ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ: ರಾಜ್ಯ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇ ಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು. ಸಮುದಾಯದ ಈ ಬೇಡಿಕೆ ಈಡೇರಿಕೆಗಾಗಿ ಕೆಲ ದಿನಗಳ ಹಿಂದಷ್ಟೇ ಸಚಿವ ವಿ ಸುನಿಲ್ ಕುಮಾರ್ , ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ […]
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಇನ್ನಿಲ್ಲ

ಬೆಂಗಳೂರು: ದೊರೈ-ಭಗವಾನ್ ಜೋಡಿಯ ಖ್ಯಾತ ನಿರ್ದೇಶಕರಾದ ಎಸ್.ಕೆ ಭಗವಾನ್ ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ನಿಮಿತ್ತ ಡಿಸೆಂಬರ್ ನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಭಗವಾನ್ ಇಂದು ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ದೊರೈ- ಭಗವಾನ್ ಜೋಡಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದು, ಇದರಲ್ಲಿ 24 ಸಿನಿಮಾಗಳು ಕಾದಂಬರಿಗಳನ್ನು ಆಧರಿಸಿ ಮಾಡಿದ ಚಿತ್ರಗಳಾಗಿದ್ದವು. ಕನ್ನಡದ ಘಟಾನುಘಟಿ ನಟರು ದೊರೈ-ಭಗವಾನ್ ಚಿತ್ರಗಳಲ್ಲಿ ನಟಿಸಿ ಪ್ರಖ್ಯಾತರಾಗಿದ್ದಾರೆ.
ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ: ಅಮಿತ್ ಶಾ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ನೋಡಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಜನಾದೇಶ ಸಿಗಲಿದೆ.ಮಂಡ್ಯದ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ ರಾಜ್ಯಗಳ […]
ಪ್ರಧಾನಿ ಮೋದಿ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಕಲಾವಿದರು

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಯಶ್, ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು, ಬ್ಲಾಗರ್ ಅಯ್ಯೋ ಶ್ರದ್ಧಾ ಮತ್ತು ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಇಂಡಿಯಾ ಪವಿಲಿಯನ್ ನಲ್ಲಿ ಏರೋ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದು ಈ ಸಂದರ್ಭ ಭೇಟಿ ನಡೆದಿದೆ. ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಯಶ್, ಮೋದಿಯವರ ಬಳಿ ಚಿತ್ರೋದ್ಯಮದ ಬಗ್ಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. […]
6085 ಕೋಟಿ ದಾಖಲೆ ಜಿ.ಎಸ್.ಟಿ ಸಂಗ್ರಹ: 30% ಬೆಳವಣಿಗೆ ದರ ಮುಂದುವರಿಕೆ

ಬೆಂಗಳೂರು: “ಈ ತಿಂಗಳು ಜಿಎಸ್‌ಟಿ ಅಡಿಯಲ್ಲಿ 6085 ಕೋಟಿ ದಾಖಲೆ ಸಂಗ್ರಹವಾಗಿದೆ. ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕವು 30% ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ. ಸುಧಾರಣೆಗಳು, ಕೇಂದ್ರೀಕೃತ ಜಾಗರೂಕತೆ, ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ತೆರಿಗೆ ಪಾವತಿದಾರರಿಂದ ಉತ್ತಮ ಅನುಸರಣೆಗಾಗಿ ಕೈಗೊಂಡ ಕ್ರಮಗಳಿಂದಾಗಿ ಈ ಗಮನಾರ್ಹ ಸಂಗ್ರಹಣೆ ಆಗಿದೆ. ಆದಾಯದ ಈ ಹೆಚ್ಚಳವು ಈ ವರ್ಷ ಉತ್ತಮ ಬಜೆಟ್ ಅನ್ನು ಮಂಡಿಸಲು ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಏತನ್ಮಧ್ಯೆ, […]