ಕೋಝಿಕ್ಕೋಡ್ ರೈಲಿನಲ್ಲಿ ಬೆಂಕಿ ಪ್ರಕರಣ: ಶಂಕಿತ ಆರೋಪಿಯ ಬಂಧನ

ಕೋಝಿಕ್ಕೋಡ್ : ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಂಕಿತ ಶಾರುಖ್ ಸೈಫಿ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಸಹಯೋಗದಿಂದ ಕೇರಳ ಪೊಲೀಸರ ವಿಶೇಷ ತಂಡ ಮಹಾರಾಷ್ಟ್ರ ತಲುಪಿ ಮಂಗಳವಾರ ರಾತ್ರಿ ರತ್ನಗಿರಿಯಿಂದ ಬಂಧಿಸಿದೆ. ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿಗೂ ಸುಟ್ಟ ಗಾಯಗಳಾಗಿದ್ದು, ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಮಧ್ಯೆ ಕೇರಳದ ಎಟಿಎಸ್ […]
ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು:ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ನಿನ್ನೆ ಸಾಕಷ್ಟು ಕಡೆ ಧಾರಾಕಾರ ಮಳೆಯಾಗಿದೆ. ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬುಧವಾರದವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ತುಮಕೂರಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣದ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು […]
ಯುರೋಫಿನ್ಸ್ ಸಹಯೋಗದೊಂದಿಗೆ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯದಲ್ಲಿ ಸುಧಾರಿತ ವಿಶ್ಲೇಷಣಾತ್ಮಕ ರಸಾಯನಶಾಸ್ತ್ರ ಪ್ರಯೋಗಾಲಯ ಸ್ಥಾಪನೆ

ಬೆಂಗಳೂರು: ಸುಧಾರಿತ ವಿಶ್ಲೇಷಣಾತ್ಮಕ ರಸಾಯನಶಾಸ್ತ್ರ ಪ್ರಯೋಗಾಲಯವನ್ನು ಸ್ಥಾಪಿಸಲು ಭಾರತದ ಯುರೋಫಿನ್ಸ್ ಗ್ರೂಪ್ ಆಫ್ ಕಂಪನಿಯು ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ. ಪ್ರಯೋಗಾಲಯವು ಇತ್ತೀಚಿನ ಉಪಕರಣಗಳನ್ನು ಹೊಂದಿದ್ದು, ರಸಾಯನಶಾಸ್ತ್ರ ಸ್ನಾತಕೋತ್ತರ ಹಂತದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುತ್ತದೆ. ಯುರೋಫಿನ್ಸ್ ಅಡ್ವಿನಸ್, ಯೂರೋಫಿನ್ಸ್ ಅನಾಲಿಟಿಕಲ್ ಸರ್ವಿಸಸ್ ಮತ್ತು ಯೂರೋಫಿನ್ಸ್ ಅಮರ್ ಇಮ್ಯುನೊಡಯಾಗ್ನೋಸ್ಟಿಕ್ಸ್ನ ಸಿಎಸ್‌ಆರ್ ಕಾರ್ಯಕ್ರಮದ ಅಡಿಯಲ್ಲಿ ಈ ಉಪಕ್ರಮವು ಮಾನವ ಬಂಡವಾಳವನ್ನು ಅಭಿವೃದ್ಧಿಪಡಿಸುವ ಮೂಲಕ ಭಾರತದ ಆತ್ಮನಿರ್ಭರ ಕಾರ್ಯಕ್ರಮವನ್ನು ಬೆಂಬಲಿಸುವ ಯುರೋಫಿನ್ಸ್ ಸಂಸ್ಥೆಯ ಬದ್ಧತೆಯ ಒಂದು ಭಾಗವಾಗಿದೆ. […]
ರೈಲಿನಲ್ಲಿ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಪರಿಚಿತ ವ್ಯಕ್ತಿ: 3 ಸಾವು, ಹಲವರಿಗೆ ಗಾಯ

ಕೋಝಿಕ್ಕೋಡ್: ಭಾನುವಾರ ರಾತ್ರಿ 9.50 ರ ಸುಮಾರಿಗೆ ಕೋಝಿಕ್ಕೋಡ್ ರೈಲು ನಿಲ್ದಾಣದಿಂದ (ಉತ್ತರ ಕೇರಳ) ರೈಲು ಹೊರಟ ನಂತರ ಅಲಪುಝಾ-ಕಣ್ಣೂರು ಎಕ್ಸ್‌ಪ್ರೆಸ್‌ನ ಡಿ-1 ಕೋಚ್‌ನೊಳಗೆ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದದ ನಂತರ ಘಟನೆ ಸಂಭವಿಸಿದೆ. ಅಪರಿಚಿತ ವ್ಯಕ್ತಿಯೊಬ್ಬ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರಿಗೆ ಸುಟ್ಟ ಗಾಯಗಳಾಗಿವೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಎಳತ್ತೂರು ಮತ್ತು ಕೊಯಿಲಾಂಡಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲು […]
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಂದಿನಿಂದ ಅಂದರೆ ಏಪ್ರಿಲ್ 1ರಿಂದ ಇಳಿಕೆಯಾಗಲಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದೆ. ಇಂದಿನಿಂದಲೇ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈಗ 91.50 ರೂಪಾಯಿ ಇಳಿಕೆಯಾಗಲಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 2024 ರ ಆರ್ಥಿಕ ವರ್ಷದ ಮೊದಲ ದಿನದಂದು ಕಡಿತಗೊಳಿಸಲಾಗಿದೆ. ಈ ಬದಲಾವಣೆಯನ್ನು ವಾಣಿಜ್ಯ ಅನಿಲ ಸಿಲಿಂಡರ್‌ಗಳ ವೆಚ್ಚದಲ್ಲಿ ಮಾತ್ರ ಮಾಡಲಾಗಿದೆ. ಮನೆಗಳಲ್ಲಿ ಬಳಸುವ 14.2 ಕೆಜಿ […]