ತಿಂಗಳಿಗೆ 15 ದಿನ ಅರಣ್ಯದಲ್ಲೇ ಇರಿ: ಹಿರಿಯ ಅರಣ್ಯ ಇಲಾಖಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ನಿರ್ದೇಶನ

ಬೆಂಗಳೂರು: ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳಿಂದ ಹಿಡಿದು ಪ್ರಧಾನ ಕಾರ್ಯದರ್ಶಿವರೆಗಿನ ಎಲ್ಲ ಅರಣ್ಯ ಇಲಾಖಾಧಿಕಾರಿಗಳು ತಿಂಗಳಲ್ಲಿ 15 ದಿನಗಳ ಕಾಲ ಅರಣ್ಯದಲ್ಲಿ ಇರುವಂತೆ ಶನಿವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. “ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲೆ ನೆಲೆಸಿದ್ದಾರೆ. ನೀವು ನಿಮ್ಮ ಕಛೇರಿಯಿಂದ ಹೊರಗೆ ಬರುತ್ತಿಲ್ಲ. ಕಾಡಿಗೆ ಹೋಗಿ, ತಿಂಗಳಿಗೆ 15 ದಿನ ಅಲ್ಲೇ ಇರಿ. ಇದು ಇಲಾಖೆಯ ಇತರ ಸಿಬ್ಬಂದಿಗಳ ನೈತಿಕತೆಯನ್ನು ಹೆಚ್ಚಿಸುತ್ತದೆ. ಹಿರಿಯ ಅಧಿಕಾರಿಗಳು ಅರಣ್ಯ ಸಂರಕ್ಷಣೆಯಲ್ಲಿ ತೊಡಗಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತದೆ” ಎಂದು ಬೊಮ್ಮಾಯಿ ಹೇಳಿದ್ದಾರೆ ಎಂದು […]

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಜನತಾದಳ ಶಾಸಕ ಎಂ ಶ್ರೀನಿವಾಸ್

ಬೆಂಗಳೂರು: ನಾಲ್ವಡಿ ಕೃಷ್ಣ ರಾಜ ಒಡೆಯರ್ ಐಟಿಐ ಕಾಲೇಜಿನಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಲ್ಯಾಬ್‌ನ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸರಿಯಾದ ಉತ್ತರ ನೀಡಲು ಸಾಧ್ಯವಾಗದಿದ್ದುದಕ್ಕಾಗಿ ಮಂಡ್ಯದ ಜೆಡಿಎಸ್ ಶಾಸಕ ಶ್ರೀನಿವಾಸ್, ತಮ್ಮ ಸಹೋದ್ಯೋಗಿಗಳ ಮುಂದೆ ಕಾಲೇಜು ಪ್ರಾಂಶುಪಾಲರೊಬ್ಬರಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀನಿವಾಸ್ ಪ್ರಾಂಶುಪಾಲರನ್ನು ಅವಮರ್ಯಾದೆಯಿಂದ ನಡೆಸಿಕೊಂಡಿದ್ದಾರೆ ಎಂದು ಹಲವರು ಕಿಡಿಕಾರಿದ್ದಾರೆ. ನವೀಕೃತ ಐಟಿಐ ಕಾಲೇಜು ಉದ್ಘಾಟನೆ ವೇಳೆ ಪ್ರಾಂಶುಪಾಲ ನಾಗನಾದ್ ಅವರು ಪ್ರಯೋಗಾಲಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ […]

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೆ. ಪಿ. ನಡ್ಡಾಗೆ ಸನ್ಮಾನ

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ. ಪಿ. ನಡ್ಡಾರಿಗೆ ಬೆಳ್ಳಿಯ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ […]

ಜೂ.25 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಆಯೋಜನೆ

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಜೂನ್ 25 ರಂದು ಇ-ಲೋಕ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಮೆಗಾ ಲೋಕ್ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ […]

ಎಂ ಎಲ್ ಸಿ ಚುನಾವಣೆ : ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು

ಬೆಂಗಳೂರು: ಕರ್ನಾಟಕದ ಪಶ್ಚಿಮ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎಂಎಲ್‌ಸಿ ಚುನಾವಣೆಯಲ್ಲಿ ಸತತ 8 ಬಾರಿ ಗೆದ್ದ ದೇಶದ ಮೊದಲ ಎಂಎಲ್‌ಸಿ ಎನ್ನುವ ಹೆಗ್ಗಳಿಕೆಗೆ ಹೊರಟ್ಟಿ ಪಾತ್ರವಾಗಿದ್ದಾರೆ. ಇನ್ನೂ 3 ಸ್ಥಾನಗಳಿಗೆ ಕೌಟಿಂಗ್ ನಡೆಯುತ್ತಿದ್ದು, ಕರ್ನಾಟಕದ ಮೇಲ್ಮನೆಯಲ್ಲಿ ಬಿಜೆಪಿ ಬಹುಮತದತ್ತ ಸಾಗುತ್ತಿದೆ.