ಚಿಕ್ಕಮಗಳೂರು: ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಚಿಕ್ಕಮಗಳೂರು: ಬಾಬಾಬುಡನ್‌ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿ ರಚನೆ ಮಾಡುವಂತೆ ಹಲವು ವರ್ಷಗಳ ಹೋರಾಟ ನಡೆಯುತ್ತಿದ್ದು, ಕೊನೆಗೂ ಸರ್ಕಾರ ಎಂಟು ಮಂದಿ ಸದಸ್ಯರ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬ ಮುಸ್ಲಿಂ ಸದಸ್ಯ ಇರಲಿದ್ದಾರೆ. ಮೂರು ವರ್ಷಗಳ ಅವಧಿಗೆ ಸಮಿತಿಯನ್ನು ರಚಿಸಲಾಗಿದೆ. ಹೈಕೋರ್ಚ್ ಆದೇಶದಂತೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ ಎಂದು ಶುಕ್ರವಾರದಂದು ಹಿಂದೂ […]
ಪ.ಜಾತಿ ಮತ್ತು ಪ. ಪಂಗಡದ ಬಗ್ಗೆ ಕಾಂಗ್ರೆಸ್ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದೆ: ಬಿ ಶ್ರೀರಾಮುಲು

ಬಳ್ಳಾರಿ: ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದರು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ. ಬಳ್ಳಾರಿಯಲ್ಲಿ ನ 20ರಂದು ಬಿಜೆಪಿ ಎಸ್.ಟಿ. ಮೋರ್ಚಾ ನವಶಕ್ತಿ ಸಮಾವೇಶ ನಡೆಯುವ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ […]
ರಾಜ್ಯ ಸರ್ಕಾರದ ಶ್ರೀಗಂಧ ನೀತಿ-2022: ರೈತರು ಶ್ರೀಗಂಧ ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ

ಬೆಂಗಳೂರು: ಶ್ರೀಗಂಧಕ್ಕೆ ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ರಾಜ್ಯ ಸರ್ಕಾರವು ಶ್ರೀಗಂಧ ನೀತಿ-2022 ಅನ್ನು ಹೊರತಂದಿದ್ದು, ಇದರಲ್ಲಿ ರೈತರು ತಮ್ಮ ಹೊಲಗಳಲ್ಲಿ ಶ್ರೀಗಂಧವನ್ನು ಬೆಳೆದು ನಂತರ ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟಕ್ಕೆ ನಿರ್ಬಂಧವಿತ್ತು .ಈ ನೀತಿ ಜಾರಿಗೆ ಬರುವುದರೊಂದಿಗೆ, ಕಳ್ಳತನ ತಡೆಯಲು ಶ್ರೀಗಂಧದ ಮರಕ್ಕೆ ರಕ್ಷಣೆ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದು, ತಂತ್ರಜ್ಞಾನದ ಬಳಕೆಯಿಂದ ಶ್ರೀಗಂಧದ ಮರಗಳಿಗೆ […]
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಆರ್. ಎಲ್. ಕಶ್ಯಪ್ ನಿಧನ

ಬೆಂಗಳೂರು: ಸಾಕ್ಷಿ ಟ್ರಸ್ಟ್ ಸಂಸ್ಥಾಪಕ, ಕಂಪ್ಯೂಟರ್ ಪ್ಯಾಟರ್ನ್ ರೆಕಗ್ನಿಷನ್ ಮತ್ತು ಮೆಷಿನ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಮೂಲಭೂತ ಕೊಡುಗೆಗಳನ್ನು ನೀಡಿರುವ ಹಾಗೂ 25 ಸಾವಿರ ಋಗ್ವೇದ ಮಂತ್ರಗಳನ್ನು ಆಂಗ್ಲ ಭಾಷೆಗೆ ಅನುವಾದಿಸಿ, 50ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಆರ್. ಎಲ್. ಕಶ್ಯಪ್ ತಮ್ಮ 85ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವಿವಾಹಿತರಾಗಿದ್ದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ವಿದ್ವಾನ್ ಆರ್.ಎಲ್.ಕಶ್ಯಪ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಸರ್ಕಾರದ ಮುಖ್ಯಸ್ಥನಾಗಿ ಸರ್ಕಾರಿ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ನನ್ನ ಕರ್ತವ್ಯ. 7 ನೇ ವೇತನ ಆಯೋಗವನ್ನು ಸದ್ಯ ರಚಿಸಲಾಗಿದ್ದು, ಸರ್ಕಾರಿ ನೌಕರರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ನೌಕರರು ಪ್ರತಿ ದಿನ ಒಂದು ತಾಸು ಹೆಚ್ಚು ಕೆಲಸ ಮಾಡುವ ಮೂಲಕ ರಾಜ್ಯದ ಪ್ರಗತಿಗೆ ಹೆಚ್ಚಿನ ಕೊಡುಗೆಯನ್ನು ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. 7 ನೇ ವೇತನ ಆಯೋಗವನ್ನು ಐದು ವರ್ಷಗಳಲ್ಲೆ ಮಾಡಿರುವ ದಾಖಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ವರ್ಷದಿಂದ […]