ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಉದ್ಘಾಟಿಸಿದರು. ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ 80 ನೇ ಜನ್ಮದಿನದಂದು ಅವರ ಚುನಾವಣಾ ಕ್ಷೇತ್ರದಲ್ಲಿ ವಿಶ್ವದರ್ಜೆಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವಿಮಾನ ನಿಲ್ದಾಣವು ಕಮಲದ ಆಕಾರದಲ್ಲಿದೆ. No. of airports built between Independence & 2014 in the country – 74. Shivamogga Airport, inaugurated by Sri @NarendraModi Ji today, […]
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಿಂದ ಜಗನ್ನಾಥ ಭವನ ಭೇಟಿ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಕರ್ನಾಟಕದ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಗಳಾದ ಮನ್ ಸುಖ್ ಮಾಂಡವೀಯ ಹಾಗೂ ಕೆ. ಅಣ್ಣಾಮಲೈ ಭೇಟಿ ನೀಡಿ, ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ಜಗನ್ನಾಥ್ ರಾವ್ ಜೋಷಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ ಮುಂತಾದವರು ಉಪಸ್ಥಿತರಿದ್ದರು.
ಬಿದನಗೆರೆ ಬಸವೇಶ್ವರ ಮಠ ಶಿವರಾತ್ರಿ ಉತ್ಸವದಲ್ಲಿ ರಾಗಿಣಿ ದ್ವಿವೇದಿ ಭಾಗಿ

ಕುಣಿಗಲ್: ಬಿದನಗೆರೆ ಬಸವೇಶ್ವರ ಮಠದಲ್ಲಿ ವಿಶ್ವದ ಅತಿದೊಡ್ಡ 161 ಅಡಿಯ ಪಂಚಮುಖಿ ಆಂಜನೇಯ ಪ್ರತಿಮೆ ಅನಾವರಣ ಮತ್ತು ಶಿವರಾತ್ರಿ ಉತ್ಸವ ನಡೆಯಿತು. ಚಿತ್ರನಟಿ ರಾಗಿಣಿ ದ್ವಿವೇದಿ ಭಾಗವಹಿಸಿದರು.
ಚಿತ್ರನಟ ಅನಂತ್ ನಾಗ್ ಇಂದು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿಗೆ ಸೇರುತ್ತಿದ್ದಾರೆ ಎಂದು ವರದಿಯಾಗಿದೆ. 1980 ರಲ್ಲೇ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಿರುವ ಅನಂತ್ ನಾಗ್ 1983ರಲ್ಲಿ ಜನತಾ ಪಕ್ಷದ ಪ್ರಚಾರಕರಾಗಿದ್ದರು. 1985 ಮತ್ತು 1989 ರಲ್ಲಿಯೂ ಪಕ್ಷದ ಪ್ರಚಾರಕರಾಗಿ ಗುರುತಿಸಿಕೊಂಡ ಇವರು, 1983ರಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಶಿವರಾಮ ಕಾರಂತರ […]
ಚಿಕ್ಕಮಗಳೂರು: ಬದಲಾವಣೆ ಸಂಕಲ್ಪ ಯಾತ್ರೆ ಬೈಕ್ ರ‍್ಯಾಲಿ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಹೆಚ್.ಡಿ ತಮ್ಮಯ್ಯ ಅವರ ಅಭಿಮಾನಿಗಳು ಫೆ.21 ರಂದು ಮಂಗಳವಾರದಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ “ಬದಲಾವಣೆ ಸಂಕಲ್ಪ ಯಾತ್ರೆ” ಬೃಹತ್ ಬೈಕ್ ರ‍್ಯಾಲಿ ಏರ್ಪಡಿಸಿದ್ದು, ಬೆಳಗ್ಗೆ 11.30 ಕ್ಕೆ ಕರ್ತಿಕೆರೆ ಯಿಂದ ಹೊರಟು ಬೇಲೂರು ರಸ್ತೆ, ಐ.ಜಿ ರಸ್ತೆ, ಎಂ.ಜಿ ರಸ್ತೆ ಮೂಲಕ ಜಿಲ್ಲಾ ಕಾಂಗ್ರೆಸ್ ಕಛೇರಿಯನ್ನು ತಲುಪಲಿದೆ ಎಂದು ಮಾಜಿ ನಗರಸಭೆ ಅಧ್ಯಕ್ಷ ಹೆಚ್.ಡಿ ತಮ್ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.