ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಂದಿನಿಂದ ಅಂದರೆ ಏಪ್ರಿಲ್ 1ರಿಂದ ಇಳಿಕೆಯಾಗಲಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದೆ. ಇಂದಿನಿಂದಲೇ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈಗ 91.50 ರೂಪಾಯಿ ಇಳಿಕೆಯಾಗಲಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 2024 ರ ಆರ್ಥಿಕ ವರ್ಷದ ಮೊದಲ ದಿನದಂದು ಕಡಿತಗೊಳಿಸಲಾಗಿದೆ. ಈ ಬದಲಾವಣೆಯನ್ನು ವಾಣಿಜ್ಯ ಅನಿಲ ಸಿಲಿಂಡರ್‌ಗಳ ವೆಚ್ಚದಲ್ಲಿ ಮಾತ್ರ ಮಾಡಲಾಗಿದೆ. ಮನೆಗಳಲ್ಲಿ ಬಳಸುವ 14.2 ಕೆಜಿ […]

ಬಜೆಟ್‌ನ ಹೊಸ ದರ ನಾಳೆಯಿಂದ ಜಾರಿ-ಯಾವುದು ದುಬಾರಿ? ಯಾವುದು ಅಗ್ಗ?

ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಇದೇ ಶನಿವಾರದಿಂದ (ಏಪ್ರಿಲ್‌ 1) ಹೊಸ ಹಣಕಾಸು ವರ್ಷ ಆರಂಭವಾಗಲಿದ್ದು, ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಲಿದ್ದು, ಕೆಲವು ವಸ್ತುಗಳ ಬೆಲೆ ಇಳಿಕೆಯಾಗಲಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಹಲವು ಬದಲಾವಣೆಗಳು ಆಗಲಿವೆ. ಹಣದುಬ್ಬರದ ಹೊರೆ ಶ್ರೀಸಾಮಾನ್ಯನ ಮೇಲೆ ಹೆಚ್ಚಾಗಲಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಹಲವು ವಸ್ತುಗಳು ದುಬಾರಿಯಾಗಲಿವೆ. ಇದು ನೇರವಾಗಿ ಜನಸಾಮಾನ್ಯರ […]

ವಸಯಿ: ಮೊಗವೀರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ವಸಯಿ: ವಸಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮ ಮಾರ್ಚ್ 26ರಂದು ಸಂಘದ ಕಚೇರಿ. ಬಿ-1೦2, ನ್ಯೂ ವರ್ಷಾ ಕೋಅಪರೇಟಿವ್ ಹೌಸಿಂಗ್ ಸೊಸೈಟಿ, ಆನಂದ ನಗರ ವಸಯಿ ಪಶ್ಚಿಮ ಕಚೇರಿಯ ಕೊರಗಪ್ಪ ಸಾಲ್ಯಾನ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಅತಿಥಿ ಗಾಗೂ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಸೇವಕಿ ಧಾರ್ಮಿಕ ಚಿಂತಕರಾದ ಪುಷ್ಪ ಜಿ ಬಂಗೇರ ಹಾಗೂ ಪರಿಸರದ […]

ಕಲ್ಯಾಣ್ ಮಿತ್ರ ಮಂಡಲ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮ

ಕಲ್ಯಾಣ್: ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್ ಪೂರ್ವ ಇದರ ವತಿಯಿಂದ ಮಾರ್ಚ್ 26ರಂದು ಸಂಘದ ಕಚೇರಿಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಪ್ರಾರಂಭದಲ್ಲಿ ಮಹಿಳಾ ಸದಸ್ಯರಿಂದ ಭಜನೆ ಕಾರ್ಯಕ್ರಮ ನಡೆಯಿತು. ನಂತರ ತಾಯಿ ಶಾರದಾಂಬೆಗೆ ಧನಂಜಯ ಪಾಲನ್ ರವರಿಂದ ಮಹಾ ಮಂಗಳಾರತಿ ನೆರವೇರಿತು ಹಾಗೂ ರಾಜೇಶ್ ಪೂಜಾರಿ ಅವರಿಂದ ಸಾಮೂಹಿಕ ಪ್ರಾರ್ಥನೆ ಜರುಗಿತು. ಬಳಿಕ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಮಹಿಳಾ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ […]

ವಿಧಾನಸಭೆ ಚುನಾವಣೆ: ಮೇ 10 ರಂದು ಒಂದೇ ಹಂತದಲ್ಲಿ ಮತದಾನ; ಮೇ 13 ರಂದು ಫಲಿತಾಂಶ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ವರ್ಷದ ಚುನಾವಣೆಯಲ್ಲಿ 9.17 ಲಕ್ಷಕ್ಕೂ ಹೆಚ್ಚು ಮೊದಲ ಬಾರಿಯ ಮತದಾರರು ಮತ ಚಲಾಯಿಸಲಿದ್ದಾರೆ. ಹಾಲಿ ವಿಧಾನಸಭೆಯ ಅವಧಿ ಮೇ 24ಕ್ಕೆ ಮುಕ್ತಾಯವಾಗಲಿದೆ. ಒಟ್ಟು 5.21 ಕೋಟಿ ಜನರು ಮತದಾನದ ಹಕ್ಕು ಹೊಂದಿದ್ದಾರೆ. 224 ಎಸಿಗಳಲ್ಲಿ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಪ್ರತಿ ಪಿಎಸ್‌ಗೆ ಸರಾಸರಿ 883 ಮತದಾರರು ಇರಲಿದ್ದಾರೆ. 50% […]