ಕರ್ನಾಟಕದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್

ಬೆಂಗಳೂರು: ಮಂಗಳವಾರದಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ಮಲಾ ಸೀತಾರಾಮನ್ ರವರಿಗೆ ಶುಭ ಹಾರೈಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.  

ಬೆಂಗಳೂರಿನ ಸೇಂಟ್ ಮಾರ್ಥಾಸ್ ಆಸ್ಪತ್ರೆ ಮೇಲ್ಛಾವಣಿ ಕುಸಿತ: ಮೂವರು ಕಾರ್ಮಿಕರು ಗಾಯಾಳು; ಒಬ್ಬನ ಸ್ಥಿತಿ ಗಂಭೀರ

ಬೆಂಗಳೂರು: ಮಂಗಳವಾರ ಬೆಳಗ್ಗೆ 6:30ರ ಸುಮಾರಿಗೆ ನೃಪತುಂಗ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಪೋರ್ಟಿಕೋದ ಮೇಲ್ಛಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನೊಬ್ಬನ ಸ್ಥಿತಿ ಗಂಭೀರವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಆತನ ಜೊತೆ ಕೆಲಸ ಮಾಡುತ್ತಿದ್ದ ಮೂವರು ಸಹೋದ್ಯೋಗಿಗಳಿಗೆ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕನನ್ನು ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ನಿಗಾವಣೆಯಲ್ಲಿರಿಸಿದ್ದು, ಇತರ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೋರ್ಟಿಕೋದ ನಿರ್ಮಾಣವು ಎರಡು ತಿಂಗಳ ಹಿಂದೆ ಪ್ರಾರಂಭವಾಗಿತ್ತು ಮತ್ತು ಇದು ಒಂದು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಸೇಂಟ್ ಮಾರ್ಥಾಸ್ […]

ಕೇರಳಕ್ಕೆ ಮುಂಚಿತವಾಗಿ ಆಗಮಿಸಿದ ಮಾನ್ಸೂನ್: ಜೂನ್ 2 ರೊಳಗೆ ಕರ್ನಾಟಕಕ್ಕೆ ಮುಂಗಾರು ಮಳೆಯ ಸಿಂಚನ

ಬೆಂಗಳೂರು: ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮೂರು ದಿನಗಳ ಮುಂಚಿತವಾಗಿ ಭಾನುವಾರವೆ ಕೇರಳಕ್ಕೆ ಆಗಮಿಸಿದ್ದು, ಜೂನ್ 2 ರ ವೇಳೆಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಇದು ನಾಲ್ಕು ತಿಂಗಳ ಅವಧಿಯ ಸಾಮಾನ್ಯ ಮಳೆಗಾಲದ ಮುನ್ಸೂಚನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳ, ತಮಿಳುನಾಡು, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಭಾರೀ ಮಳೆ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಬೆಳಿಗ್ಗೆ 8.30 ಕ್ಕೆ ದಾಖಲಿಸಿದ ಮಾಹಿತಿಯು ತೋರಿಸಿದೆ. ಕೇರಳದ 14 ಹವಾಮಾನ ಕೇಂದ್ರಗಳಲ್ಲಿ […]

ಭಾರತ@75: ಕರ್ನಾಟಕ ಸಂಸ್ಕೃತಿ ಇಲಾಖೆಯಿಂದ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಅಭಿಯಾನ

ಬೆಂಗಳೂರು: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರದ ‘ಹರ್ ಘರ್ ಝಂಡಾ’ ಕರೆಯನ್ನು ರಾಜ್ಯದಲ್ಲೂ ವಿಸ್ತರಿಸುವ ಪ್ರಕ್ರಿಯೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಗಸ್ಟ್ 9 ರಿಂದ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಒತ್ತಾಯಿಸಿದೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರವು ತನ್ನ ‘ಅಮೃತ ಭಾರತಿಗೆ ಕನ್ನಡದ ಆರತಿ’ ಅಭಿಯಾನದ ಭಾಗವಾಗಿ ‘ಮನೆ ಮನೆಯಲ್ಲಿ ರಾಷ್ಟ್ರಧ್ವಜ’ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಪ್ರತಿ ಮನೆಯಲ್ಲಿಯೂ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ನಾಗರಿಕರು […]

ತಂಡದ ನಾಲ್ವರಿಗೆ ವಿಧಾನ ಪರಿಷತ್ ಟಿಕೆಟ್! ವಿಜಯೇಂದ್ರ ಅವರಿಗೆ ಬೇರೆ ಅವಕಾಶ: ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಇಂದು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನನ್ನ ತಂಡದ ನಾಲ್ಕು ಜನರಿಗೆ‌ ಟಿಕೆಟ್‌ ಸಿಕ್ಕಿದ್ದು‌,‌ ಬಿ.‌ವೈ.ವಿಜಯೇಂದ್ರ ಅವರಿಗೆ ಬೇರೆ ಬೇರೆ ಅವಕಾಶಗಳು ಇವೆ ಎಂದು ಜಗನ್ನಾಥ ಭವನದಲ್ಲಿ ಹೇಳಿದರು. ಕೋರ್ ಕಮಿಟಿ ಸಭೆಯಲ್ಲಿ ವಿಜಯೇಂದ್ರ ಅವರ ಹೆಸರನ್ನು ಸರ್ವ ಸಮ್ಮತಿಯಿಂದ ಶಿಫಾರಸು ಮಾಡಿದ್ದೆವು. ಆದರೆ ಅವರಿಗೆ ಬೇರೆ ಬೇರೆ ಅವಕಾಶಗಳು ಇವೆ. ಹಾಗಾಗಿ ಎಲ್ಲ ಲೆಕ್ಕಾಚಾರಗಳನ್ನು ಹಾಕಿಯೇ […]