ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ ಹಣದ ಕಟ್ಟು ವಾಪಸ್ ಎಸೆತ: ಹಣ ಬೇಡ, ಸಮಾಜದಲ್ಲಿ ಶಾಂತಿ ಬೇಕು ಎಂದ ಮಹಿಳೆ

ಕೆರೂರು: ಬಾಗಲಕೋಟೆಯ ಕೆರೂರಿನಲ್ಲಿ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ನಾಲ್ವರಲ್ಲಿ ಒಬ್ಬರ ಕುಟುಂಬದ ಸದಸ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ 2 ಲಕ್ಷ ರೂ. ಗಳ ಹಣದ ಕಟ್ಟನ್ನು ಅವರ ಕಾರಿನ ಮೇಲೆ ವಾಪಸ್ ಎಸೆದಿದ್ದಾರೆ. ಇಷ್ಟು ದಿನ ಕಳೆದರೂ ಯಾವೊಬ್ಬ ನಾಯಕನೂ ಭೇಟಿಗೆ ಬಾರದಿರುವುದಕ್ಕೆ ಗಾಯಾಳುಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. #WATCH | Karnataka: A woman, whose husband was injured in recent Kerur violence, threw the money that was […]
ಅಂಕೋಲಾದಲ್ಲಿ ಕೊಚ್ಚಿ ಹೋದ ಸೇತುವೆ, ಸಂಪಾಜೆಯಲ್ಲಿ ಶಾಲೆ ಮೇಲೆ ಗುಡ್ಡ ಕುಸಿತ

ಕೊಡಗು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಕೃತಕ ನೆರೆ, ಮನೆಗಳೌ ಜಲಾವೃತವಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಕೊಯನಾಡು ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಗುಡ್ಡ ಕುಸಿದಿದ್ದರೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಗುಳ್ಳಾಪುರದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ ಸೇತುವೆ ಆರಂಭಿಕ ಮಳೆಗೆ ಕೊಚ್ಚಿ ಹೋಗಿದೆ. https://twitter.com/i/status/1546072884379979777 ಕೃಪೆ: ಕರ್ನಾಟಕ ರೈನ್ಸ್
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಕಾರಾಗೃಹ ಸಿಬ್ಬಂದಿಯ ನೌಕರಿಗೆ ಕುತ್ತು

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ದೊರೆಯುತ್ತಿರುವ ಬಗ್ಗೆ ವರದಿ ಬಂದ ಮೇಲೆ ರಾಜ್ಯಾದ್ಯಂತ ಈ ಬಗ್ಗೆ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತ ಸರಕಾರ ಇನ್ನು ಮುಂದೆ ಕೈದಿಗಳಿಗೆ ಡ್ರಗ್ಸ್, ಮದ್ಯ, ಮೊಬೈಲ್ ಮುಂತಾದ ವಸ್ತುಗಳನ್ನು ಪೂರೈಸುವ ಕಾರಾಗೃಹ ಸಿಬ್ಬಂದಿಗಳನ್ನು ಸೇವೆಯಿಂದಲೇ ವಜಾ ಮಾಡಲು ಮುಂದಾಗಿದೆ. ಕಾರಾಗೃಹದ ನೂತನ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಇನ್ನು ಮುಂದೆ ಜೈಲಿನ ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತು ಮಾಡದೆ, ನೇರವಾಗಿ ಸೇವೆಯಿಂದಲೇ ವಜಾಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಕೆಲ […]
ಅಮರನಾಥ ಯಾತ್ರೆಯಲ್ಲಿ ಸಿಲುಕಿದ ಕನ್ನಡಿಗರಿಗಾಗಿ ಸಹಾಯವಾಣಿ ಪ್ರಾರಂಭಿಸಿದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಕಾಶ್ಮೀರದ ಪ್ರಖ್ಯಾತ ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಭಾರೀ ಮಳೆಯಿಂದ ಕೃತಕ ನೆರೆ ಉಂಟಾಗಿ ಇದುವರೆಗೆ 16 ಮಂದಿ ಸಾವಿಗೀಡಾಗಿದ್ದು, 60ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಗಂಭೀರವಾಗಿರುವ ರಾಜ್ಯ ಸರ್ಕಾರ ಅಮರನಾಥ ಯಾತ್ರೆಯಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ 080-1070, 22340676 ಕರೆ ಮಾಡುವ ಮೂಲಕ ಅಥವಾ [email protected] ಗೆ ಇಮೇಲ್ […]
ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಪರಿಸರ ರಾಯಭಾರಿ: ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ

ಬೆಂಗಳೂರು: ಕರ್ನಾಟಕದ ವೃಕ್ಷ ಮಾತೆ, ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತೆ, ಸಾಲು ಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಿಸಿ, ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಿಮ್ಮಕ್ಕ ಪರಿಸರ ರಾಯಭಾರಿಯಾಗಿರುವುದರಿಂದ ರಾಜ್ಯ ಯಾ ಅಂತಾರಾಜ್ಯ ಪ್ರವಾಸ ಕೈಗೊಂಡಾಗ ಅದರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಅವರಿಗೆ ಈಗಾಗಲೇ ನೀಡಿರುವ ಬಿಡಿಎ ನಿವೇಶನದಲ್ಲಿ ಸರ್ಕಾರವೇ ಮನೆ ಕಟ್ಟಿಸಿಕೊಡಲಿದೆ. ಜತೆಗೆ ಸರ್ಕಾರ ಹತ್ತು ಎಕರೆ ಜಮೀನು ನೀಡಲಿದೆ ಎಂದು […]