5 ನೇ ಮತ್ತು 8 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಮುಂದಿನ ತರಗತಿಗೆ ಬಡ್ತಿ ಇಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ 5 ನೇ ತರಗತಿ ಮತ್ತು 8 ನೇ ತರಗತಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಿದೆ ಎಂದು ಕರ್ನಾಟಕ ಸರ್ಕಾರವು ಇತ್ತೀಚೆಗೆ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. 5ನೇ ತರಗತಿ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ನೋ ಡಿಟೆನ್ಷನ್ ನೀತಿಯನ್ನು ತೆಗೆದುಹಾಕುವುದಾಗಿಯೂ ಅದು ಹೇಳಿದೆ. ಈ ನೀತಿಯ ಪ್ರಕಾರ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಬಡ್ತಿ ಪಡೆಯಲು ತಮ್ಮ ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕಾಗಿದೆ. ಹೊಸ ಮಾರ್ಗಸೂಚಿಗಳ ಜೊತೆಗೆ ಮುಂಬರುವ ವಾರ್ಷಿಕ […]
ಶಿರಾಡಿ ಘಾಟ್ ಗಿಲ್ಲ ಸುರಂಗ ಮಾರ್ಗ; ಚತುಷ್ಪಥ ರಸ್ತೆ ನಿರ್ಮಾಣಕ್ಕೆ ನಿರ್ಧಾರ: ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಶಿರಾಡಿ ಘಾಟ್‌ನಲ್ಲಿ ಸುರಂಗಗಳನ್ನು ನಿರ್ಮಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಮತ್ತು ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75 ಸಿ ರಸ್ತೆಯಲ್ಲಿ ವಾಹನಗಳ ಸಾಂದ್ರತೆಯನ್ನು ಪರಿಹರಿಸಲು ಚತುಷ್ಪಥ ರಸ್ತೆಯನ್ನು ನಿರ್ಮಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. ಶುಕ್ರವಾರದಂದು ಲೋಕಸಭೆಯಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಸುರಂಗ ಮಾರ್ಗದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಾರಿಗೆ ಸಚಿವ, ಶಿರಾಡಿ ಘಾಟ್ ವಿಭಾಗದಲ್ಲಿ ಸುರಂಗಗಳ ನಿರ್ಮಾಣವು ಬೃಹತ್ ಹೂಡಿಕೆಗಳನ್ನು ಜೊತೆಗೆ ಕೆಲಸ […]
ಬೈಂದೂರು ಹುಡುಗರ ಬೇಕರಿ ದುರಸ್ತಿಗೊಳಿಸಿ ಮಾನವೀಯತೆ ಮೆರೆದ ಡಾ. ಗೋವಿಂದ ಬಾಬು ಪೂಜಾರಿ

ಬೆಂಗಳೂರು: ಇತ್ತೀಚೆಗಷ್ಟೆ ಕುಂದನಹಳ್ಳಿ ಗೇಟ್ ಸಮೀಪ ಬೈಂದೂರಿನ ಬೇಕರಿ ಹುಡುಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾದ ಡಾ. ಗೋವಿಂದ ಬಾಬು ಪೂಜಾರಿಯವರು ಹಾನಿಗೊಳಗಾದ ಬೇಕರಿಯನ್ನು ದುರಸ್ತಿ ಮಾಡುವ ಭರವಸೆ ನೀಡಿದ್ದರು. ಅವರ ಸೂಚನೆಯ ಮೇರೆಗೆ ಅವರ ಸಿಬ್ಬಂದಿ ವರ್ಗದವರು ಆದಿತ್ಯವಾರ ಹಾಗೂ ಸೋಮವಾರದಂದು ಬೇಕರಿ ಹುಡುಗರ ಜೊತೆಗಿದ್ದು ಹಾನಿಗೊಳಗಾದ ಉಪಕರಣಗಳನ್ನು ದುರಸ್ತಿಗೊಳಿಸಿ ಡಾ. ಗೋವಿಂದ ಬಾಬು ಪೂಜಾರಿಯವರ ಪರವಾಗಿ ಪೂಜೆ ಸಲ್ಲಿಸಿ ಬೇಕರಿಯನ್ನು ಪುನರಾಂಭಿಸಿದ್ದಾರೆ. ದೂರದ ಬೆಂಗಳೂರಿಗೆ ಬದುಕು […]
ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣ: ಸೂಕ್ತ ಕಾನೂನು ರಚಿಸುವಂತೆ ಗೃಹಸಚಿವರಿಗೆ ಹಿಂಜಾವೇ ಮನವಿ

ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ರೂಪಿಸುವ ಕುರಿತು ಹಿಂದುಪರ ಸಂಘಟನೆಗಳ ನಿಯೋಗವು ದೂರು ಸಲ್ಲಿಸಿ, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಸ್ಪಂದಿಸಿದ ಸಚಿವರು ಪೊಲೀಸ್ ದಳ ರಚಿಸುವ ಕುರಿತಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಹಿಂದೂ ಜಾಗರಣ ವೇದಿಕೆಯ ಸದಸ್ಯರು […]
ಬೆಂಗಳೂರಿನಲ್ಲಿ ಬೈಂದೂರು ಹುಡುಗರ ಮೇಲೆ ಮಾರಣಾಂತಿಕ ಹಲ್ಲೆ: ಕಠಿಣ ಕ್ರಮಕ್ಕೆ ಒಕ್ಕೊರಲ ಆಗ್ರಹ

ಬೆಂಗಳೂರು: ಹೊಟ್ಟೆಪಾಡಿಗೆಂದು ಊರು ಬಿಟ್ಟು ಪರವೂರು ಸೇರಿ ನಿಯತ್ತಿನಿಂದ ದುಡಿಯುತ್ತಿದ್ದ ಯುವಕರ ಮೇಲೆ ಸಿಗರೇಟಿನ ಹಣ ಕೇಳಿದರೆನ್ನುವ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒಕ್ಕೊರಲ ಆಗ್ರಹ ಕೇಳಿ ಬರುತ್ತಿದೆ. ಬೆಂಗಳೂರಿನ ಕುಂದಲಹಳ್ಳಿ ಎಚ್.ಎ.ಎಲ್ ಸಮೀಪ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರ ಬೈಂದೂರು ಮೂಲದ ನವೀನ್ ಕುಮಾರ್, ಪ್ರಜ್ವಲ್ ಶೆಟ್ಟಿ, ನಿತಿನ್ ಶೆಟ್ಟಿ ಎಂಬುವರ ಮೇಲೆ ಗುರುವಾರದಂದು ಬೆಂಗಳೂರಿನ ಪುಡಿ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ದೃಶ್ಯಗಳ […]