ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರು ಕಾಂಗ್ರೆಸ್ ಗೆ ಮತ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ” ಶ್ರೀನಿವಾಸಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಹೇಳಿದ್ದೆ. ಎಸ್‌ಆರ್ ಶ್ರೀನಿವಾಸ್ ಕೂಡ ಜೆಡಿಎಸ್‌ಗೆ ಮತ ಹಾಕಿಲ್ಲ. ಕಾಂಗ್ರೆಸ್ ಇಂದು ತನ್ನ ನಿಜವಾದ ಮುಖವನ್ನು ತೋರಿಸಿದೆ. ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್. ದೇಶದಲ್ಲಿ ಬಿಜೆಪಿ ಬೆಳೆಯಲು ಅವರೇ ಮುಖ್ಯ ಕಾರಣಕರ್ತರು” ಎಂದು ಮಾಧ್ಯಮಗಳೆದುರು ಹೇಳಿಕೊಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಈ ಬಗ್ಗೆ […]
ಎವರೆಸ್ಟ್ ಮ್ಯಾರಥಾನ್‌ನಲ್ಲಿ ದಾಖಲೆ ನಿರ್ಮಿಸಿದ ಬೆಂಗಳೂರಿನ ಮಹಿಳೆ ಅಶ್ವಿನಿ ಭಟ್

ಬೆಂಗಳೂರು: ಬೆಂಗಳೂರಿನ 36 ವರ್ಷದ ಅಶ್ವಿನಿ ಗಣಪತಿ ಭಟ್, ಎವರೆಸ್ಟ್ ಬೇಸ್ ಕ್ಯಾಂಪ್‌ಗೆ ತನ್ನ ಚಾರಣವನ್ನು ಸ್ವತಃ ಪೂರ್ಣಗೊಳಿಸಿದ್ದು ಮಾತ್ರವಲ್ಲದೆ, ಗಮ್ಯಸ್ಥಾನಕ್ಕೆ ತಲುಪಲು 60 ಕಿ.ಮೀ ಮ್ಯಾರಥಾನ್ ಓಟವನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 15 ಓಟಗಾರರು ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದು, ಅಶ್ವಿನಿ 9 ನೇ ಸ್ಥಾನ ಪಡೆದಿದ್ದಾರೆ ಮತ್ತು ವಿಶ್ವಾದ್ಯಂತ ಮಹಿಳೆಯರಲ್ಲಿ ನಾಲ್ಕನೇ ಅತ್ಯುತ್ತಮ ದಾಖಲೆಯನ್ನು ಮೇ 29 ರಂದು ಸ್ಥಾಪಿಸಿದ್ದಾರೆ. “ಈ ವರ್ಷ ಮ್ಯಾರಥಾನ್‌ನಲ್ಲಿ ಓಡಿದ ಏಕೈಕ ಮಹಿಳೆ ನಾನು. ಇದು ನಾನು ಬಯಸಿದ ಫಲಿತಾಂಶವಾಗಿರಲಿಲ್ಲ, ಆದರೆ […]
ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ: ‘ಅಡ್ಡ ಮತದಾನ’ದ ಭಯದಿಂದ ಶಾಸಕರನ್ನು ಹೋಟೆಲ್‌ಗೆ ಸ್ಥಳಾಂತರಿಸಿದ ಜನತಾ ದಳ

ಬೆಂಗಳೂರು: ರಾಜ್ಯಸಭಾ ಚುನಾವಣೆಗೂ ಮುನ್ನಿನ ರೆಸಾರ್ಟ್ ರಾಜಕಾರಣ ರಾಜ್ಯದ ಅಂಗಳಕ್ಕೂ ಕಾಲಿಟ್ಟಿದೆ. ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ‘ಹೋಟೆಲ್ ರಾಜಕೀಯ’ದ ಸೂಚನೆಯ ನಂತರ, ಜನತಾ ದಳ (ಜಾತ್ಯತೀತ) ತನ್ನ ಎಲ್ಲಾ 32 ಶಾಸಕರನ್ನು ಬೆಂಗಳೂರಿನ 5-ಸ್ಟಾರ್ ಹೋಟೆಲ್‌ಗೆ ಸ್ಥಳಾಂತರಿಸಿದೆ. ರಾಜ್ಯದಿಂದ ನಾಲ್ಕನೇ ಮತ್ತು ಕೊನೆಯ ಸ್ಥಾನಕ್ಕಾಗಿ ಪೈಪೋಟಿಯು ಬಿಗಿಯಾಗಿರುವ ಹೊತ್ತಿನಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ಜೆಡಿಎಸ್ ತನ್ನ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ನ ಬೆಂಬಲವನ್ನು ಕೋರುವುದನ್ನು ಮುಂದುವರೆಸಿದರೆ, ಮತ್ತೊಂದೆಡೆ ಕಾಂಗ್ರೆಸ್ ಸಹ ಜೆಡಿಎಸ್ ನ ಎಲ್ಲಾ 32 ಶಾಸಕರ […]
ಕಾಶ್ಮೀರದ ಭಯೋತ್ಪಾದಕ ಬೆಂಗಳೂರಿನಲ್ಲಿ ಬಂಧನ: ತನಿಖೆಯನ್ನು ತೀವ್ರಗೊಳಿಸಿದ ಪೊಲೀಸರು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಕಾಶ್ಮೀರದ ಭಯೋತ್ಪಾದಕ ತಾಲಿಬ್ ಹುಸೇನ್ ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ ಬಳಿಕ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. “ಬೆಂಗಳೂರಿನಲ್ಲಿ ಆತನಿಗೆ ಯಾರು ಆಶ್ರಯ ನೀಡಿದ್ದಾರೆ, ಆತ ಎಲ್ಲಿ ಉಳಿದುಕೊಂಡಿದ್ದಾನೆ ಮತ್ತು ಯಾವ ಸಂಘಟನೆಗಳು ಅಥವಾ ಜನರು ಆತನನ್ನು ಬೆಂಬಲಿಸುತ್ತಿದ್ದಾರೆ ಎಂಬ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದಾರೆ. ಭದ್ರತಾ ಕಾರಣಗಳಿಗಾಗಿ ನಡೆಯುತ್ತಿರುವ ತನಿಖೆಯ ವಿವರಗಳನ್ನು […]
ಸರ್ಕಾರ ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಿದೆ: ಸಿಎಂ ಬೊಮ್ಮಾಯಿ

ಮೈಸೂರು: ರಾಜ್ಯ ಸರ್ಕಾರವು ಶೀಘ್ರವೇ ಲೋಕಾಯುಕ್ತರನ್ನು ನೇಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲೋಕಾಯುಕ್ತರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂರು ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲ್ಲಲಿದ್ದಾರೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಆಫರ್‌ಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.