ಸುಧಾರಿತ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಪ್ರವೃತ್ತಿಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ಐಸಿಆರ್‌ಎಸಿ – 2023 ಸುಧಾರಿತಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಪ್ರವೃತ್ತಿಗಳ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮೇ 2 ಮತ್ತು 3 ರಂದು ಬೆಂಗಳೂರಿನ ಸೈಂಟ್ ಜೋಸೆಫ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಸೈನ್ಸ್, ಸೈಂಟ್‌ಜೋಸೆಫ್ ವಿಶ್ವವಿದ್ಯಾಲಯದ ಎಸ್‌ಜೆಯು ಆಡಿಟೋರಿಯಂನಲ್ಲಿ ಆಯೋಜಿಸಿತ್ತು. ಈ ಸಮ್ಮೇಳನವು ಸಂಶೋಧಕರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಮತ್ತು ಕೈಗಾರಿಕೋದ್ಯಮಿಗಳಿಗೆ ತಮ್ಮ ಸಂಶೋಧನಾ ಆವಿಷ್ಕಾರವನ್ನು ವಿಶಿಷ್ಟ ರೀತಿಯಲ್ಲಿ ಪ್ರದರ್ಶಿಸಲು ಮತ್ತು ಚರ್ಚಿಸಲು ವೇದಿಕೆಯನ್ನು ಒದಗಿಸಿತ್ತು. ಐಸಿಆರ್‌ಎಸಿ – 2023 ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವಾಗಿದ್ದು, ಸೈಂಟ್ ಜೋಸೆಫ್ಸ್ […]
ಎಲ್ಲಾ ಜಾತಿ, ವರ್ಗದ ಜನರ ಕಷ್ಟ ಕಾರ್ಪಣ್ಯಕ್ಕೆ ಸ್ಪಂದಿಸಿದ ನಾಯಕ ಹರೀಶ್ ಪೂಂಜ: ಕೋಟ

ಬೆಳ್ತಂಗಡಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳ ಪ್ರಮುಖ ಯೋಜನೆಗಳನ್ನು ಹರೀಶ್ ಪೂಂಜ ತಾಲೂಕಿನ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಬೆಳ್ತಂಗಡಿ ಕ್ಷೇತ್ರದ ಪ್ರಗತಿಗೆ ಭಗೀರಥ ಪ್ರಯತ್ನ ಮಾಡಿದ್ದಾರೆ, ಎಲ್ಲಾ ವರ್ಗ, ಎಲ್ಲಾ ಜಾತಿಯ ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸಿದವರು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪಡಂಗಡಿ, ವೇಣೂರು, ನಾರಾವಿಯಲ್ಲಿ ನಡೆದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಬಿಜೆಪಿಯ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಭಿವೃದ್ಧಿಯ ವಿಚಾರದಲ್ಲಿ ಈ ರಾಜ್ಯ ಕಂಡ […]
ಕೊಲ್ನಾಡಿನಲ್ಲಿ ಮೋದಿ ಹವಾ: ಕಣ್ಮಣಿಯ ಕಣ್ತುಂಬಿಕೊಂಡ ಸಾವಿರಾರು ಕಾರ್ಯಕರ್ತರು!

ಮಂಗಳೂರು:ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು. ಸಾವಿರಾರು ಸಂಖ್ಯೆಯ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳ ಬಿಜೆಪಿ […]
ಮೇ 22 ರಿಂದ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಆರಂಭ: ಇಲ್ಲಿದೆ ವೇಳಾಪಟ್ಟಿ..!!

ಬೆಂಗಳೂರು : ರಾಜ್ಯದಲ್ಲಿ 2023ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟಗೊಳಿಸಲಾಗಿದೆ. ಮೇ 22 ರಿಂದ ಜೂನ್ 2 ರವರೆಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಈ ವರ್ಷದಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುತ್ತಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಂಗಳವಾರ ಬಿಡುಗಡೆ ಮಾಡಿದೆ. ಮೇ 22 ರಿಂದ […]
ಗೆದ್ದಲು ತಿನ್ನುತ್ತಿರುವ 2000 ಮನೆ ನಿವೇಶನದ ಅರ್ಜಿಗಳನ್ನು ಮತ್ತೆ ಓಪನ್ ಮಾಡ್ತಿನಿ: ಸೊರಕೆ

ಉಡುಪಿ: ನಾನು ಶಾಸಕನಾಗಿದ್ದ ಕಾಲದಲ್ಲಿ 94 ಸಿ ಕಾನೂನು ಮತ್ತು ಅಕ್ರಮ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಯನ್ನು ಈ ಭಾಗದಲ್ಲಿ ಶಿಫಾರಸು ಮಾಡಿದ್ದೇನೆ..ನಾನು ಶಿಫಾರಸು ಮಾಡಿದ ಅರ್ಜಿಯನ್ನು ಸಂಪೂರ್ಣ ವಾಗಿ ತಿರಸ್ಕರಿಸಲಾಗಿದೆ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಿಫಾರಸು ಮಾಡಿದ ಎಲ್ಲಾ ಅರ್ಜಿಗಳು ಗೆದ್ದಲು ಹಿಡಿದಿದ್ದು ಅರ್ಜಿಯ ಕಟ್ಟನ್ನು ಮತ್ತೆ ಓಪನ್ ಮಾಡಿ ಅದಕ್ಕೆ ಮರುಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ […]