ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್: ಉಡುಪಿ ಸೇರಿ 42 ಕ್ಷೇತ್ರಗಳಿಗೆ ಟಿಕೆಟ್ ಫೈನಲ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್,ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬಹುದಿನಗಳಿಂದ ವಿಳಂಬವಾಗಿದ್ದ ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಗುರುವಾರ ಅಂತಿಮವಾಗಿ ಬಿಡುಗಡೆ ಮಾಡಲಾಗಿದ್ದು, ಯುವ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಚುನಾವಣಾ ಟಿಕೆಟ್ ನೀಡಲಾಗಿದೆ. ನಿರೀಕ್ಷೆಯಂತೆ ಕಾಂಗ್ರೆಸ್ ಮೊಗವೀರ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಿದೆ.. ಉಳಿದ ಕ್ಷೇತ್ರಗಳಿಗೆ ಹಂತ ಹಂತವಾಗಿ […]

ಕರ್ನಾಟಕ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಮೇ 10 ರಂದು ನಡೆಯಲಿರುವ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 42 ಅಭ್ಯರ್ಥಿಗಳನ್ನು ಒಳಗೊಂಡ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್‌ನ ಸಿಇಸಿ ಕರ್ನಾಟಕದ ವಿಧಾನಸಭೆಗೆ ಮುಂದಿನ ಚುನಾವಣೆಗೆ ಈ ಕೆಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೂರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಗುರ್ಮಿಟ್ಕಲ್ ನಿಂದ ಬಿಜೆಪಿ ಮಾಜಿ ಎಂಎಲ್ ಸಿ ಬಾಬುರಾವ್ ಚಿಂಚನಸೂರ್ ಅವರನ್ನು ಪಕ್ಷ […]

ಸುಧಾ ಮೂರ್ತಿ, ಎಸ್.ಎಲ್ ಭೈರಪ್ಪ ಸೇರಿ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ(ಏ.05): ಗಣರಾಜ್ಯೋತ್ಸವದಿಂದ ಘೋಷಿಸಲಾದ ಪದ್ಮ ಪ್ರಶಸ್ತಿ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಮಾರ್ಚ್ 22 ರಂದು ಮೊದಲ ಹಂತದಲ್ಲಿ 54 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಇಂದು ಇನ್ನುಳಿದ 54 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಕರ್ನಾಟಕದ ಹೆಮ್ಮೆಯ, ಇಸ್ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ ಇಂದು ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸಾಹಿತಿ, ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್‌ಎಲ್ ಬೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉಮ್ಮತ್ತಾಟ್‌ ನೃತ್ಯ ಕಲಾವಿದೆ ಕೊಡಗಿನ ರಾಣಿ […]

ಕಿಚ್ಚ ಸುದೀಪ್ ರಾಜಕೀಯ ರಂಗ ಪ್ರವೇಶವಿಲ್ಲ; ಪ್ರಚಾರ ಮಾತ್ರ: ಬೊಮ್ಮಾಯಿ-ಸುದೀಪ್ ಜಂಟಿ ಸುದ್ದಿಗೋಷ್ಠಿ

ಬೆಂಗಳೂರು: ಬಹುಭಾಷಾ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸ್ವತಃ ಸುದೀಪ್ ಅವರೇ ತೆರೆ ಎಳೆದಿದ್ದಾರೆ. ಬುಧವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯವರನ್ನು ಮಾಮಾ ಅಂತ ಕರೆಯುತ್ತೇನೆ. ಚಿತ್ರರಂಗಕ್ಕೆ ಬಂದಾಗ ನನಗೆ ಗಾಡ್ ಫಾದರ್ ಇರಲಿಲ್ಲ. ಆಗ ನನ್ನ ಜೊತೆಯಲ್ಲಿ ಕೆಲವೇ ಕೆಲವರು ನಿಂತಿದ್ದರು. ಅಂಥಹವರಲ್ಲಿ ನನ್ನ ಮಾಮ ಸಿಎಂ ಬೊಮ್ಮಾಯಿ ಒಬ್ಬರು. ಅವರು ಕೂಡಾ ಆಗ್ಅ ತಾನೇ ರಾಜಕೀಯಕ್ಕೆ ಬಂದಿದರು. ನಾನು ಅವರ […]

ಕೋಝಿಕ್ಕೋಡ್ ರೈಲಿನಲ್ಲಿ ಬೆಂಕಿ ಪ್ರಕರಣ: ಶಂಕಿತ ಆರೋಪಿಯ ಬಂಧನ

ಕೋಝಿಕ್ಕೋಡ್ : ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಂಕಿತ ಶಾರುಖ್ ಸೈಫಿ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಸಹಯೋಗದಿಂದ ಕೇರಳ ಪೊಲೀಸರ ವಿಶೇಷ ತಂಡ ಮಹಾರಾಷ್ಟ್ರ ತಲುಪಿ ಮಂಗಳವಾರ ರಾತ್ರಿ ರತ್ನಗಿರಿಯಿಂದ ಬಂಧಿಸಿದೆ. ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿಗೂ ಸುಟ್ಟ ಗಾಯಗಳಾಗಿದ್ದು, ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಮಧ್ಯೆ ಕೇರಳದ ಎಟಿಎಸ್ […]