ಗೆದ್ದಲು ತಿನ್ನುತ್ತಿರುವ 2000 ಮನೆ ನಿವೇಶನದ ಅರ್ಜಿಗಳನ್ನು ಮತ್ತೆ ಓಪನ್ ಮಾಡ್ತಿನಿ: ಸೊರಕೆ

ಉಡುಪಿ: ನಾನು ಶಾಸಕನಾಗಿದ್ದ ಕಾಲದಲ್ಲಿ 94 ಸಿ ಕಾನೂನು ಮತ್ತು ಅಕ್ರಮ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಯನ್ನು ಈ ಭಾಗದಲ್ಲಿ ಶಿಫಾರಸು ಮಾಡಿದ್ದೇನೆ..ನಾನು ಶಿಫಾರಸು ಮಾಡಿದ ಅರ್ಜಿಯನ್ನು ಸಂಪೂರ್ಣ ವಾಗಿ ತಿರಸ್ಕರಿಸಲಾಗಿದೆ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಿಫಾರಸು ಮಾಡಿದ ಎಲ್ಲಾ ಅರ್ಜಿಗಳು ಗೆದ್ದಲು ಹಿಡಿದಿದ್ದು ಅರ್ಜಿಯ ಕಟ್ಟನ್ನು ಮತ್ತೆ ಓಪನ್ ಮಾಡಿ ಅದಕ್ಕೆ ಮರುಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ […]
ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗ್ಬೇಕು– ಮಾಜಿ ಪ್ರಧಾನಿ ಹೆಚ್‌ಡಿ ದೇವೆಗೌಡ ತುಳುನಾಡಿನ ದೈವ, ದೇವರ ಮೊರೆ…!!

ಮಂಗಳೂರು: ತನ್ನ ಮಗ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಇದರ ಜೊತೆಗೆ ತುಳುನಾಡಿನ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ಹರಕೆಯನ್ನೂ ಹೊತ್ತಿದ್ದಾರೆ. ರಾಜ್ಯದಲ್ಲಿ ಚುನಾಚಣಾ ಕಾವು ಹೆಚ್ಚಾಗುತ್ತಿದ್ದು ಯಾರು ಶಾಸಕರಾಗುತ್ತಾರೆ, ಯಾವ ಪಕ್ಷಕ್ಕೆ ಬಹುಮತ ಬರುತ್ತೆ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ. ಆದರೆ ಜೆಡಿಎಸ್ (JDS) ವರಿಷ್ಠ ಮಾಜಿ ಪ್ರಧಾನಿ ಹೆಚ್‌ಡಿ ದೇವೆಗೌಡ ಮಾತ್ರ ಈ ಬಾರಿ ತನ್ನ […]
ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ..!!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು(Congress […]
ಪ್ರಚಾರ ತೀವ್ರಗೊಳಿಸಿದ ಭಾರತೀಯ ಜನತಾ ಪಕ್ಷ: ಮೋದಿ-ಯೋಗಿ ಸಹಿತ ಘಟಾನುಘಟಿ ನಾಯಕರಿಂದ ಸಭೆ-ರೋಡ್ ಶೋ

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಭಾರತೀಯ ಜನತಾ ಪಕ್ಷವು ತೀವ್ರಗೊಳಿಸಿದ್ದು, ಮುಂದಿನ ಎರಡು ವಾರಗಳಲ್ಲಿ ಹಲವಾರು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಮಂಡ್ಯ ಮತ್ತು ವಿಜಯಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಪ್ರವೇಶ ಮಾಡಲಿದ್ದಾರೆ. ಒಕ್ಕಲಿಗರಲ್ಲಿ ಹಲವರು ತಮ್ಮದು ನಾಥ ಪಂಥಕ್ಕೆ ಸೇರಿದ ಮಠವೆಂದು ನಂಬುತ್ತಾರೆ. ಈ ಕಾರಣದಿಂದ ಒಕ್ಕಲಿಗರು ಯೋಗಿ […]
RTE ದಾಖಲಾತಿ’ಗಾಗಿ ದಿನಾಂಕ 10-05-2023 ರವರೆಗೆ ಅರ್ಜಿ ಸಲ್ಲಿಕೆ ಅವದಿ ವಿಸ್ತರಣೆ…!!

ಬೆಂಗಳೂರು: ನಿನ್ನೆ ಆರ್ ಟಿ ಇ ಅಡಿಯಲ್ಲಿ ಮಕ್ಕಳ ದಾಖಲಾತಿಗಾಗಿ ಅರ್ಜಿ ( RTE Admission Application ) ಸಲ್ಲಿಸಲು ಕೊನೆಯ ದಿನವಾಗಿತ್ತು. ಈ ಅವದಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಮಾಹಿತಿ ನೀಡಿದ್ದು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾತಿಗಾಗಿ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 20-04-2023ರವರೆಗೆ ನೀಡಲಾಗಿತ್ತು ಎಂದಿದ್ದಾರೆ. ಹೆಚ್ಚು ಹೆಚ್ಚು ವಿದ್ಯಾರ್ಥಿಗಳು, ಪೋಷಕರು ದಿನಾಂಕ ವಿಸ್ತರಣೆ ಕೋರಿ ಇಲಾಖೆಗೆ ಮನವಿ ಮಾಡಿದ್ದರು. ಈ […]