ರಾಜ್ಯಸಭೆ ಸದಸ್ಯೆಯಾಗಿ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಲೇಖಕಿ, ಸಮಾಜ ಸೇವಕಿ, ಇನ್ಫೋಸಿಸ್ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರು ಇಂದು ಗುರುವಾರ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ತಮ್ಮ ಮಾತೃಭಾಷಾ ಒಲವನ್ನು ವ್ಯಕ್ತಪಡಿಸಿದರು. ಮೂಲತಃ ಇಂಜಿನಿಯರ್ ಆಗಿರುವ ಸುಧಾ ಮೂರ್ತಿ ಅವರು ತಮ್ಮ ಪತಿ ಎನ್ ಆರ್ ನಾರಾಯಣ ಮೂರ್ತಿ ಅವರ ಸಮ್ಮುಖದಲ್ಲಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರಮಾಣ […]
ದಶಕಗಳ ಬಳಿಕ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಲೈಮ್ ಡಿಸೀಸ್: ಬ್ಯಾಕ್ಟೀರಿಯಾದಿಂದ ಹರಡುವ ರೋಗದ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ತಿರುವನಂತಪುರ: ಬರೋಬ್ಬರಿ ಹತ್ತು ವರ್ಷದ ಬಳಿಕ ಕೇರಳ ರಾಜ್ಯದ ಎರ್ನಾಕುಳಂನಲ್ಲಿ ಲೈಮ್ ಡಿಸೀಸ್ (Lyme Disease) ಪತ್ತೆಯಾಗಿದೆ. ಅತ್ಯಂತ ಅಪರೂಪದ ಈ ಕಾಯಿಲೆ ಬೊರೆಲಿಯಾ ಬರ್ಗ್‌ಡೋರ್‍ಫೆರಿ ಎಂಬ ಬ್ಯಾಕ್ಟೀರಿಯಾ ಮೂಲಕ ಹರಡುತ್ತಿದ್ದು, ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಈ ರೋಗವನ್ನು ವೈದ್ಯರು ದೃಢಪಡಿಸಿದ್ದಾರೆ. ತೀವ್ರ ರೀತಿಯ ಜ್ವರ, ಮೊಣಕಾಲಿನ ಊತದಿಂದ ಡಿಸೆಂಬರ್ ತಿಂಗಳಿನಲ್ಲಿ ಈ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕದ ದಿನಗಳಲ್ಲಿ ಅವರಿಗೆ ಅಪಸ್ಮಾರದ ಲಕ್ಷಣ ಕಾಣಿಸಿಕೊಂಡಿತ್ತು. ಬಹಳಷ್ಟು ಚಿಕಿತ್ಸೆ ಬಳಿಕವೂ ಗುಣಮುಖವಾಗದ […]
ಕೊಡಗಿನಲ್ಲಿ ವರುಣ ಸಿಂಚನ; ತಂಪಾದ ಇಳೆ

ಕೊಡಗು: ಇಡೀ ರಾಜ್ಯದಲ್ಲಿ ಬಿಸಿಲ ಧಗೆಯಿಂದ ಜನ ಹೈರಾಣಾಗಿದ್ದು, ಸದ್ಯ ಕೊಡಗಿನ ಹಲವೆಡೆ ಬುಧವಾರ ಸಾಮಾನ್ಯ ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ರಾಜಧಾನಿ ಬೆಂಗಳೂರಿನ ವಾತಾವರಣವೂ ತಣ್ಣಗಾಗಿದ್ದು, ಮಳೆ ಸಾಧ್ಯತೆ ಇಲ್ಲ. ಮಾರ್ಚ್ 20 ರ ನಂತರ ಮಡಿಕೇರಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, […]
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ ಎನ್.ಐ.ಎ

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ (NIA) ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಇಂದು (ಬುಧವಾರ) ಮುಂಜಾನೆ 4 ಗಂಟೆಗೆ ಶಬ್ಬೀರ್ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಸಂಬಂಧವಿರುವ ಬಗ್ಗೆ ಅನುಮಾನದ ಮೇಲೆ ಶಬ್ಬೀರ್ ನನ್ನು ತನಿಖೆಗೆ ಒಳಪಡಿಸಲಾಗಿದೆ. ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ […]
ಸೆಪ್ಟೆಂಬರ್ 17 ಅನ್ನು ‘ಹೈದರಾಬಾದ್ ವಿಮೋಚನಾ ದಿನ’ವನ್ನಾಗಿ ಆಚರಿಸಲು ಕೇಂದ್ರದ ನಿರ್ಧಾರ: ಆಪರೇಷನ್ ಪೊಲೋ ಹುತಾತ್ಮರಿಗೆ ನಮನ

ನವದೆಹಲಿ: ಪ್ರತಿ ವರ್ಷ ಸೆಪ್ಟೆಂಬರ್ 17 ಅನ್ನು ‘ಹೈದರಾಬಾದ್ ವಿಮೋಚನಾ ದಿನ’ ಎಂದು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಪ್ರಕಟಿಸಿದೆ. ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಪಡೆದ ನಂತರವೂ ಹೈದರಾಬಾದ್ 13 ತಿಂಗಳ ಕಾಲ ನಿಜಾಮರ ಆಳ್ವಿಕೆಯಲ್ಲಿತ್ತು ಮತ್ತು ನಂತರದವರೆಗೂ ಸ್ವಾತಂತ್ರ್ಯವನ್ನು ಪಡೆಯಲಿಲ್ಲ ಎಂದು ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ 17, 1948 ರಂದು ‘ಆಪರೇಷನ್ ಪೋಲೋ’ ಎಂದು ಕರೆಯಲ್ಪಡುವ ಪೊಲೀಸ್ ಕಾರ್ಯಾಚರಣೆ ಬಳಿಕ ಈ ಪ್ರದೇಶವನ್ನು ನಿಜಾಮರ […]