ಮಾರ್ಚ್ 1 ರಿಂದ ಕಪ್ಪು ಬಟ್ಟೆ ಧರಿಸಿ ಸೇವೆ ನೀಡಲಿರುವ ಗ್ರಾಮ ಪಂಚಾಯತ್ ನೌಕರರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಂತಿಯುತ ಪ್ರತಿಭಟನೆ

ಬೆಂಗಳೂರು: ರಾಜ್ಯಮಟ್ಟದಲ್ಲಿ ಪಂಚಾಯತ್ ನೌಕರರು ಮಾರ್ಚ್ 1 ರಿಂದ ತಮಗಾದ ನೋವು, ಶೋಷಣೆ ಮತ್ತು ಸಮಸ್ಯೆಗಳ ವಿರುದ್ದ ಸಾರ್ವಜನಿಕ ಸೇವೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಚೇರಿಯಲ್ಲಿ ಸಾರ್ವಜನಿಕವಾಗಿ ಕಪ್ಪು ಬಟ್ಟೆ/ ಕಪ್ಪು ಪಟ್ಟಿ ಧರಿಸಿ ಇಲಾಖೆಯಿಂದ ಬೇಡಿಕೆ ಈಡೇರುವವರೆಗೂ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೋಭಿವೃದ್ದಿ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ ತಿಳಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಸಂಘಟನೆಯ […]

ಕಟ್ಟಡ ಕಾರ್ಮಿಕರ ಕಾರ್ಡ್‌ ನವೀಕರಣ ಸಮಸ್ಯೆ ವಿರುದ್ದ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಸುನಿಲ್ ಕುಮಾರ್

ಕಾರ್ಕಳ : ಕಟ್ಟಡ ಕಾರ್ಮಿಕರ ಕಾರ್ಡ್‌ ನವೀಕರಣಕ್ಕೆ ಹಲವಾರು ಎಡರು ತೊಡರುಗಳಿರುವ ಕಾರಣ ಸರಕಾರದಿಂದ ದೊರೆಯುವ ಸೌಲಭ್ಯ ಪಡೆಯುವಲ್ಲಿ ಕಟ್ಟಡ ಕಾರ್ಮಿಕರು ಪರದಾಡುವಂತಾಗಿದೆ. ಸರಕಾರದ ನೂತನ ನಿಯಮದಿಂದಾಗಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಇಲಾಖೆಯಿಂದ ಜಾರಿಗೆ ತರಲಾಗುವ ಕಾರ್ಡ್ ರಿನಿವಲ್‌ಗೆ ಸಮಸ್ಯೆಯಾಗಿದೆ. ನೂತನ ಕಾರ್ಡ್‌ ನಿರ್ಮಾಣವೂ ಸಾ‍ಧ್ಯವಾಗುತ್ತಿಲ್ಲ. ಕಟ್ಟಡ ನಿರ್ಮಾಣದಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಇತರ ನಿರ್ಮಾಣ ಹಂತದ ಕಾಮಗಾರಿ ಮಾಡುವ ಕೂಲಿ ಕಾರ್ಮಿಕರು, ಮರದ ಕೆಲಸದವರು, ಇಲೆಕ್ಟ್ರಿಶಿಯನ್‌, ಪ್ಲಂಬರ್‌, ರಸ್ತೆ ನಿರ್ಮಾಣ ಮಾಡುವ […]

ಬೆಳಗಾವಿಯನ್ನು ಚಿಕ್ಕೋಡಿ, ಗೋಕಾಕ್ ಮೂರು ಜಿಲ್ಲೆಗಳಾಗಿ ವಿಂಗಡಿಸಲು ಒತ್ತಾಯ: ಫೆ.16 ರಂದು ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಅತಿದೊಡ್ಡ ಜಿಲ್ಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್ ಮಂಡಿಸಲಿದ್ದು, ಈ ವೇಳೆ ಚಿಕ್ಕೋಡಿ ಮತ್ತು ಗೋಕಾಕ್ ಅನ್ನು ಹೊಸ ಜಿಲ್ಲೆಗಳೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಜೆಟ್ ಮಂಡನೆಗೂ ಮುನ್ನ ಈ ಬಗ್ಗೆ ಎಲ್ಲ ವಿವರಗಳನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ. ಚಿಕ್ಕೋಡಿ […]

ರಾಜ್ಯಕ್ಕೆ ಗಾಯದ ಮೇಲೆ ಬರೆ: ತಮಿಳುನಾಡಿಗೆ 2.5 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ

ಬೆಂಗಳೂರು: ಒಂದೆಡೆ ಮಳೆ ಕೊರತೆ ಮತ್ತೊಂದೆಡೆ ಬರದಿಂದ ರಾಜ್ಯವು ಸಂಕಷ್ಟದಲ್ಲಿದ್ದು ಇದೀಗ ಗಾಯದ ಮೇಲೆ ಬರೆ ಎಂಬಂತೆ ತಮಿಳುನಾಡಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ದೆಹಲಿಯಲ್ಲಿ ಸೋಮವಾರ ಸಮಿತಿಯ ಸಭೆ ನಡೆದಿದ್ದು, 7.61 ಟಿಎಂಸಿ ಬಾಕಿ ಜೊತೆಗೆ ಫೆಬ್ರವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡು ಸಭೆಯಲ್ಲಿ ಒತ್ತಾಯಿಸಿದೆ. ಇದಕ್ಕೆ ತೀವ್ರ ಆಕ್ಷೇಪ […]

ತುಳು ಕನ್ನಡಿಗರ ಶೃದ್ದಾಕೇಂದ್ರ ಬೊಯಿಸರ್ ನ ನಿತ್ಯಾನಂದ ಮಂದಿರದಲ್ಲಿ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ

ಬೊಯಿಸರ್: ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಶೃದ್ದಾಕೇಂದ್ರವೆನಿಸಿದ ಬೊಯಿಸರ್ ನ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಠಾನ ಫೆ.5 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶ್ರೀ ರಾಮ ಮಂದಿರದಲ್ಲಿ ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡು ನಿತ್ಯಾನಂದ ಮಂದಿರದ ಆವರಣದಲ್ಲಿ ಕಲಶ ಪೂಜೆ, ದೀಪಾರಾಧನೆ, ಷೋಡಶ ಪೂಜೆ ಹಾಗೂ ದುರ್ಗಾ ಅಷ್ಟೋತ್ತರ ನಾಮಾರ್ಚನೆ ಹಾಗೂ ಸಂಪನ್ನ […]