ಮಲಾಡ್ ಕನ್ನಡ ಸಂಘದ ವತಿಯಿಂದ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ

ಮುಂಬಯಿ: ಮುಂಬೈ ಉಪನಗರ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಯಾದ ಮಲಾಡ್ ಕನ್ನಡ ಸಂಘ ಇದರ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಸತ್ಯನಾರಾಯಣ ಮಹಾಪೂಜೆ ಏಪ್ರಿಲ್ 14ರಂದು ಸಂಘದ ಕಚೇರಿ 4ಬಿ- 21 ಯುನಿಟಿ ಅಪಾರ್ಟ್ಮೆಂಟ್ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿ ಬಫ್- ಹೀರಾ ನಗರ ಮಾರ್ವೆ ರೋಡ್ ಮಲಾಡ್ ಪಶ್ಚಿಮ ಇಲ್ಲಿ ಶ್ರದ್ಧಾ ಭಕ್ತಿಯೊಂದಿಗೆ ವಿಜೃಂಭಣೆಯಿಂದ ಜರುಗಿತು. ಸಂಘದ ಸದಸ್ಯ ಬಾಂಬೆ ಬಂಟ್ಸ್ ಎಸೋಶಿಯೇಶನ್ ನ ಅಧ್ಯಕ್ಷ ಸಿ.ಎ. ಸುರೇಂದ್ರ ಶೆಟ್ಟಿ ಹಾಗೂ ಪ್ರಭಾ ಸುರೇಂದ್ರ ಶೆಟ್ಟಿ ನೇತೃತ್ವದಲ್ಲಿ ವಿಷ್ಣು […]
ಭಾರತೀಯ ಜನತಾ ಪಕ್ಷದ ಅಂತಿಮ ಪಟ್ಟಿ ಬಿಡುಗಡೆ: ಜಗದೀಶ್ ಶೆಟ್ಟರ್ ವಿರುದ್ದ ಮಹೇಶ್ ತೆಂಗಿನಕಾಯಿ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ 10 ಅಭ್ಯರ್ಥಿಗಳ ಮೂರನೇ ಮತ್ತು ಕೊನೆಯ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಮೇ 10 ರಂದು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳು ಮತ್ತು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪಕ್ಷವು ತನ್ನ ಅನುಭವಿ ನಾಯಕ ಅರವಿಂದ ಲಿಂಬಾವಳಿಯನ್ನು ಮಹದೇವಪುರ ಕ್ಷೇತ್ರದಿಂದ ಕೈಬಿಟ್ಟಿದ್ದು ಈ ಸ್ಥಾನದಲ್ಲಿ ಅವರ ಪತ್ನಿ ಮಂಜುಳಾ ಅರವಿಂದ್ ಲಿಂಬಾವಳಿಯನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ […]
ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್…

ಬೆಂಗಳೂರು:ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದರು. ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿನ ನಂಟು ಕಳೆದುಕೊಂಡರು. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. […]
ಇಂದು ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ ???

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಬಾಕಿ ಉಳಿದಿರುವ 58 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಗುರುವಾರ ತಡರಾತ್ರಿವರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯಿಂದ ಮಹತ್ವದ ಚರ್ಚೆ ನಡೆದಿದ್ದು, ಇಂದು(ಶುಕ್ರವಾರ) ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಗುರುವಾರ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಸ್ಕ್ರೀನಿಂಗ್ ಸಮಿತಿಯ ಮೋಹನ್ ಪ್ರಕಾಶ್ ಭಾಗವಹಿಸಿದ್ದರು. ಸೋಮವಾರವಷ್ಟೇ ಎಐಸಿಸಿ ಸ್ಕ್ರೀನಿಂಗ್ ಸಮಿತಿಯು ಸಿದ್ದರಾಮಯ್ಯ, ಶಿವಕುಮಾರ್ […]
ಬೆಂಗಳೂರು-ದ.ಕ ಜಿಲ್ಲೆಗಳಲ್ಲಿ ಸಿಎನ್‌ಜಿ/ಪಿಎನ್‌ಜಿ ಬೆಲೆ ಪ್ರತಿ ಎಸ್.ಸಿಎಂಗೆ 7 ರೂ ಕಡಿತ: ಗೈಲ್ ನಿಂದ ಘೋಷಣೆ

ಬೆಂಗಳೂರು: ಸರ್ಕಾರವು ನೈಸರ್ಗಿಕ ಅನಿಲದ ಬೆಲೆ ಸೂತ್ರವನ್ನು ಬದಲಾಯಿಸಿದ ಕೆಲವೇ ದಿನಗಳಲ್ಲಿ, GAIL (ಗೈಲ್) ಗ್ಯಾಸ್ ಲಿಮಿಟೆಡ್ ಭಾನುವಾರ ಸಿ.ಎನ್.ಜಿ ಮತ್ತು ಪಿ.ಎನ್.ಜಿ ಬೆಲೆಗಳಲ್ಲಿ ಪ್ರತಿ ಯೂನಿಟ್‌ಗೆ ರೂ 7 ವರೆಗೆ ಕಡಿತವನ್ನು ಘೋಷಿಸಿದೆ. ಸಾರಿಗೆಗಾಗಿ ಬಳಸುವ ಸಂಕುಚಿತ ನೈಸರ್ಗಿಕ ಅನಿಲ (ಸಿ.ಎನ್.ಜಿ) ಕರ್ನಾಟಕದಲ್ಲಿ ಪ್ರತಿ ಕೆಜಿಗೆ 7 ರೂಪಾಯಿಗಳಷ್ಟು ಅಗ್ಗವಾಗಿದೆ ಎಂದು ಗೈಲ್ (ಇಂಡಿಯಾ) ಲಿಮಿಟೆಡ್‌ನ ಸಿಟಿ ಗ್ಯಾಸ್ ಆರ್ಮ್ ಗೈಲ್ ಗ್ಯಾಸ್ ಲಿಮಿಟೆಡ್ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ […]