ಖ್ಯಾತ ವಾಸ್ತು ತಜ್ಞ, ಚಂದ್ರಶೇಖರ್ ಗುರೂಜಿ ನಿರ್ಮಮ ಹತ್ಯೆ: 60 ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಿ ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಜನಪ್ರಿಯರಾಗಿದ್ದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್‌ ಗುರೂಜಿ ಅವರನ್ನು ಹುಬ್ಬಳ್ಳಿಯ ಹೋಟೆಲ್‌ನಲ್ಲಿ ನಿರ್ಮಮವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಭಕ್ತರ ಸೋಗಿನಲ್ಲಿ ಬಂದ ಹಂತಕರು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್‌ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್‌ ಗುರೂಜಿಯ ಆಶೀರ್ವಾದ ಪಡೆಯುವಂತೆ ಬಂದು, ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ […]

50 ವರ್ಷಗಳ ನಂತರ ದಂಪತಿಯನ್ನು ಮತ್ತೆ ಒಂದಾಗಿಸಿದ ಲೋಕ ಅದಾಲತ್: ಒಂದೇ ದಿನದಲ್ಲಿ 7.65 ಲಕ್ಷ ಪ್ರಕರಣಗಳ ಇತ್ಯರ್ಥ

ಬೆಂಗಳೂರು: ಇತ್ತೀಚಿಗೆ ಆಯೋಜಿಸಲಾದ ಲೋಕ ಅದಾಲತ್‌ಗಳಲ್ಲಿ 50 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಗಿದೆ. ಕಲಘಟಗಿಯ ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗದ ಲೋಕ ಅದಾಲತ್‌ನಲ್ಲಿ 80 ವರ್ಷದ ಪತ್ನಿ ಮತ್ತು 85 ವರ್ಷದ ಪತಿ ರಾಜಿ ಮಾಡಿಕೊಂಡಿದ್ದಾರೆ. ಸಂಧಾನದ ನಂತರ, ಎರಡೂ ಪಕ್ಷಗಳು ಪುನರ್ಮಿಲನದ ಮೂಲಕ ವಿಷಯವನ್ನು ಇತ್ಯರ್ಥಪಡಿಸಿದವು. ಒಟ್ಟಾರೆಯಾಗಿ 1,128 ವೈವಾಹಿಕ ವಿವಾದಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಸಮನ್ವಯದ ಕಾರಣದಿಂದಾಗಿ 107 ಜೋಡಿಗಳು ಮತ್ತೆ ಒಂದಾಗಿದ್ದಾವೆ ಎಂದು ರಾಷ್ಟ್ರೀಯ ಲೋಕ ಅದಾಲತ್ ನ ಮುಖ್ಯ ನ್ಯಾಯಾಧೀಶ […]

ಶಾಲಾ ಪಠ್ಯ ಪುಸ್ತಕ ವಿವಾದ: ಸರಿಪಡಿಸಿದ ಪಠ್ಯ ಪುಸ್ತಕಗಳನ್ನು ಉಚಿತ ಬುಕ್‌ಲೆಟ್ ರೂಪದಲ್ಲಿ ನೀಡಲು ನಿರ್ಧಾರ

ಬೆಂಗಳೂರು: ಪಠ್ಯಪುಸ್ತಕದಲ್ಲಿ ಕಂಡು ಬಂದ ತಪ್ಪುಗಳನ್ನು ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಿ ವಿತರಣೆ ಮಾಡಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಹೊಸ ಪಠ್ಯಪುಸ್ತಕಗಳನ್ನು ಮುದ್ರಿಸಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಬುಕ್ ಲೆಟ್ ರೂಪದಲ್ಲಿ ವಿತರಿಸಲು ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯು ತೀರ್ಮಾನಿಸಿದೆ. ತಿದ್ದುಪಡಿ ಮಾಡಿದ ಅಂಶಗಳ ಸಾಫ್ಟ್‌ ಪ್ರತಿಗಳನ್ನು ಜಾಲತಾಣದಲ್ಲಿ ಪ್ರಕಟಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈಗಾಗಲೇ ಪರಿಷ್ಕರಿಸಿರುವ ಪಠ್ಯಪುಸ್ತಕಗಳಲ್ಲಿ ಬಿಟ್ಟುಹೋದ ಅಂಶಗಳನ್ನು […]

ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಆಚರಣೆ: ಎಸ್ ಎಂ ಕೃಷ್ಣ, ನಾರಾಯಣ ಮೂರ್ತಿ ಮತ್ತು ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು: ಸೋಮವಾರದಂದು ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೊದಲ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ […]

ಸಾಗರ ಉಪವಿಭಾಗ ಆಸ್ಪತ್ರೆಯಲ್ಲಿ ಆ್ಯಂಟಿಬಯೋಟಿಕ್ ಚುಚ್ಚುಮದ್ದು ಪ್ರಮಾದ: ದಾಖಲಾದ 14 ಮಕ್ಕಳಲ್ಲಿ 4 ಮಕ್ಕಳ ಆರೋಗ್ಯ ಗಂಭೀರ

ಶಿವಮೊಗ್ಗ: ಸಾಗರದ ತಾಲೂಕು ಉಪವಿಭಾಗದ ಆಸ್ಪತ್ರೆಯಲ್ಲಿ ಜ್ವರ, ಕೆಮ್ಮು, ವಾಂತಿ ಸೇರಿದಂತೆ ನಾನಾ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿರುವ ಹತ್ತು ತಿಂಗಳಿಂದ 12 ವರ್ಷದೊಳಗಿನ 14 ಮಕ್ಕಳ ಪೈಕಿ ನಾಲ್ವರು ಮಕ್ಕಳ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಶಿವಮೊಗ್ಗದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಈ ಎಲ್ಲಾ ಮಕ್ಕಳಿಗೆ ಆ್ಯಂಟಿಬಯೋಟಿಕ್ ಚುಚ್ಚುಮದ್ದನ್ನು ಆಸ್ಪತ್ರೆಯ ದಾದಿಯರು ನೀಡಿದ್ದು, ಆ ಬಳಿಕ ಮಕ್ಕಳ ಆರೋಗ್ಯ ಹದಗೆಟ್ಟಿದೆ. ಮೂವರನ್ನು ಶಿವಮೊಗ್ಗದ ಜಿಲ್ಲಾ ಮೆಕ್‌ಗಾನ್‌ ಜನರಲ್‌ ಆಸ್ಪತ್ರೆಯಲ್ಲಿ ಹಾಗೂ ಒಂದು ಮಗುವನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. […]