ ಶೋ ಮೂಲಕ ಮೋದಿ, ಭರ್ಜರಿ ಮೋಡಿ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯ ರಾಜಧಾನಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು, ಮಾರ್ಗದ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಅಪಾರ ಸಂಖ್ಯೆಯ ಉತ್ಸಾಹಿ ಜನರತ್ತ ಕೈ ಬೀಸಿದರು.ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್‌ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್‌ವರೆಗೆ 26 ಕಿ.ಮೀ ರೋಡ್‌ಶೋ ಸುಮಾರು ಮೂರು ಗಂಟೆಗಳಲ್ಲಿ ಮುಕ್ತಾಯವಾಯಿತು. ರೋಡ್‌ಶೋ ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ಭಾಗಗಳಲ್ಲಿ ಸಂಚರಿಸಿ ಸುಮಾರು ಹನ್ನೆರಡು ವಿಧಾನಸಭಾ […]

ಹರೀಶ್‌ ಪೂಂಜ ಪರವಾಗಿ ಬೃಹತ್ ರೋಡ್‌ ಶೋ ಮೂಲಕ ಮತಯಾಚಿಸಿದ ಹಿಂದೂ ಫಯರ್‌ ಬ್ರಾಂಡ್‌ ಖ್ಯಾತಿಯ ಅಸ್ಸಾಂ ಮುಖ್ಯಮಂತ್ರಿ

ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್‌ ಪೂಂಜ ಅವರ ಪರವಾಗಿ ಹಿಂದೂ ಫಯರ್‌ ಬ್ರಾಂಡ್‌ ಖ್ಯಾತಿಯ, ಬೆಂಕಿ ಚೆಂಡಿನ ಮಾತುಗಳಿಂದ ಪ್ರಸಿದ್ಧಿ ಪಡೆದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಅವರು‌ ಇಂದು ದಿನಾಂಕ 06.05.2023 ರಂದು ಉಜಿರೆಯಲ್ಲಿ ಬೃಹತ್‌ ರೋಡ್ ಶೋ ಮೂಲಕ ಮತಯಾಚಿಸಿದರು. ಉಜಿರೆ ಎಸ್‌ಡಿಎಂ ಕಾಲೇಜು ಮೈದಾನದಿಂದ ಆರಂಭಗೊಂಡು ಜನಾರ್ಧನ ಸ್ವಾಮಿ ದೇವಸ್ಥಾನದ ಬೀದಿಯವರೆಗೆ ಬೃಹತ್‌ ರೋಡ್‌ ಶೋ ನಡೆಯಿತು. ಉಜಿರೆ ಮತ್ತು ಧರ್ಮಸ್ಥಳ ಜಿಲ್ಲಾ ಪಂಚಾಯತ್‌ ಕ್ಷೇತ್ರ ವ್ಯಾಪ್ತಿಯ […]