ಬಿಆರ್‌ಎಸ್ ಜೊತೆ ಮೈತ್ರಿ ಮಾಡಲಿರುವ ಜೆಡಿಎಸ್: ರಾಜಕೀಯ ಏಕಸ್ವಾಮ್ಯ ಕೊನೆಗಾಣಿಸಲು ನಿರ್ಧಾರ

ಹೈದರಾಬಾದ್: ಜನತಾ ದಳ ಜಾತ್ಯಾತೀತ(ಜೆಡಿಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೊತೆ ಸಕ್ರಿಯವಾಗಿ ಕೆಲಸ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ. ಎರಡು ದಶಕಗಳಷ್ಟು ಹಳೆಯದಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಲು ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಹೊಂದಿದೆ. ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್‌ಎಸ್ ಪಕ್ಷಗಳು […]
ದುರ್ಗಾ ವೇಷ ಧರಿಸಿ ರಸ್ತೆ ಗುಂಡಿಯಲ್ಲಿ ನಡೆದ ಬಾಲಕಿ: ಹುಬ್ಬಳ್ಳಿಯ ನಗರ ಪಾಲಿಕೆ ಗಮನ ಸೆಳೆಯಲು ವಿನೂತನ ವಿಧಾನ

ಹುಬ್ಬಳ್ಳಿ: 2ನೇ ತರಗತಿಯ ಬಾಲಕಿಯೊಬ್ಬಳು ನವರಾತ್ರಿಯ ವೇಳೆ ದುರ್ಗೆಯ ವೇಷ ಧರಿಸಿ ಇಲ್ಲಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಹುಬ್ಬಳ್ಳಿಯ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಆಕೆ ಈ ಕ್ರಮ ಕೈಗೊಂಡಿದ್ದಾಳೆ. 9 ವರ್ಷದ ಹರ್ಷಿತಾ ಎಂದು ಗುರುತಿಸಲಾದ ಬಾಲಕಿಯು ದುರ್ಗೆಯ ವೇಷ ಧರಿಸಿ ಮಳೆನೀರಿನ ಕೊಚ್ಚೆ, ಕೆಸರಿನಿಂದ ತುಂಬಿರುವ ಹೊಂಡಗಳಿಂದ ಕೂಡಿದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೀಡಿಯೋ ಒಂದು ಹರಿದಾಡುತ್ತಿದೆ. ಕೆಸರಿನ ನೀರಿನಿಂದ ತುಂಬಿದ ಅಂತಹ ಒಂದು ಗುಂಡಿಯ ಮಧ್ಯದಲ್ಲಿ ಆಕೆ […]
ಭಾರತ್ ಜೋಡೋ ಯಾತ್ರೆ: ಕರ್ನಾಟಕಕ್ಕೆ ಆಗಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ಮೈಸೂರು: ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರು ಅಕ್ಟೋಬರ್ 6 ರಂದು ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರು ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್‌ನಲ್ಲಿ ತಂಗಲಿದ್ದಾರೆ ಎನ್ನಲಾಗಿದೆ. ಮೈಸೂರು ಭಾಗದ ಯಾತ್ರೆ ಮುಗಿಸಿ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ತೆರಳಲಿದ್ದಾರೆ. ಅಕ್ಟೋಬರ್ 6 ರಂದು ಭಾರತ್ ಜೋಡೋ ಯಾತ್ರೆಯನ್ನು […]
ದೇವರ ಕೋಲು ಮುಟ್ಟಿದ್ದಕ್ಕೆ ಹಲ್ಲೆಗೊಳಗಾದ ದಲಿತ ಬಾಲಕನ ಮನೆಗೆ ಸಮಾಜ ಕಲ್ಯಾಣ ಸಚಿವರ ಭೇಟಿ: ಪರಿಹಾರ ಘೋಷಣೆ

ಕೋಲಾರ: ದೇವರ ಉತ್ಸವದಲ್ಲಿ 14 ವರ್ಷದ ದಲಿತ ಬಾಲಕನೊಬ್ಬ ಉತ್ಸವ ಮೂರ್ತಿಯನ್ನು ಮುಟ್ಟಿದ ಎಂಬ ಕಾರಣಕ್ಕೆ ಆತನನ್ನು ಥಳಿಸಿ, ಆತನ ಕುಟುಂಬಕ್ಕೆ 60 ಸಾವಿರ ರೂಗಳ ದಂಡ ವಿಧಿಸಿರುವ ಘಟನೆ ಕೋಲಾರ ತಾಲೂಕಿನ ಟೇಕಲ್ ಬಳಿಯ ಉಳ್ಳೇರ ಹಳ್ಳಿಯಲ್ಲಿ ನಡೆದಿತ್ತು. ಭೂತಮ್ಮನ ಮೂರ್ತಿ ಉತ್ಸವದ ವೇಳೆ ಕೆಳಕ್ಕೆ ಬಿದ್ದ ದೇವರನ್ನು ಹೊರುವ ಗುಜ್ಜ ಕೋಲನ್ನು ದಲಿತ ಬಾಲಕನೊಬ್ಬ ಎತ್ತಿಕೊಟ್ಟಿದ್ದಕ್ಕೆ ಸಿಟ್ಟಾದ ಕೆಲವರು ಉತ್ಸವ ಮೂರ್ತಿಯನ್ನು ಮುಟ್ಟಿದ ಎಂದು ಆತನನ್ನು ಥಳಿಸಿದ್ದರು. ಬಾಲಕನ ಕುಟುಂಬಕ್ಕೆ 60 ಸಾವಿರ ರೂಗಳ […]
ಕೇಂದ್ರ ಸಚಿವೆಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ನಮನ ಸಲ್ಲಿಕೆ

ವರ್ಕಲ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸಾಮಾಜಿಕ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ದಿನದಂದು ಕೇರಳದ ವರ್ಕಲದಲ್ಲಿನ ಶ್ರೀ ನಾರಾಯಣ ಗುರುಗಳ ಸಮಾಧಿಗೆ ಭೇಟಿ ನೀಡಿ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.